ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಬೆಳ್ಳಂದೂರು, ವೈಟ್ ಫೀಲ್ಡ್ ಬಳಿ ಇರುವ ಜಮೀನು ಡಿನೋಟಿಭಿಕೇಷನ್ ಪ್ರಕರಣದಲ್ಲಿ ಇದೀಗ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಪ್ರಕರಣ ರದ್ದುಕೋರಿ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಸಿಎಂ ಯಡಿಯೂರಪ್ಪಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.
2007-08ರಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ ಬೆಳ್ಳಂದೂರು, ವೈಟ್ ಫೀಲ್ಡ್ ನಲ್ಲಿ 14 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ್ದಾರೆ ಎಂಬುದಾಗಿ ಅವರ ವಿರುದ್ಧ, ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. ಇಂತಹ ಪ್ರಕರಣ ರದ್ದು ಕೋರಿ, ಯಡಿಯೂರಪ್ಪ ಅವರ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಪ್ರಕರಣ ರದ್ದು ಕೋರಿ ಯಡಿಯೂರಪ್ಪನವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ ನ್ಯಾಯಾಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಏಕ ಸದಸ್ಯ ನ್ಯಾಯಪೀಠವು, ಪ್ರಕರಣ ಸಂಬಂಧ ಬಿಎಸ್ ಯಡಿಯೂರಪ್ಪ ಅವರು ಸಲ್ಲಿಸಿರುವಂತ ಪೂರಕ ದಾಖಲೆಗಳು ಸರಿಯಿಲ್ಲ ಎಂಬುದಾಗಿ ತಿಳಿಸಿ, ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟವನ್ನು ಎದುರಿಸುವಂತಾಗಿದೆ.
ಈ ಪ್ರಕರಣ ಹೈಕೋರ್ಟ್ ಅರ್ಜಿ ವಜಾಗೊಳಿಸಿದ ಬೆನ್ನಲ್ಲೇ ಬಿಎಸ್ ವೈ ಬಂಧನಗೊಳಗಾಗುವ ಸಾಧ್ಯತೆಯಿದೆ. ಹುದ್ದೆಯ ಗೌರವ ಕಾಪಾಡಲು ಹಾಗೂ ನಿಪ್ಷಕ್ಷಪಾತ ತನಿಖೆ ನಡೆಸಲು ಸಹಕರಿಸುವಂತೆ ತಮ್ಮ ಸ್ತಾನಕ್ಕೆ ರಾಜೀನಾಮೆ ನೀಡಬೇಕೆಂದು ಕರ್ನಾಟಕ ರಾಷ್ಟ ಸಮಿತಿ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಒತ್ತಾಯಿಸಿದ್ದಾರೆ.