ಮುಸ್ಲಿಂ ವ್ಯಾಪಾರಿಗಳಿಗೆ ಅನುಮತಿ ನಿರಾಕರಣೆ; ಜಾತ್ರೆ ವ್ಯಾಪಾರಸ್ಥರ ಸಮಿತಿಯಿಂದ ಪ್ರತಿಭಟನೆ

ಮಂಗಳೂರು: ಬಿಜೆಪಿ ಸರಕಾರದ ಕಾಲಕ್ಕಿಂತಲೂ ಕಟುವಾದ ಪರಿಸ್ಥಿತಿ ನಿರ್ಮಾಣ ಆಗಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರ ನೀಡಿರುವ ಅನೇಕ ಗ್ಯಾರೆಂಟಿಗಳಂತೆ ಜಾತ್ರೆ ವ್ಯಾಪಾರಿಗಳಿಗೆ ಬದುಕುವ ಗ್ಯಾರೆಂಟಿ ಕೊಡಬೇಕು ಎಂದು ಡಿವೈಎಫ್‌ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಹೇಳಿದ್ದಾರೆ. ”ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿ” ಮತ್ತು “ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ” ಶುಕ್ರವಾರ ನಗರದ ಪುರಭವನದ ಬಳಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡುತ್ತಿದ್ದರು. ಮುಸ್ಲಿಂ ವ್ಯಾಪಾರಿಗಳಿಗೆ ಅನುಮತಿ ನಿರಾಕರಣೆ; ಜಾತ್ರೆ ವ್ಯಾಪಾರಸ್ಥರ ಸಮಿತಿಯಿಂದ ಪ್ರತಿಭಟನೆ

ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವದ ವೇಳೆ ಜಾತ್ರೆ ವ್ಯಾಪಾರ ಮಾಡುವ ವ್ಯಾಪಾರಿಗಳಗೆ ಧರ್ಮದ ನೆಪದಲ್ಲಿ ಜಾಗ ಹಂಚಿಕೆ ನಿರಾಕರಿಸಲಾಗುತ್ತಿದೆ ಎಂದು ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿ ಆರೋಪಿಸಿದೆ. ಈ ಬಗ್ಗೆ ಸಮಿತಿಯು ಜಿಲ್ಲಾಧಿಕಾರಿ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ದೂರು ಕೂಡಾ ನೀಡಿದ್ದು, ವ್ಯಾಪಾರಿಗಳಿಗೆ ಬದುಕುವ ಹಕ್ಕಿನ ರಕ್ಷಣೆ ನೀಡಬೇಕಿದೆ ಎಂದು ಆಗ್ರಹಿಸಿದೆ. ಮುಸ್ಲಿಂ ವ್ಯಾಪಾರಿಗಳಿಗೆ ಅನುಮತಿ ನಿರಾಕರಣೆ; ಜಾತ್ರೆ ವ್ಯಾಪಾರಸ್ಥರ ಸಮಿತಿಯಿಂದ ಪ್ರತಿಭಟನೆ

ಇದನ್ನೂ ಓದಿ: ʼಹೊರಗುತ್ತಿಗೆʼ ಎಂಬ ಜೀತ ಪದ್ದತಿಯಿಂದ ಮುಕ್ತಿಗೊಳಿಸಿ ಹಾಸ್ಟೆಲ್‌ ಅಡುಗೆದಾರರಿಂದ ಅನಿರ್ದಿಷ್ಟ ಮುಷ್ಕರ

ಪ್ರತಿಭಟನೆಯಲ್ಲಿ ಮಾತನಾಡಿದ ಇಮ್ತಿಯಾಝ್, “ಹಿಂದೂ ಧಾರ್ಮಿಕ ಕಾಯಿದೆಯನ್ನು ನಾವು ಗೌರವಿಸುತ್ತೇವೆ. ಅದೇ ಸಮಯದಲ್ಲಿ ಕರ್ನಾಟಕ ಮುನ್ಸಿಪಲ್ ಕಾಯಿದೆ ಮತ್ತು ಬೀದಿಬದಿ ವ್ಯಾಪಾರದ ಕಾಯಿದೆಯ ಉಲ್ಲಂಘನೆ ಮಾಡುವುದನ್ನು ವಿರೋಧಿಸುತ್ತೇವೆ. ಧರ್ಮದ ಹೆಸರಲ್ಲಿ ದ್ವೇಷ ಹರಡಲು ಬಿಡುವುದಿಲ್ಲ” ಎಂದು ಬೀದಿಬದಿ ವ್ಯಾಪಾರಸ್ಥರ ಸಂಘದ ಗೌರವಧ್ಯಕ್ಷರಾದ ಅವರು ಹೇಳಿದರು.

”ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿ”ಯ ಗೌರವಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, “ಧರ್ಮದ ನೆಪವನ್ನಿಟ್ಟು ವ್ಯಾಪಾರದ ಜಾಗ ಹಂಚಿಕೆಯನ್ನು ನಿರಾಕರಿಸಿರುವುದು ಜಾತ್ರೆ ವ್ಯಾಪಾರಿಗಳ ಬದುಕುವ ಹಕ್ಕನ್ನು ಕಸಿದುಕೊಂಡಂತಾಗುತ್ತದೆ. ಅಲ್ಲದೆ, ನಗರದಲ್ಲಿ ಜಾತ್ರೆ ವ್ಯಾಪಾರ ನಡೆಯುವುದು ಪಾಲಿಕೆಗೆ ಸೇರಿದ ಜಾಗದಲ್ಲಾಗಿದ್ದು. ಗುತ್ತಿಗೆ ಪಡೆದವರು ವ್ಯಾಪಾರಿಗಳಿಗೆ ಒಂದು ಅಡಿ ಜಾಗಕ್ಕೆ 7 ಸಾವಿರ ರೂ.ಗಳಷ್ಟು ದರವನ್ನು ವಿಧಿಸುತ್ತಿದ್ದಾರೆ” ಎಂದು  ಆಕ್ರೋಶ ವ್ಯಕ್ತಪಡಿಸಿದರು.

“ದಸರಾ ಎಲ್ಲರೂ ಸೇರಿ ಮಾಡುವಂಥ ನಾಡ ಹಬ್ಬ. ಧರ್ಮದ ಹೆಸರಲ್ಲಿ ಬಡವರ ಹೊಟ್ಟೆಗೆ ಹೊಡೆಯುವುದು ಅಧರ್ಮ. ಸಂಘ ಪರಿವಾರ ಪ್ರಾಯೋಜಿತ ಕೆಲವು ಹಿತಾಸಕ್ತಿಗಳು ಬಡವರ ಮಧ್ಯೆ ದ್ವೇಷ ಹರಡುತ್ತಿದೆ ಶ್ರೀಮಂತರ ಜೊತೆಯಲ್ಲಿ ನೇರ ವ್ಯವಹಾರ ಮಾಡುತ್ತಿದೆ. ಸಂಘ ಪರಿವಾರದ ಕಿಡಿಗೇಡಿ ಕೃತ್ಯಗಳನ್ನು ಕಾಂಗ್ರೆಸ್ ಸರಕಾರ ಮೂಕಪ್ರೇಕ್ಷಕರತೆ ನೋಡುತ್ತಿದೆ. ಮುಸ್ಲಿಮರಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದೆನ್ನಲು ಹಿಂದೂ ಸನಾತನ ಜಾತ್ರೆ ವ್ಯಾಪಾರಿ ಸಂಘಕ್ಕೆ ಯಾವ ಸಂವಿಧಾನಿಕ ಹಕ್ಕಿದೆ” ಎಂದು ಸುನಿಲ್ ಕುಮಾರ್ ಹೇಳಿದ್ದು, ಮುಸ್ಲಿಂ ವ್ಯಾಪಾರಿಗಳಿಗೂ ಜಾತ್ರೆ ವ್ಯಾಪಾರ ನಡೆಸಲು ಹಕ್ಕಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಐಟಿಐ ಘಟಿಕೋತ್ಸವದ ವೇದಿಕೆಯಲ್ಲಿ ಮೋದಿ ಚಿತ್ರ ಮಾತ್ರವೆ ಇರಬೇಕು: ಕೇಂದ್ರ ಸರ್ಕಾರ ಆದೇಶ

ಸಿಪಿಐಮ್ ಜಿಲ್ಲಾ ಕಾರ್ಯದರ್ಶಿ ಕೆ ಯಾದವ ಶೆಟ್ಟಿ, ಸಾಮಾಜಿಕ ಹೋರಾಟಗಾರ್ತಿ ಸಾಮರಸ್ಯ ಸಂಘಟನೆಯ ಮಂಜುಳಾ ನಾಯಕ್, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿದರು. ವಿವಿಧ ಸಂಘಟನೆಗಳ ಮುಖಂಡರಾದ ಮೊಹಮ್ಮದ್ ಮುಸ್ತಫಾ, ಹರೀಶ್ ಪೂಜಾರಿ ಬೋಂದೆಲ್, ಪ್ರವೀಣ್ ಕುಮಾರ್ ಕದ್ರಿ, ಶಿವಪ್ಪ, ಮನೋಜ್ ವಾಮಂಜೂರು, ಯೋಗೀಶ್ ಜಪ್ಪಿನಮೊಗರು, ನವೀನ್ ಕೊಂಚಾಡಿ, ಆಸೀಫ್ ಬಾವ ಉರುಮನೆ, ರಫೀಕ್ ಹರೇಕಳ, ಅಸುಂತ ಡಿಸೋಜಾ, ರಹಿಮಾನ್ ಅಡ್ಯಾರ್, ರಿಯಾಜ್ ಎಲ್ಯರ್ ಪದವು ಸೇರಿದಂತೆ ಹಲವಾರು ಹೋರಾಟಗಾರರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

