ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಆಗ್ರಹ; ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನುವ ಆದಿತ್ಯ ಠಾಕ್ರೆ ಹೇಳಿಕೆ ಅತ್ಯಂತ ಬಾಲಿಶ ಎಂದು ಸೋಮವಾರದಂದು ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೇಳಿದರು.

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕೆನ್ನುವ ಆದಿತ್ಯ ಠಾಕ್ರೆ ಹೇಳಿಕೆ ಅತ್ಯಂತ ಬಾಲಿಶವಾದದ್ದು. ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ? ಎಂ.ಇ.ಎಸ್ ನವರಾಗಲೀ, ಇನ್ಯಾರೇ ಆಗಲಿ ಈ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸುಮ್ಮನಿರಲ್ಲ ಎಂದು ಸಿಎಂ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಮುಂಬೈ| ಬಸ್‌ ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ; 7 ಮಂದಿ ಸಾವು

ಗಡಿ ವಿವಾದ ಇತ್ಯರ್ಥ ಆಗುವವರೆಗೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ವೊರ್ಲಿ ಕ್ಷೇತ್ರದ ಶಾಸಕ ಆದಿತ್ಯ ಠಾಕ್ರೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದರು.

ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಯಿಂದಾಗಿ ಸಂಭ್ರಮಾಚರಣೆ ನಡೆಯುತ್ತಿದೆ. ಮತ್ತೊಂದೆಡೆ, ಬೆಳಗಾವಿಯ ಪರಿಸ್ಥಿತಿಯನ್ನು ನೋಡಿ. ನೆರೆಯ ಈ ಪ್ರದೇಶದಲ್ಲಿ ಮರಾಠಿ ಭಾಷಿಕರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಬೆಳಗಾವಿ ವಿವಾದವನ್ನು ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಮತ್ತು ಗಡಿ ವಿವಾದ ಇತ್ಯರ್ಥವಾಗೋವರೆಗು ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿದ್ದರು.

ಇದನ್ನೂ ನೋಡಿ: ಕಿರು ಸಾಲಗಳಿಂದ ಮುಕ್ತಿ ಹೇಗೆ? ಹೋರಾಟಗಾರ ಬಿಎಂ ಭಟ್‌ ಹೇಳುವುದೇನು? Janashakthi Media

Donate Janashakthi Media

Leave a Reply

Your email address will not be published. Required fields are marked *