ಬೆಂಗಳೂರು: ಭಾರತ ಸರ್ಕಾರವು ಡೆಂಗಿ ಪ್ರಕರಣಗಳಲ್ಲಿ Case fatality rate ಅಂದರೆ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು ನಿಗದಿ ಪಡಿಸಿದ್ದು, ಕರ್ನಾಟಕದಲ್ಲಿ ರಾಜ್ಯದಲ್ಲಿ ಮರಣ ಪ್ರಮಾಣ (Case fatality rate) 0.09% ರಷ್ಟು ಇದೆ. ಕಳೆದ ಸೋಮವಾರ ಜೂನ್ 24ರವರೆಗೆ ರಾಜ್ಯದಲ್ಲಿ ಒಟ್ಟು 5374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ.ದಿನದಿಂದ ದಿನಕ್ಕೆ ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರನ್ನು ಬಾಧಿಸುತ್ತಿದೆ.ಕರ್ನಾಟಕ
ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಡೆಂಘಿ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಅಗತ್ಯ ಚಿಕಿತ್ಸೆ, ಚುಚ್ವುಮದ್ದು, ಪ್ಲೇಟ್ ಲೆಟ್ಸ್ ಗಳ ಸಂಗ್ರಹಕ್ಕೆ ಮುಂದಾಗುವಂತೆ ಆರೋಗ್ಯ ಸಚಿವರು ಮತ್ತು ಆರೋಗ್ಯ ಇಲಾಖಾಧಿಗಳಿಗೆ ಸೂಚಿಸಿದ್ದು ಜನರಲ್ಲಿ ಈ ಕುರಿತು ಇನ್ನೂ ಹೆಚ್ಚಿನ ಜಾಗೃತಿ ಅರಿವು ಆರೋಗ್ಯದತ್ತ ಕಾಳಜಿ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ.ಕರ್ನಾಟಕ
ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ.ಬಿಬಿಎಂಪಿ ವ್ಯಾಪ್ತಿಯಲ್ಲಿ 1230 ಪ್ರಕರಣಗಳು ವರದಿಯಾಗಿವೆ.ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ನಿಯಂತ್ರಣಕ್ಕೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಇದನ್ನು ಓದಿ : ಪೆಟ್ರೋಲ್ ದರ ಏರಿಕೆ ಮತ್ತು ಜಿಜೆಪಿ ನಾಯಕರ ಕಪಟತನದ ಪ್ರತಿಭಟನೆ
ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಲು ಸೂಚಿಸಲಾಗಿದೆ.ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಎನ್.ಎಸ್.ಎಸ್. ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆಮನೆ ಸಮೀಕ್ಷೆ ನಡೆಸಿ ಅರಿವು ಮೂಡಿಸಲು ಸೂಚಿಸಲಾಗಿದೆ.
ಪ್ರತಿ ಶುಕ್ರವಾರ source reduction activity (ರೋಗ ಹರಡುವ ಮೂಲ ಪತ್ತೆ ಮತ್ತು ನಾಶ) ವಿಶೇಷ ಅಭಿಯಾನ ಮಾಡಲಾಗುವುದು. ಪ್ರತಿ ವಾರ ಬಿಬಿಎಂಪಿ, ನಗರಾಭಿವೃದ್ಧಿ ಮತ್ತು ಆರೋಗ್ಯ ಇಲಾಖೆಯವರು ಜಂಟಿಯಾಗಿ ಡೆಂಘಿ ನಿಯಂತ್ರಣ ಕುರಿತು ಪರಿಶೀಲನೆ ನಡೆಸಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ ಅಲ್ಲದೇ ಸ್ವಚ್ಛತೆ ಹಾಗೂ ನೀರು ನಿಲ್ಲದಂತೆ ನಗರ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ
ಡೆಂಘಿ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕಾರ ನೀಡುವುದು ಅತಿ ಅಗತ್ಯ.ಡೆಂಘಿ ಈಡಿಸ್ ಈಜಿಪ್ಟೈ ಎಂಬ ಸೊಳ್ಳೆಯಿಂದ ಹರಡುತ್ತದೆ. ಇದರ ಲಾರ್ವಾ ಮತ್ತು ಮೊಟ್ಟೆಗಳನ್ನು ಮೂಲದಲ್ಲಿಯೇ ನಾಶ ಮಾಡಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಅರಿವು ಮೂಡಿಸಲು ಸೂಚಿಸಲಾಗಿದೆ. ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ಸಿಎಂ ಮಂಗಳವಾರ ಸಭೆ ನಡೆಸಿದರು.
ಇದನ್ನು ನೋಡಿ : ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ ಯುಕೆಜಿ ಪ್ರಾರಂಭಿಸಿ – ತಜ್ಞರ ಆಗ್ರಹ Janashakthi Media