ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೇರಿದಂತೆ 15 ಜನರಿಗೆ ಗಡಿಪಾರು ನೋಟಿಸ್!

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೇರಿದಂತೆ ಚಿಕ್ಕಮಂಗಳೂರು ಜಿಲ್ಲೆಯಿಂದ ಒಟ್ಟು 15 ಜನರಿಗೆ ಗಡಿಪಾರು ನೋಟಿಸ್ ನೀಡಿ, ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.

ವಿಚಾರಣೆಗೆ ಬರುವಂತೆ ಜಿಲ್ಲಾಡಳಿತದಿಂದ ಗಡಿಪಾರು ನೋಟಿಸ್ ಜಾರಿ ಮಾಡಿದ್ದು, ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್, ಬಜರಂಗದಳ ಹಾಸನ ವಿಭಾಗದ ಸಹ ಸಂಯೋಜಕ ಶ್ಯಾಮ್ ವಿ.ಗೌಡ ಮುಸ್ಲಿಂ ಸಂಘಟನೆಯ ನಾಲ್ವರು ಸೇರಿದಂತೆ 15 ಜನರಿಗೆ ಇದೀಗ ಗಡಿಪಾರು ನೋಟಿಸ್ ನೀಡಲಾಗಿದೆ. ಪೊಲೀಸ್ ಕಾಯ್ದೆ 1963ರ ಕಲಂ 58ರ ಅಡಿಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ.

ಇದನ್ನೂ ಓದಿ: ಯುಗಾದಿ–ರಂಜಾನ್: ಸಾಮರಸ್ಯ ಸಂದೇಶ ಸಾರಲು ಬಹುಭಾಷಾ ಕವಿಗೋಷ್ಠಿ ಮಾ. 20ಕ್ಕೆ

ಉಪವಿಭಾಗಾಧಿಕಾರಿ ನಟೇಶ್ ನೋಟಿಸ್ ಜಾರಿ ಮಾಡಿದ್ದಾರೆ. ಗಡಿಪಾರು ಮಾಡುವಂತೆ ಜಿಲ್ಲಾಡಳಿತಕ್ಕೆ ಪೊಲೀಸರು ಪ್ರಸ್ತಾವನೆ ಕಳುಹಿಸಿದ್ದರು. ಮಾರ್ಚ್ 25ರಂದು ವಿಚಾರಣೆಗೆ ಹಾಜರಾಗುವಂತೆ 15 ಜನರಿಗೆ ಸೂಚನೆ ನೀಡಲಾಗಿದೆ ಚಿಕ್ಕಮಂಗಳೂರು ಎಸಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ ಸಾರ್ವಜನಿಕ ಶಾಂತಿಗೆ ಭಂಗ, ನೈತಿಕ ಪೊಲೀಸ್ ಗಿರಿ, ಹಾಗೂ ಕೋಮು ಪ್ರಚೋದನೆ ಹಿನ್ನೆಲೆ 15 ಜನರಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ.

ಇದನ್ನೂ ನೋಡಿ: ಓದು ಕಾರ್ಯಾಗಾರ | ವಿದ್ಯಾರ್ಥಿಗಳ ಕಣ್ಣಲ್ಲಿ ಕುವೆಂಪು Janashakthi Media

Donate Janashakthi Media

Leave a Reply

Your email address will not be published. Required fields are marked *