ತುಮಕೂರನ್ನು ಸ್ಯಾಟಲೈಟ್ ನಗರವನ್ನಾಗಿ ಅಭಿವೃದ್ಧಿ: ಡಿಸಿಎಂ ಡಿಕೆ ಶಿವಕುಮಾರ್

ತುಮಕೂರು: ನಗರದ ಅಭಿವೃದ್ಧಿಗೂ ನಮ್ಮ ಸರ್ಕಾರ ಬದ್ಧವಾಗಿದ್ದು, ತುಮಕೂರನ್ನು ಸ್ಯಾಟಲೈಟ್ ನಗರವನ್ನಾಗಿ ಅಭಿವೃದ್ಧಿಪಡಿಸಲು ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಜೂನ್‌ 21 ಶನಿವಾರದಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಸಹಕಾರ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ರ 75ನೇ ಹುಟ್ಟುಹಬ್ಬದ ನಿಮಿತ್ತ ನಗರದಲ್ಲಿ ಆಯೋಜಿಸಿದ್ದ ಅಮೃತ ಮಹೋತ್ಸವ ಮತ್ತು ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಇದನ್ನೂ ಓದಿ: ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪದ್ಮಿನಿ ನಾಗರಾಜ್ ರಾಜೀನಾಮೆ

2027ರ ವೇಳೆಗೆ ಕೋಲಾರ, ತುಮಕೂರು ಸೇರಿದಂತೆ ಬಯಲು ಸೀಮೆಯ ಜಿಲ್ಲೆಗಳಿಗೆ ಎತ್ತಿನಹೊಳೆ ನೀರನ್ನು ಹರಿಸಬೇಕೆನ್ನುವುದು ನಮ್ಮ ಸರ್ಕಾರದ ಸಂಕಲ್ಪ. ಎತ್ತಿನಹೊಳೆ ಯೋಜನೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ನನಗೆ ನಿರ್ದೇಶನ ನೀಡಿದ್ದು, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ನಮ್ಮ ಸರ್ಕಾರ ಬದ್ಧವಿದೆ. ರೈತರಿಗೆ ಪಿಂಚಣಿ ಇಲ್ಲ. ಆದರೆ ಸಹಕಾರ ಕ್ಷೇತ್ರದ ಮೂಲಕ ರೈತರ ಅಭಿವೃದ್ಧಿಗಾಗಿ ಶ್ರಮಿಸಲಾಗುತ್ತಿದೆ.

ಸಹಕಾರ ಕ್ಷೇತ್ರದಲ್ಲಿ ಕ್ರಾಂತಿ ಮಾಡಿರುವ ರಾಜಣ್ಣನವರಿಗೆ ನಮ್ಮ ಸರ್ಕಾರ ಜವಾಬ್ದಾರಿಯನ್ನು ವಹಿಸಿದೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬುವುದೇ ಕಾಂಗ್ರೆಸ್ ತತ್ವ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ಇದನ್ನೂ ನೋಡಿ: POSH ಕಾಯ್ದೆ ಎಂದರೇನು ಮತ್ತು ಅದು ಹೇಗೆ ಕೆಲಸ ಮಾಡುತ್ತದೆ?Janashakthi Media

Donate Janashakthi Media

Leave a Reply

Your email address will not be published. Required fields are marked *