ಬೆಂಗಳೂರು | ಸ್ಕೀಂ ನೌಕರರ ಬೇಡಿಕೆ ಈಡೇರಿಕೆಗೆ ಕೇಂದ್ರ ಸಚಿವೆ ಅನ್ನಪೂರ್ಣದೇವಿ ಭರವಸೆ -ಎಸ್ ವರಲಕ್ಷ್ಮಿ

ಬೆಂಗಳೂರು, ಡಿ.5: ಕ್ರೇಂದ್ರ ಸರ್ಕಾರ ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಅನ್ನಪೂರ್ಣದೇವಿ ಭರವಸೆ ನೀಡಿದ್ದಾರೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್‌ ವರಲಕ್ಷ್ಮಿ  ತಿಳಿಸಿದ್ದಾರೆ. ಬೆಂಗಳೂರು

ಶುಕ್ರವಾರ ನಗರದ ಪ್ರೆಸ್ ಕ್ಲಬ್‌ನಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ, ಅಕ್ಷರ ದಾಸೋಹ ನೌಕರರ ಸಂಘ, ಆಶಾ ಕಾರ್ಯಕರ್ತೆರ ಸಂಘ ಜಂಟಿಯಾಗಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ಅಂಗನವಾಡಿ, ಬಿಸಿಯೂಟ, ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಪೂರೈಸಲು 2026ರ ಫೆಬ್ರವರಿಯಲ್ಲಿ ನಡೆಯಲಿರುವ ಕೇಂದ್ರ ಬಜೆಟ್ ಅಧಿವೇಶನದವರೆಗೆ ಕಾಯುತ್ತೇವೆ. ಬಜೆಟ್‌ನಲ್ಲಿ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳದಿದ್ದರೆ , ಉಗ್ರವಾದ ಹೋರಾಟಗಳು ಭುಗಿಲೇಳಲಿವೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಹಾವೇರಿ | ವಿಜ್ಞಾನ ವಸ್ತು ಪ್ರದರ್ಶನ : ಗಮನಸೆಳೆದ ವಿದ್ಯಾರ್ಥಿಗಳು ತಯಾರಿಸಿದ ವಿದ್ಯುತ್​​ ಚಾಲಿತ ಟ್ರ್ಯಾಕ್ಟರ್​

ಸುಮಾರು 40 ಸಾವಿರ ಅಂಗನವಾಡಿ, ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆಯರು ಡಿ.1 ರಿಂದ ರಾಜ್ಯದಲ್ಲಿರುವ ಕೇಂದ್ರ ಸಚಿವರ ನಿವಾಸಗಳ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದರು. ಬೆಂಗಳೂರು, ಮಂಡ್ಯ, ತುಮಕೂರು ಹಾಗೂ ಹುಬ್ಬಳ್ಳಿಯಲ್ಲಿ ಧರಣಿಗಳು ಆರಂಭಗೊಂಡಿದ್ದವು. ನಮ್ಮ ಹೋರಾಟಕ್ಕೆ ಸ್ಪಂದಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಡಿ.3 ರಂದು ದಿಲ್ಲಿಯಲ್ಲಿ ಕೇಂದ್ರ ಸಚಿವೆ ಅನ್ನಪೂರ್ಣದೇವಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ನೇತೃತ್ವದಲ್ಲಿ ಸಭೆ ನಡೆಸಿದರು ಎಂದು ಎಸ್ ವರಲಕ್ಷ್ಮಿ ಸುದ್ದಿಗೋಷ್ಠಿಯಲ್ಲಿ  ಮಾಹಿತಿ ನೀಡಿದರು.

ಸಭೆಯಲ್ಲಿ ಕೇಂದ್ರ ಸಚೀವರಾದ ಧರ್ಮೇಂದ್ರ ಪ್ರಧಾನ್ ಮತ್ತು ಅನ್ನಪೂರ್ಣದೇವಿ ಅವರ ಮುಂದೆ ಕೇಂದ್ರ ಸರಕಾರವು 2009 ರಿಂದ ಬಿಸಿಯೂಟ ನೌಕರರು ಮತ್ತು 2018 ರಿಂದ ಅಂಗನವಾಡಿ, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡಿಲ್ಲ. ವೇತನ ಹೆಚ್ಚಳ ಮಾಡಬೇಕು, ಬಿಸಿಯೂಟ ನೌಕರರಿಗೆ 12 ತಿಂಗಳೂ ವೇತನ ನೀಡಬೇಕು, ಅವರ ಕೆಲಸವನ್ನು ಕಾಯಂ ಗೊಳಿಸಬೇಕು, ಅಂಗನವಾಡಿ ನೌಕರರಿಗೆ ಇರುವ ಫೇಸ್ ರೆಕಗ್ನೈಸೇಷನ್  ಸಿಸ್ಟಮ್ (ಎಫ್‌ಆರ್‌ಎಸ್) ರದ್ದು ಹಿಂಪಡೆಯಬೇಕು, ಅಂಗನವಾಡಿ ಮಕ್ಕಳು ಮತ್ತು ಮಹಿಳೆಯರಿಗೆ ಸಿದ್ದ ಆಹಾರವನ್ನು ಪೂರೈಕೆ ಮಾಡಬಾರದು ಎಂಬ ಹಕ್ಕೊತ್ತಾಯಗಳನ್ನು ಮುಂದಿಟ್ಟಿದ್ದೇವೆ ಎಂದು ಅವರು ಹೇಳಿದರು. ಬೆಂಗಳೂರು

ಸಚಿವರ ಭರವಸೆಯಂತೆ ನಮ್ಮ ಹೋರಾಟವನ್ನು ಮುಂದೂಡಿದ್ದೇವೆ. ನಮ್ಮ ಬೇಡಿಕೆಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ.  2026ರ ಫೆಬ್ರವರಿಯಲ್ಲಿ ಮಂಡನೆಯಾಗುವ ಕೇಂದ್ರ ಬಜೆಟ್ ವರೆಗೆ ಕಾಯುತ್ತೇವೆ. ಬಜೆಟ್‌ನಲ್ಲಿ ನಮ್ಮ ಬೇಡಿಕೆಗಳ ಈಡೇರಿಕೆಗೆ ಸರಕಾರವು ಕ್ರಮ ಕೈಗೊಳ್ಳದಿದ್ದರೆ, ಮುಂದಿನ ಹೋರಾಟದ ಕುರಿತು ನಿರ್ಧರ ತೆಗೆದುಕೊಳ್ಳುತ್ತೇವೆ ಎಂದು ಎಸ್ ವರಲಕ್ಷ್ಮಿ  ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಸುನಂದ, ರಾಜ್ಯ ಬಿಸಿಯೂಟ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತ ಮತ್ತು ಖಜಾಂಚಿ ಮಹದೇವಮ್ಮ, ರಾಜ್ಯ ಆಶಾ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ಯಮುನಾ ಗಾಂವ್ಕರ್, ಟಿ.ಲೀಲಾವತಿ ಉಪಸ್ಥಿತರಿದ್ದರು.

ಇದನ್ನೂ ನೋಡಿ : ಕೇಂದ್ರ ಸರಕಾರದ ವಿರುದ್ಧ ಬೀದಿಗಿಳಿದ ಅಂಗನವಾಡಿ, ಆಶಾ, ಬಿಸಿಯೂಟ ನೌಕರರು Janashakthi Media

 

Donate Janashakthi Media

Leave a Reply

Your email address will not be published. Required fields are marked *