ಯಲಬುರ್ಗಾ |ಎಲ್ಲಾ ಹಳ್ಳಿಗಳಿಗೆ ಸಮರ್ಪಕವಾಗಿ ಬಸ್ ಬಿಡಲು ಆಗ್ರಹಿಸಿ ಎಸ್.ಎಫ್.ಐ ಪ್ರತಿಭಟನೆ

ಯಲಬುರ್ಗಾ : ತಾಲೂಕಿನ ವಿವಿಧ ಗ್ರಾಮೀಣ ಭಾಗದ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಶಾಲಾ ಕಾಲೇಜುಗಳಿಗೆ ಯಲಬುರ್ಗಾ ನಗರಕ್ಕೆ ಪ್ರತಿನಿತ್ಯ ಬರುತ್ತಿದ್ದು, ಆದರೆ ಶಾಲಾ ಕಾಲೇಜುಗಳ ಸಮಯಕ್ಕೆ ಸರಿಯಾಗಿ ಸಮರ್ಪಕವಾಗಿ ಬರದೇ ಇದ್ದಿದ್ದರಿಂದ ಹಲವಾರು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಆಗ್ರಹಿಸಿದರು.

ಇದನ್ನೂ ಓದಿ : ಹಾಸ್ಟೆಲ್ ಮುಂದೆ ಬಸ್ ನಿಲ್ಲಿಸದ ಸಾರಿಗೆ ಸಿಬ್ಬಂದಿಗಳ ಮೇಲೆ ಕ್ರಮಜರುಗಿಸಿ: ವಿದ್ಯಾರ್ಥಿನಿಯರ ಆಗ್ರಹ

ಪ್ರತಿಭಟನೆಯನ್ನೂದ್ದೇಶಿಸಿ ಮಾತನಾಡಿದ ಕೊಪ್ಪಳಎಸ್.ಎಫ್.ಐ ಜಿಲ್ಲಾ ಕಾರ್ಯದರ್ಶಿ ಬಾಲಾಜಿ ಚಳ್ಳಾರಿ ಮಾತನಾಡಿ  ತಾಲೂಕಿನ ಶಾಸಕರು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು ಗಳು ವಿದ್ಯಾರ್ಥಿಗಳ ಗೋಳನ್ನು ಕೇಳದೆ ಕೂತಿದ್ದರಿಂದ ವಿದ್ಯಾರ್ಥಿಗಳು ಶಾಲಾ-ತರಗತಿಗಳ ಬಹಿಷ್ಕಾರಗೊಳಿಸಿ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಈ ಕೂಡಲೇ ತಾವುಗಳು ಎಚ್ಚೆತ್ತುಕೊಂಡು ಸಮರ್ಪಕವಾಗಿ ತಾಲೂಕಿನ ಎಲ್ಲಾ ಹಳ್ಳಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಒದಗಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಸ್ತೆ ತಡೆದು ಉಗ್ರ ಹೋರಾಟ ಮಾಡುವಲಾಗುವುದೆಂದು ಆಗ್ರಹಿಸಿ ಪ್ರತಿಭಟನೆಯ ಮೂಲಕ ಸಾರಿಗೆ ಘಟಕ ವ್ಯವಸ್ಥಾಪಕರಿಗೆ  ಮನವಿ ಸಲ್ಲಿಸಿದರು.

ತಾಲೂಕ ಮುಖಂಡರಾದ ರಾಮೂರ್ತಿ, ಯಮನೂರ ಮುಜವರ, ಹೋರಾಟವನ್ನು ಬೆಂಬಲಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಾಲಾಜಿ ಚಳ್ಳಾರಿ ಜಿಲ್ಲಾ ಕಾರ್ಯದರ್ಶಿ ಜಿಲ್ಲಾ ಉಪಾಧ್ಯಕ್ಷರಾದ ಶರೀಫ್ ಎಂ. ಪಿ  ಮುಖಂಡರಾದ ರಮೂರ್ತಿ, ಯಮನೂರ ಮುಜವರ, ವಿದ್ಯಾರ್ಥಿಗಳಾದ, ಕಿಟ್ಟಪ್ಪ, ಬಸವರಾಜ್, ಅನು ಆಗೋಲಿ,, ಅಶ್ವಿನಿ, ಅಮೃತ ,ರಾಮು ಪಟೇಲ್ ನವೀನ್ ಮತ್ತು ಐದು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ನೋಡಿ : ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಕೆಪಿಎಸ್ ವ್ಯವಸ್ಥೆ ಪರಿಹಾರವೋ? ಶಾಪವೋ? Janashakthi Media

Donate Janashakthi Media

Leave a Reply

Your email address will not be published. Required fields are marked *