‘ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ’; ಮೆಟ್ರೋಪೋಲ್ ವೃತ್ತದಲ್ಲಿ ಫ್ಲೆಕ್ಸ್ ಮಾಡಿ ಹಾಕಿದ ಕಾಂಗ್ರೆಸ್

Please follow and like us:
ಮೈಸೂರು : ಮೆಟ್ರೋಪೋಲ್ ವೃತ್ತದಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶದ ಹಿನ್ನೆಲೆಯಲ್ಲಿ ‘ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ’ ಎಂದು  ಕಾಂಗ್ರೆಸ್‌ ಫ್ಲೆಕ್ಸ್ ಮಾಡಿ ಹಾಕಲಾಗಿದ್ದು, ಇದನ್ನು ಖಂಡಿಸಿ ಜೆಡಿಎಸ್ ಮುಖಂಡರು ಮಾಜಿ ಶಾಸಕ ಸಾ.ರಾ‌.ಮಹೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯವರು ನೀಡಿದ್ದರು ಎನ್ನಲಾದ ‘ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ’ ಎಂಬ ಶೀರ್ಷಿಕೆಯ ಜಾಹೀರಾತಿನ ಪ್ರತಿಯನ್ನು ಕಾಂಗ್ರೆಸ್‌ನಿಂದ ಫ್ಲೆಕ್ಸ್ ಮಾಡಿ ಹಾಕಲಾಗಿದೆ.

ಇದನ್ನು ಓದಿ : ಎಚ್​ಡಿ ಕುಮಾರಸ್ವಾಮಿಯವರಿಗೆ ಅಕ್ರಮ ಗಣಿಗಾರಿಕೆಗೆ ಅನುಮತಿ; ಕ್ರಮಕ್ಕೆ ರಾಜ್ಯಪಾಲರು ವಿಳಂಬ ನೀತಿ

ಕಾಂಗ್ರೆಸ್ ಜನಾಂದೋಲನ ಸಮಾವೇಶದ ಹಿನ್ನೆಲೆಯಲ್ಲಿ ಮೆಟ್ರೋಪೋಲ್ ವೃತ್ತದಲ್ಲಿ ಸಾರ್ವಜನಿಕರ ಗಮನಸೆಳೆಯುವ ರೀತಿಯಲ್ಲಿ ಫ್ಲೆಕ್ಸ್ ಹಾಕಲಾಗಿದೆ. ಇದನ್ನು ಖಂಡಿಸಿ ಜೆಡಿಎಸ್ ಮುಖಂಡರು ಮಾಜಿ ಶಾಸಕ ಸಾ.ರಾ‌.ಮಹೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಕೂಡಲೇ ತೆರವುಗೊಳಿಸಬೇಕು ಎಂದು ಪ್ರತಿಭಟನೆ ನಡೆಸಿದರು. ಮಹೇಶ್ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.

ಇದನ್ನು ನೋಡಿ : ಕೆಲಸದ ಅವಧಿ ವಿಸ್ತರಣೆ ಪ್ರಸ್ತಾಪದ ವಿರುದ್ಧ ಐಟಿ ಉದ್ಯೋಗಿಗಳ ಪ್ರತಿಭಟನೆJanashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *