ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಪತ್ತೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ಈ ವರ್ಷ ಈಗಾಗಲೇ 87 ಸಾವಿರಕ್ಕೂ ಅಧಿಕ ಡೆಂಗ್ಯೂ ಶಂಕಿತರನ್ನು ತಪಾಸಣೆಗೆ ಒಳಪಡಿಸಿದ್ದು, ಈ ಪೈಕಿ 39 ಸಾವಿರಕ್ಕೂ ಅಧಿಕ ಮಂದಿಯ ರಕ್ತದ ಮಾದರಿ ಪರೀಕ್ಷೆ ಮಾಡಲಾಗಿದೆ. ಈವರೆಗೆ ವರದಿಯಾದ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 4,886ಕ್ಕೆ ತಲುಪಿದೆ. ಕಳೆದ ತಿಂಗಳು ಈ ವೇಳೆ ಒಟ್ಟು 2,877 ಪ್ರಕರಣಗಳು ವರದಿಯಾಗಿದ್ದವು.
ಬೆಂಗಳೂರಿನಲ್ಲಿ ಡೆಂಗ್ಯೂ ರೋಗ ಹೆಚ್ಚುತ್ತಿದ್ದು, ಇಲ್ಲಿನ ಜನರಲ್ಲಿ ಆತಂಕ ಮೂಡಿಸಿದೆ. ಇತ್ತೀಚೆಗೆ ಸುರಿದ ಮಳೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ ಎನ್ನಲಾಗುತ್ತಿದೆ.
ಇದನ್ನು ಓದಿ : 48 ಗಂಟೆಗಳಲ್ಲಿ ಬಾರಿ ಮಳೆಯಾಗುವ ಸಾಧ್ಯತೆ; ಹವಮಾನ ಇಲಾಖೆ
2023ರಲ್ಲಿ 16,500ಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದ್ದವು. 9 ಮಂದಿ ಮೃತಪಟ್ಟಿದ್ದರು ಎಂದು ವರದಿ ತಿಳಿಸಿದೆ. ಜೂನ್ ಬಳಿಕ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆಯಾಗಿತ್ತು. ಈ ವರ್ಷವೂ ಜೂನ್‌ನಲ್ಲಿ ಏರಿಕೆ ಕಂಡುಬಂದಿರುವುದು ಬೆಂಗಳೂರಿಗರಲ್ಲಿ ಆತಂಕ ಮೂಡಿಸಿದೆ.
ಇದನ್ನು ನೋಡಿ : ನಿರಂಜನ 100 : ಬದುಕು ಬರಹ ಕುರಿತು ಮಹಾಂತೇಶ್ ಜೀವಣ್ಣವರ್ ಮಾತುಗಳು Janashakthi Media