ಧರ್ಮಸ್ಥಳ: ಗ್ರಾಮದಲ್ಲಿ ಹಲವಾರು ಅಪರಾಧ ಕೃತ್ಯಗಳು ನಡೆದಿವೆ ಎಂದು ವಕೀಲರ ಮೂಲಕ ಪೊಲೀಸರಿಗೆ ದೂರು ನೀಡಿದ್ದ ವ್ಯಕ್ತಿಯೊಬ್ಬರು ಜುಲೈ 11 ಶುಕ್ರವಾರದಂದು ಬೆಳ್ತಂಗಡಿ ಪ್ರಧಾನ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸಂದೇಶ್ ಕೆ. ಮುಂದೆ ಹಾಜರಾಗಿದ್ದಾರೆ. ಧರ್ಮಸ್ಥಳ
ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ.), ದೂರುದಾರರ ರಕ್ಷಣೆಯ ಹಿತದೃಷ್ಟಿಯಿಂದ ಅವರ ಗುರುತನ್ನು ಬಹಿರಂಗಪಡಿಸದಿರಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಈ ವರ್ಷ ನರ್ಸಿಂಗ್ ಶುಲ್ಕ ಹೆಚ್ಚಳ ವಿಲ್ಲ: ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್
ಪ್ರಕರಣದ ಗಂಭೀರತೆಯನ್ನು ಮನಗಂಡು, ಬಂಟ್ವಾಳ ಡಿವೈಎಸ್‌ಪಿ ನೇತೃತ್ವದಲ್ಲಿ ಪ್ರತ್ಯೇಕ ತನಿಖೆಯನ್ನು ಆರಂಭಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ದೂರುದಾರರು ತಾವೇ ಹೊರ ತೆಗೆದಿರುವುದಾಗಿ ತಿಳಿಸಿರುವ ಅಸ್ಥಿಪಂಜರದ ಅವಶೇಷಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಈ ಅವಶೇಷಗಳನ್ನು ದೂರುದಾರರ ಪರ ವಕೀಲರು ಮತ್ತು ಪಂಚರ ಸಮ್ಮುಖದಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಸ್.ಪಿ. ಸ್ಪಷ್ಟಪಡಿಸಿದ್ದಾರೆ.
ಈ ಘಟನೆಯು ಧರ್ಮಸ್ಥಳದಂತಹ ಪುಣ್ಯಕ್ಷೇತ್ರದಲ್ಲಿ ಅಪರಾಧ ಕೃತ್ಯಗಳ ಆರೋಪದ ಹಿನ್ನೆಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದೆ.
ಇದನ್ನೂ ನೋಡಿ: ಜುಲೈ 09 ರಂದು ಕಾರ್ಮಿಕರ ಮುಷ್ಕರ | ಮುಷ್ಕರಕ್ಕೆ ಕಾರಣಗಳೇನು? – ವಿಶ್ಲೇಷಣೆ ಎಸ್ ವರಲಕ್ಷ್ಮಿ Janashakthi Media
