ಹುಬ್ಬಳ್ಳಿ: ಮಹಿಳೆಯ ಶವ ಪ್ಯಾಕ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟ ಘಟನೆ ಕೆಎಂಸಿ–ಆರ್‌ಐ ಆಸ್ಪತ್ರೆಯಲ್ಲಿ ಬುಧವಾರ ನಡೆದಿದ್ದು, ಕುಟುಂಬದವರ ಆಕ್ರೋಶಕ್ಕೆ ಕಾರಣವಾಯಿತು.
ರಾಯಚೂರು ಜಿಲ್ಲೆಯ ಲಿಂಗಸಗೂರಿನ ಗದ್ದೆಮ್ಮಾ (52) ಅವರು ಜ.31ರಂದು ಪಿತ್ತಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಎಂಸಿ–ಆರ್‌ಐ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಬುಧವಾರ ಮೃತಪಟ್ಟಿದ್ದರು.
ಇದನ್ನೂ ಓದಿ : ಕಾರ್ಮಿಕ ವಿರೋಧಿ ನೀತಿ ವಿರುದ್ದ ಕಾರ್ಮಿಕ ಸಂಘಟನೆಗಳು; ರೈತ ಸಂಘಟನೆಗಳು ಪ್ರತಿಭಟನೆ
ಶವಾಗಾರದ ಸಿಬ್ಬಂದಿ ಹಣ ನೀಡಿದರಷ್ಟೇ ಮೃತದೇಹ ಪ್ಯಾಕ್ ಮಾಡುವುದಾಗಿ ಪಟ್ಟು ಹಿಡಿದಿದ್ದು, ಫೋನ್ ಪೇ ಮೂಲಕ ಹಣ ಪಾವತಿಸಿಕೊಂಡಿದ್ದಾರೆ’ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈದ್ಯಕೀಯ ಅಧೀಕ್ಷಕರ ನೇತೃತ್ವದಲ್ಲಿ ತಂಡ ರಚಿಸಿದ್ದು, ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ಹೊರಗುತ್ತಿಗೆ ಸಿಬ್ಬಂದಿ ಹಣ ಕೇಳಿರುವ ಆರೋಪ ಕೇಳಿ ಬಂದಿದೆ. ವರದಿಯಾಧರಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಕೆಎಂಸಿ–ಆರ್‌ಐ ಆಸ್ಪತ್ರೆಯ ನಿರ್ದೇಶಕ ಡಾ. ಈಶ್ವರ ಹೊಸಮನಿ ಹೇಳಿದರು.
ಇದನ್ನೂ ನೋಡಿ : ಕಾರ್ಮಿಕ–ರೈತ- ಕೂಲಿಕಾರರ ಮಹಾ ಹೋರಾಟ – ದೇಶವ್ಯಾಪಿ ಮುಷ್ಕರಕ್ಕೆ ಭಾರೀ ಸ್ಪಂದನೆ Janashakthi Media
