ಬೆಂಗಳೂರು : ಸಚಿವ ಈಶ್ವರಪ್ಪ ರಾಷ್ಟ್ರದ್ರೋಹಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ನಲಪಾಡ್ ನೇತೃತ್ವದಲ್ಲಿ ಈಶ್ವರಪ್ಪ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಫೆಬ್ರವರಿ 16 ರ ರಾತ್ರಿ ವೇಳೆ, ಸಚಿವ ಈಶ್ವರಪ್ಪ ನಿವಾಸದ ಎದುರು ನೂರಾರು ಸಂಖ್ಯೆಯಲ್ಲಿ ಜಮಾವಣೆಗೊಂಡ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿದರು.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಟರ್ಯಕರ್ತರನ್ನು ಬಂದಿಸಿದರು. ಈ ವೇಳೆ ಪ್ರತಿಭಟನೆಕಾರರು ಮತ್ತು ಪೊಲೀಸರ ನಡುವೆ ಜಟಾಪಟಿ ನಡೆಯಿತು. ಈ ವೇಳೆ ಯುತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹಾಗೂ ಇತರ ಕಾರ್ಯಕರ್ತರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಈಶ್ವರಪ್ಪ ವಿರುದ್ಧ ದೂರು ದಾಖಲು : ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ಸಚಿವ ಈಶ್ವರಪ್ಪ ಹೇಳಿಕೆ ವಿಚಾರವಾಗಿ , ಈಶರಪ್ಪ ವಿರುದ್ದ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಾಪಡ್ ದೂರು ಸಲ್ಲಿಸಿದ್ದಾರೆ.
ಹೈ ಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದ್ದ ಮಹಮ್ಮದ್ ನಲಪಾಡ್ ಗೆ ಯುವ ಕಾಂಗ್ರೇಸ್ ಕಾರ್ಯಕರ್ತರ ಸಾಥ್ ನೀಡಿದರು.
ಬಳಿಕ ಮಾತನಾಡಿದ ನಲಪಾಡ್ ರಾಷ್ಟ್ರಧ್ವಜ ವನ್ನು ತೆಗೆದು ಕೇಸರಿ ಧ್ವಜವನ್ನು ಹಾಕ್ತಿವಿ ಅಂತಾ ಈಶ್ವರಪ್ಪ ಹೇಳಿದ್ದಾರೆ.. ಅದು ಇಂತಹ ಸಮಯದಲ್ಲಿ ಈಶ್ವರಪ್ಪನ ಹೇಳಿಕೆ ಕಾನೂನು ಬಾಹಿರ ಎಂದು ನಲಪಾಡ್ ಆರೋಪಿಸದರು.
ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರನ್ನು ಏಕವಚನದಲ್ಲಿ ಮಾತಾಡಿದ್ದಾರೆ. ಅವರಿಗೆ ವಯಸ್ಸಾಗಿದೆ, ಹೇಗೆ ಮಾತಾಡಬೇಕು ಅಂತಾ ಗೊತ್ತಾಗಲ್ವ. ಈ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ಆಗಿಲ್ಲ ಅಂದ್ರೆ ಕೋರ್ಟ್ ಗೆ ಹೊಗ್ತಿವಿ. ನಾಳೆಯಿಂದ ಕಾಂಗ್ರೆಸ್ ಹೋರಾಟ ಮುಂದುವರೆಯುತ್ತೆ. ಬಿಜೆಪಿ ಪಕ್ಷ ಈಶ್ವರಪ್ಪನ್ನು ಸಚಿವ ಸ್ಥಾನದಿಂದ ಕೆಳಗೆ ಇಳಿಸೋ ತನಕ ನಮ್ಮ ಹೋರಾಟ ನಿಲ್ಲಲ್ಲ ಎಂದು ತಿಳಿಸಿದ್ದಾರೆ.