ಮುಸ್ಲಿಂ ವ್ಯಾಪಾರಿಗಳಿಗೆ ಅನುಮತಿ ನಿರಾಕರಣೆ; ಜಾತ್ರೆ ವ್ಯಾಪಾರಸ್ಥರ ಸಮಿತಿಯಿಂದ ಪ್ರತಿಭಟನೆ denial of permission to Muslim traders; Protest by the fair traders' committee
ಮುಸ್ಲಿಂ ವ್ಯಾಪಾರಿಗಳಿಗೆ ಅನುಮತಿ ನಿರಾಕರಣೆ; ಜಾತ್ರೆ ವ್ಯಾಪಾರಸ್ಥರ ಸಮಿತಿಯಿಂದ ಪ್ರತಿಭಟನೆ

ಮುಸ್ಲಿಂ ವ್ಯಾಪಾರಿಗಳಿಗೆ ಅನ್ಯಾಯ: ಅಪರ ಜಿಲ್ಲಾಧಿಕಾರಿ ಜಿ.ಸಂತೋಷ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಭೆ

ಹಿಂದೂ ಸನಾತನ ಜಾತ್ರೆ ವ್ಯಾಪಾರಸ್ಥರ ಅರ್ಜಿ ಆಧಾರದಲ್ಲಿ ಸಂಘರ್ಷ ನಡೆಯಬಹುದು ಎಂದು ಮುಸ್ಲಿಂ ವ್ಯಾಪಾರಿಗಳಿಗೆ ತಿಳಿಸಿರುವುದನ್ನು ದೇವಸ್ಥಾನದ ಪ್ರತಿನಿಧಿಗಳು ಒಪ್ಪಿಕೊಂಡಿದ್ದು, ಮುಸ್ಲಿಂ ವ್ಯಾಪಾರಿಗಳನ್ನು ಭಯ ಹುಟ್ಟಿಸಿ ವಾಪಸ್ ಕಳುಹಿಸಿರುವ ದೇವಸ್ಥಾನ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಅಪರ ಜಿಲ್ಲಾಧಿಕಾರಿಗಳು ಭದ್ರತೆ ಕೊಟ್ಟು ಎಲ್ಲರನ್ನು ಒಳಗೊಳ್ಳುವಂತ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದ್ದಾರೆ ಎಂದು ವರದಿಯಾಗಿದೆ.

ದೇವಸ್ಥಾನದ ಜಾಗವನ್ನು ಹೊರತುಪಡಿಸಿದ ನಗರಪಾಲಿಕೆ ಜಾಗದಲ್ಲಿ ತುರ್ತು ಟೆಂಡರು ಕರೆದು ನಾಳೆ ಬೆಳಿಗ್ಗೆಯೇ ಬಹಿರಂಗ ಹರಾಜು ಮಾಡಿ ಎಲ್ಲರಿಗೂ ವ್ಯಾಪಾರ ಮಾಡುವಂತಾಗಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮಹಾ ನಗರಪಾಲಿಕೆಗೆ ಜಿಲ್ಲಾಡಳಿತ ಆದೇಶ ನೀಡಿದೆ.

ಸಭೆಯಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತರಾದ (ಕಂದಾಯ) ರೇಖಾ ಶೆಟ್ಟಿ, ಸಹಾಯಕ ಪೊಲೀಸ್ ಆಯುಕ್ತರಾದ ಮಹೇಶ್ ಕುಮಾರ್, ಮಂಗಳಾದೇವಿ ದೇವಸ್ಥಾನದ ಪ್ರತಿನಿಧಿಗಳು, ಬೀದಿಬದಿ ಮತ್ತು ಜಾತ್ರೆ ವ್ಯಾಪಾರಸ್ಥರ ಸಂಘದ ಪ್ರಮುಖರಾದ ಬಿ.ಕೆ ಇಮ್ತಿಯಾಝ್, ಸುನಿಲ್ ಕುಮಾರ್ ಬಜಾಲ್, ಹರೀಶ್ ಪೂಜಾರಿ, ಪ್ರವೀಣ್ ಕುಮಾರ್ ಕದ್ರಿ, ರಿಯಾಜ್, ಶಾಫಿ ಬೆಂಗ್ರೆ, ಆಸೀಫ್ ಬಾವ ಉಪಸ್ಥಿತರಿದ್ದರು.

ವಿಡಿಯೊ ನೋಡಿ: ಕೇಂದ್ರೀಯ ವಿ.ವಿ. ‘ಸತ್ಯನಾರಾಯಣ’ನ ಗುಡಿಯಲ್ಲ – ಹೋರಾಟಗಾರರ ಆಕ್ರೋಶ Janashakthi Media
ಮುಸ್ಲಿಂ ವ್ಯಾಪಾರಿಗಳಿಗೆ ಅನುಮತಿ ನಿರಾಕರಣೆ; ಜಾತ್ರೆ ವ್ಯಾಪಾರಸ್ಥರ ಸಮಿತಿಯಿಂದ ಪ್ರತಿಭಟನೆ  

Donate Janashakthi Media

Leave a Reply

Your email address will not be published. Required fields are marked *