ಬೆಂಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ | 2000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ಕರ್ನಾಟಕದಾದ್ಯಂತ ಡೆಂಗ್ಯೂ ಪ್ರಕರಣಗಳು ಗಂಭೀರ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಒಂದು ಸಾವು ಸಂಭವಿಸಿದೆ. ಡೆಂಗ್ಯೂ ಪಾಸಿಟಿವ್ ಪ್ರಕರಣಗಳು 2000ದ ಗಡಿ ದಾಟುವ ಸನಿಹದಲ್ಲಿದೆ. ಹೀಗಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಮನೆಯ ಮಟ್ಟದಲ್ಲೂ ತೆಗೆದುಕೊಳ್ಳುವಂತೆ ಬಿಬಿಎಂಪಿ ಜನರನ್ನು ಕೇಳಿಕೊಂಡಿದೆ. ಡೆಂಗ್ಯೂ

ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಿಸಲು ಬಿಬಿಎಂಪಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಕುರಿತುಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು, ಸೋಂಕು ನಿವಾರಣೆ ಕುರಿತಂತೆ ಆರೋಗ್ಯ ಇಲಾಖೆಯೊಂದಿಗೆ ನಾವು ಸತತ ಸಂಪರ್ಕದಲ್ಲಿದ್ದೇವೆ ಅವರ ನೆರವಿನೊಂದಿಗೆ ಸೋಂಕು ನಿವಾರಣೆ ಮಾಡಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಪ್ರತಿ ವರ್ಷ ಜೂನ್ ನಿಂದ ಆಗಸ್ಟ್ ಸೆಪ್ಟೆಂಬರ್ ವರೆಗೆ ಡೆಂಗ್ಯೂ ಪ್ರಕರಣಗಳು ದಾಖಲಾಗುತ್ತೆ ಅದು ಪೀಕ್ ಆಗೋದು ಸೆಪ್ಟೆಂಬರ್ ನಲ್ಲಿ. ಆದರೆ, ಈ ಬಾರಿ ಜೂನ್ ನಲ್ಲೇ ಪೀಕ್ ಗೆ ಹೋಗಿದೆ ಇದರಿಂದ ಸಮಸ್ಯೆ ಉಲ್ಬಣಗೊಂಡಿದೆ ಎಂದು ಮಾಹಿತಿ ನೀಡಿದರು.

ಕಳೆದ ವರ್ಷ ಜೂನ್ ನಲ್ಲಿ ಕೇವಲ 750 ಪ್ರಕರಣಗಳು ದಾಖಲಾಗಿದ್ದವು. ಆದರೆ, ಈ ಬಾರಿ ಅದರ ಸಂಖ್ಯೆ ಎರಡು ಸಾವಿರ ದಾಟಿದೆ. ಹಾಗಾಗಿ ನಾವು ತಂಡಗಳನ್ನು ರಚನೆ ಮಾಡಿ ಜನರನ್ನು ಜಾಗತಿಗೊಳಿಸುವ ಕೆಲಸ ಮಾಡುತ್ತಿದ್ದೇವೆ. ಕ್ಯಾಂಪೇನಿಂಗ್ ನಡೆಸಲಾಗುತ್ತಿದೆ, ಮನೆ ಮನೆಗೆ ತೆರಳಿ ಕರಪತ್ರ ಹಂಚಿ ತಿಳುವಳಿಕೆ ನೀಡುತ್ತಿದ್ದೇವೆ.ಬಸ್ ಸ್ಟ್ಯಾಂಡ್ ಜಾಹೀರಾತುಗಳನ್ನು ಹಾಕಲಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿಡೆಂಗ್ಯೂ ಪತ್ತೆಗೆ ಬಿಬಿಎಂಪಿಯಿಂದ ಮನೆಮನೆ ಸಮೀಕ್ಷೆ

ಬಿಬಿಎಂಪಿ ತಂಡದಿಂದ ಮನೆ ಮನೆಗೆ ಭೇಟಿ, ಜಾಗೃತಿ ಅಭಿಯಾನ

ಬಿಬಿಎಂಪಿ ಅಧಿಕಾರಿಗಳ ತಂಡ ಮನೆ-ಮನೆ ಭೇಟಿ ನೀಡಿ ಈಡೀಸ್, ಈಜಿಪ್ಟೈ ಎಂಬ ಸೊಳ್ಳೆಗಳಿಂದ ಡೆಂಗ್ಯೂ ರೋಗ ಹರಡುತ್ತದೆ. ಆದ್ದರಿಂದ ನೀರಿನ ಸಂಪ್, ಡ್ರಮ್, ಕೊಳಾಯಿ ಬಳಿ, ಹೂವಿನ ಕುಂಡ ಸೇರಿದಂತೆ ಇನ್ನಿತರೆ ಕಡೆ ಪರಿಶೀಲಿಸಿ ವಾರಕ್ಕೊಮ್ಮೆ ಎಲ್ಲಾ ಕಡೆ ನೀರನ್ನು ಹೊರ ಹಾಕಿ ಒಣಗಿಸಿ ಮತ್ತೆ ಶುದ್ಧ ನೀರು ಸಂಗ್ರಹಿಸಿ. ವಾರಕ್ಕಿಂತ ಹೆಚ್ಚು ದಿನ ಒಂದೇ ನೀರು ಸಂಗ್ರಹವಾಗಿದ್ದರೆ ಲಾರ್ವಾ ಉತ್ಪತ್ತಿಯಾಗಿ ಸೊಳ್ಳೆಗಳು ಹೆಚ್ಚಾಗುತ್ತವೆ. ಈ ನಿಟ್ಟಿನಲ್ಲಿ ವಾರಕ್ಕೊಮ್ಮೆ ತಪ್ಪದೆ ಹಳೆ ನೀರು ತೆಗೆದು ಹೊಸ ನೀರು ತುಂಬಿಸಿಕೊಳ್ಳಲು ನಾಗರಿಕರಲ್ಲಿ ಅಧಿಕಾರಿಗಳು ಮನವಿ ಮಾಡಿದರು.

ಸೋಂಕಿನಿಂದ ಮತ್ತಿಬ್ಬರು ಸಾವು : ಈ ನಡುವೆ ಡೆಂಗ್ಯೂ ಸೋಂಕಿಗೆ ರಾಜ್ಯದಲ್ಲಿ ಮತ್ತಿಬ್ಬರು ಬಲಿಯಾಗಿದ್ದಾರೆ. ಹೊಸಪೇಟೆಯ ವಡ್ಡರಹಟ್ಟಿ ಗ್ರಾಮದಲ್ಲಿ 45 ವರ್ಷದ ಮಂಜಮ್ಮ ಕರಿಬಸಪ್ಪ ಹಾಗೂ ಹಾಸನದಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಡೆಂಗ್ಯೂವಿನಿಂದ ಮೃತಪಟ್ಟಿದ್ದಾರೆ.

ವಿಜಯನಗರ ಜಿಲ್ಲೆಯಲ್ಲಿ ಒಟ್ಟು 21 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇನ್ನು ಹಾಸನ ಜಿಲ್ಲೆಯಲ್ಲಿ 200ಕ್ಕೂ ಹೆಚ್ಚು ಮಂದಿ ಡೆಂಗ್ಯೂವಿನಿಂ ಬಳಲುತ್ತಿದ್ದಾರೆ. ವೈರಸ್ ಹರಡುವುದನ್ನು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಆಡಳಿತಕ್ಕೆ ಆರೋಗ್ಯ ಇಲಾಖೆಗೆ ಸೂಚನೆ ನೀಡಿದೆ.

 

Donate Janashakthi Media

Leave a Reply

Your email address will not be published. Required fields are marked *