ಮಂಡ್ಯ: ಅನೇಕ ಶಾಸಕರು ಪಕ್ಷವನ್ನು ತೊರೆಯಲು ಸಿದ್ಧರಾಗಿದ್ದ ಕಾರಣಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಜೆಡಿಎಸ್ ಮತ್ತು ಬಿಜೆಪಿ ನಡುವೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಆರೋಪಿಸಿದ್ದಾರೆ. ಜೆಡಿಎಸ್ ಸೊನ್ನೆ ಆಗದಂತೆ ತಡೆಯಲು ಬೇಕಾಗಿ ದೇವೇಗೌಡ ಅವರು ಈ ನಾಟಕ ಆಡಿದ್ದಾರೆ ಎಂದು ಮಳವಳ್ಳಿಯಲ್ಲಿ ಹೇಳಿದ್ದಾರೆ.
ಮಂಡ್ಯದ ಮಳವಳ್ಳಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, 2018 ರಲ್ಲಿ ಜೆಡಿಎಸ್ 37 ಸ್ಥಾನಗಳನ್ನು ಪಡೆದಿತ್ತು. ಆದರೆ 2023 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳನ್ನಷ್ಟೆ ಗೆದ್ದಿದೆ. ಈ ಚುನಾವಣೆಯಲ್ಲಿ 18 ಸ್ಥಾನಗಳನ್ನು ಜೆಡಿಎಸ್ ಕಳೆದುಕೊಂಡಿದೆ ಎಂದು ಸಭಿಕರಿಗೆ ನೆನಪಿಸಿದರು.
ಇದನ್ನೂ ಓದಿ:ಟಿಪ್ಪು ಕಟೌಟ್ ತೆರವಿಗೆ ಪೊಲೀಸ್ ಇಲಾಖೆ ನೋಟಿಸ್ | ನಮ್ಮ ಕಾರ್ಯಕರ್ತರು ಕಾವಲು ಕಾಯುತ್ತಾರೆ ಎಂದ ಡಿವೈಎಫ್‌ಐ!
“ಅವರು ‘ಶೂನ್ಯ’ ಆಗುತ್ತಾರೆ ಎಂಬ ಭಯದಿಂದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡರು. ಯಾಕೆಂದರೆ ಅನೇಕ ಜೆಡಿಎಸ್ ಶಾಸಕರು ತಮ್ಮ ಪಕ್ಷವನ್ನು ತೊರೆಯಲು ಸಿದ್ಧರಾಗಿದ್ದರು. ಅವರನ್ನು ತಡೆಯಲು ದೇವೇಗೌಡರು ಬಿಜೆಪಿ-ಜೆಡಿ(ಎಸ್) ಮೈತ್ರಿಯ ನಾಟಕವಾಡಿದ್ದಾರೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಲು ಇಷ್ಟಪಡುತ್ತೇನೆ ಎಂದು ದೇವೇಗೌಡರು ಹೇಳಿದ್ದನ್ನು ನೆನಪಿಸಿಕೊಂಡ ಸಿದ್ದರಾಮಯ್ಯ, ಇಂದು ಅವದೇ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ದ್ವಿದಳ ಧಾನ್ಯ, ಮೆಕ್ಕೆಜೋಳ, ಹತ್ತಿ ಬೆಳೆಗೆ 5 ವರ್ಷ ಕನಿಷ್ಠ ಬೆಂಬಲ ಬೆಲೆ – ಕೇಂದ್ರ ಸರ್ಕಾರದ ಪ್ರಸ್ತಾಪ
“ನಾನು ಕೈಮುಗಿದು ಪ್ರಾರ್ಥಿಸುತ್ತೇನೆ, ದಯವಿಟ್ಟು ನಿಮ್ಮ ಪಕ್ಷದ ಜನತಾ ದಳದಿಂದ ‘ಜಾತ್ಯತೀತ’ ಪದವನ್ನು ತೆಗೆದುಹಾಕಿ. ಕೋಮುವಾದಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ನಿಮಗೆ ಇನ್ನು ಮುಂದೆ ಜಾತ್ಯತೀತ ಪದವನ್ನು ಬಳಸುವ ನೈತಿಕ ಹಕ್ಕಿಲ್ಲ” ಎಂದು ಮುಖ್ಯಮಂತ್ರಿ ಜೆಡಿಎಸ್ ಅನ್ನು ಗುರಿಯಾಗಿಸಿಕೊಂಡು ಹೇಳಿದ್ದಾರೆ.
ರಾಜ್ಯದ ಮಹಿಳೆಯರಿಗೆ ಐಷಾರಾಮಿ ಅಲ್ಲದ ಸರ್ಕಾರಿ ಬಸ್‌ಗಳಲ್ಲಿ ಉಚಿತ ಬಸ್ ಪ್ರಯಾಣ ನೀಡುವ ‘ಶಕ್ತಿ’ ಯೋಜನೆ ಸೇರಿದಂತೆ ಐದು ಪ್ರಮುಖ ಭರವಸೆಗಳನ್ನು ಪಕ್ಷವೂ ಈಡೇರಿಸಿದೆ. ಹೀಗಾಗಿ ಮಂಡ್ಯ ಜನತೆ ಕಾಂಗ್ರೆಸ್‌ಗೆ ಮತ ನೀಡುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. ಈ ಶಕ್ತಿ ಯೋಜನೆಯಲ್ಲಿ ಮಹಿಳೆಯರು 155 ಕೋಟಿ ಬಾರಿ ಪ್ರಯಾಣಿಸಿದ್ದಾರೆ ಎಂದು ಅವರು ತಿಳಿಸಿದರು.
ವಿಡಿಯೊ ನೋಡಿ: ದೆಹಲಿ ಚಲೋ’ : ರೈತರ ಮೇಲೆ ಆಶ್ರುವಾಯು ಪ್ರಯೋಗ – ಫೆ 16 ರಂದು ದೇಶವ್ಯಾಪಿ ಪ್ರತಿಭಟನೆ