ಬೆಂಗಳೂರು: ಪ್ರಜಾಪ್ರಭುತ್ವ, ನೀತಿ-ನಿಯಮಗಳು ಹಾಗೂ ಸಂವಿಧಾನವನ್ನು ರಕ್ಷಿಸಿ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ಅಂಕಣಕಾರ ಎಚ್.ಕೆ. ವಿವೇಕಾನಂದ ಹೇಳಿದರು. ತ್ಯಾಗರಾಜನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ನಡಿಗೆದಾರರ ಸಂಘದ ವತಿಯಿಂದ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತದ ಸಂವಿಧಾನ ಮತ್ತು ಕಾನೂನು ವ್ಯವಸ್ಥೆ ವಿಶ್ವದಲ್ಲೇ ಶ್ರೇಷ್ಠವಾಗಿದೆ. ಆದರೆ ಆಡಳಿತಗಾರರ ಧೋರಣೆಗಳಿಂದ ಸಂವಿಧಾನದ ಆಶಯಗಳಿಗೆ ಧಕ್ಕೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವ
ಅಪರಾಧಿಗಳು ಕಾನೂನಿನ ಹಿಡಿತದಿಂದ ಸುಲಭವಾಗಿ ತಪ್ಪಿಸಿಕೊಳ್ಳುತ್ತಿರುವುದು, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ನ್ಯಾಯ ಸಿಗದಿರುವುದು ಕಳವಳಕಾರಿ ಬೆಳವಣಿಗೆ ಎಂದರು. ಕಾನೂನು ವ್ಯವಸ್ಥೆಯಲ್ಲಿ ಧಾರ್ಮಿಕ ಪ್ರಭಾವ ಹೆಚ್ಚುತ್ತಿರುವ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದರು. ದೇಶದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದ್ದು, ಕೆಲವು ಸರ್ಕಾರಿ ಅಧಿಕಾರಿಗಳು ಅದನ್ನೇ ಹಕ್ಕು ಎಂಬಂತೆ ಪರಿಗಣಿಸಿದ್ದಾರೆ. ಇಂತಹ ಅಧಿಕಾರಿಗಳಿಗೆ ಆಡಳಿತಗಾರರ ಬೆಂಬಲವೂ ಸಿಗುತ್ತಿರುವುದು ದೇಶದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂದು ಟೀಕಿಸಿದರು. ಪ್ರಜಾಪ್ರಭುತ್ವ
ಇದನ್ನೂ ಓದಿ: ಅಗೆಯುವ ಅಭಿಯಾನಕ್ಕೆ ಸದ್ಯಕ್ಕೆ ತಡೆ
ಸಮಾಜದಲ್ಲಿ ಜಾಗೃತಿ ಮೂಡಿಸಬೇಕಾದ ಮಾಧ್ಯಮಗಳು ಟಿಆರ್ಪಿ ಹಿಂದೆ ಬಿದ್ದು ಅನಗತ್ಯ ವಿಚಾರಗಳಿಗೆ ಹೆಚ್ಚು ಆದ್ಯತೆ ನೀಡುತ್ತಿರುವುದು ದುರಂತ ಎಂದು ಹೇಳಿದರು. ವೈದ್ಯಕೀಯ ಕ್ಷೇತ್ರದಲ್ಲಿ ಅನಗತ್ಯ ಚಿಕಿತ್ಸೆ ಮೂಲಕ ಹಣ ವಸೂಲಿ ಮಾಡುವ ಪ್ರವೃತ್ತಿ ಹಾಗೂ ಖಾಸಗಿ ಶಾಲೆಗಳು ಶಿಕ್ಷಣಕ್ಕಿಂತ ಹಣ ಗಳಿಕೆಗೆ ಆದ್ಯತೆ ನೀಡುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಇಂತಹ ವ್ಯವಸ್ಥೆಗಳ ವಿರುದ್ಧ ಸಾರ್ವಜನಿಕರು ಧ್ವನಿ ಎತ್ತಿ ಪ್ರಶ್ನಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ್, ನಾಗರಾಜ ಕೆ.ಎಸ್., ಬಿಬಿಎಂಪಿ ಮಾಜಿ ಸದಸ್ಯ ತಿಮ್ಮೇಗೌಡ, ಗಿರಿವಾಸಲು ನಾಯ್ಡು, ಕೆಎಸ್ಸಿಎ ಕಾರ್ಯದರ್ಶಿ ಬಿ.ಕೆ. ರವಿ, ವಕೀಲ ಪರಮೇಶ್ವರ್, ಪತ್ರಕರ್ತ ಗುರುರಾಜ ದೇಸಾಯಿ, ಸಂಘದ ಸ್ಥಾಪಕ ಅಧ್ಯಕ್ಷ ಪ್ರಭಾಕರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಿಳಿಗಿರಿ ವಾಸನ್ ಕಾರ್ಯಕ್ರಮ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಮಾಧ್ಯಮ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರನ್ನು ಸನ್ಮಾನಿಸಲಾಯಿತು. ಪ್ರಜಾಪ್ರಭುತ್ವ
ಇದನ್ನೂ ನೋಡಿ: ಎಸ್ಐಆರ್ | ಮತದಾರರ ಪಟ್ಟಿ ಅಂತಿಮ: 99.32 ಲಕ್ಷ ಹೆಸರು ಡಿಲೀಟ್! ಗುರುರಾಜ ದೇಸಾಯಿ
