ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ದೇವೇಗೌಡರ ಸಲಹೆ ಗಂಭೀರವಾಗಿ ಪರಿಗಣಿಸುತ್ತೇವೆ – ಮುಖ್ಯಮಂತ್ರಿ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಆಗಿರುವ ಗಂಭೀರ ದೋಷ ಹಾಗೂ ತಪ್ಪುಗಳ ಬಗ್ಗೆ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅವರು ಬರೆದಿರುವ ಪತ್ರ ಹಾಗೂ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಸೇರಿದಂತೆ ಕೆಲವರು ಪತ್ರ ಬರೆದಿದ್ದಾರೆ. ಅವರ ಪತ್ರದ ಸಾರಾಂಶವನ್ನು ಅವಲೋಕಿಸಿದ್ದೇನೆ. ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ನಾವು ಏನೆಲ್ಲ ಮಾಡಲು ಸಾಧ್ಯವೋ ಆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ನಾಳೆ ಸಭೆಯನ್ನು ಸೇರಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮರು ಪರಿಷ್ಕರಣೆಗೊಂಡ ಪಠ್ಯಪುಸ್ತಕ ಹಿಂಪಡೆಯಲು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಆಗ್ರಹ

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಮತ್ತು ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಚರ್ಚೆ ಮಾಡುತ್ತೇನೆ. ಮಾಜಿ ಪ್ರಧಾನಿಗಳು ನಮಗೆಲ್ಲರಿಗೂ ಹಿರಿಯರು. ಅವರು ಪಠ್ಯ ಕ್ರಮದ ಬಗ್ಗೆ ಪತ್ರ ಬರೆದಿದ್ದಾರೆ. ಅವರು ಏನೆಲ್ಲ ಸಲಹೆ ಕೊಟ್ಟಿದ್ದಾರೋ ಅವುಗಳನ್ನು ಗಂಭೀರವಾಗಿ ಪರಿಗಣಿಸಿ, ಏನೇನು ಬದಲಾವಣೆ ಮಾಡಲು ಸಾಧ್ಯವೋ ಅದರ ಬಗ್ಗೆ ತೀರ್ಮಾನ ಮಾಡ್ತೇವೆ.ಮತ್ತು ಪ್ರತಿಯಾಗಿ ಗೌರವಪೂರ್ವಕವಾಗಿ ಉತ್ತರಿಸುತ್ತೇವೆ ಎಂದು ತಿಳಿಸಿದರು.

ಇದನ್ನು ಓದಿ: ಕೇಸರೀಕರಣದ ಪಠ್ಯ ಪರಿಷ್ಕರಣೆ ವಿರುದ್ಧ ಬೃಹತ್ ಪ್ರತಿಭಟನಾ ಆಕ್ರೋಶ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕುರಿತು ಬುಧವಾರ ಸ್ವಾಮೀಜಿಗಳ ಸಭೆ, ಮತ್ತಿತರ ವಿಚಾರಗಳ ಬಗ್ಗೆ ಸಿಸಿ ಪಾಟೀಲ್ ಅವರು ಸ್ವಾಮೀಜಿಗಳ ಜತೆ ಮಾತನಾಡುತ್ತಾರೆ ಎಂದರು. ಇದೇ ವೇಳೆ ಮಹಾರಾಷ್ಟ್ರದಲ್ಲಿ ಶಿವಸೇನೆ ಶಾಸಕರ ಬಂಡಾಯಕ್ಕೆ ಪ್ರತಿಕ್ರಿಯಿಸಿದ ಅವರು, ಇದರ ಬಗ್ಗೆ ನನಗೆ ಮಾಹಿತಿ ಇಲ್ಲ. ಈಗ ತಾನೇ ನಾನು ಮೈಸೂರಿಂದ ಬಂದಿದ್ದೇನೆ ಎಂದರು.

Donate Janashakthi Media

Leave a Reply

Your email address will not be published. Required fields are marked *