ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳ ಪೊಲೀಸ್ ಠಾಣೆ ಮೊ. ಸಂ. 39/2025 ಕಲಂ 211(ಎ),ಬಿ.ಎನ್.ಎಸ್ ಅಡಿಯಲ್ಲಿ ದಾಖಲಾಗಿರುವ ಪುಕರಣ ಕೇವಲ ಬಿಎನ್‌ಎಸ್ ತನಿಖೆಗಷ್ಟೆ ಅಲ್ಲ. ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಕೊಲೆ, ದೌರ್ಜನ್ಯ, ಅತ್ಯಾಚಾರ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಯಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅಕ್ಟೋಬರ್ 31 ರಂದು ಎಸ್‌ಐಟಿಗೆ ಪತ್ರ ಬರೆದಿದ್ದಾರೆ.
ಆ ಪತ್ರ ಜನಶಕ್ತಿ ಮೀಡಿಯಾಗೆ ಲಭ್ಯವಾಗಿದ್ದು, ಪತ್ರದ ಸಾರಾಂಶ ಈ ಕೆಳಗಿನಂತಿದೆ.
ನಾಗಲಕ್ಷ್ಮೀ ಚೌಧರಿಯವರ ಪತ್ರ ಓದಲು ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ ರಾಜ್ಯ ಮಹಿಳಾ ಆಯೋಗದಿಂದ, ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ ಬಗ್ಗೆ ಹಾಗೂ 12-07-2025ರಂದು ಟೈಮ್ಸ್ ನೌ ಮತ್ತಿತರ ಮಾಧ್ಯಮಗಳು ಮನುಷ್ಯರೊಬ್ಬರ ತಲೆಬುರುಡೆ ದೊರಕಿರುವ ಬಗ್ಗೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದ ಹೇಳಿಕೆಯ ವರದಿಯನ್ನು ಪಕಟಿಸಿದ ಬಗ್ಗೆ, ದಿನಾಂಕ 14.07.2025ರಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಮಾಧ್ಯಮ ವರದಿ ಹಾಗೂ ಶವಗಳನ್ನು ಹೂತಿರುವ ವ್ಯಕ್ತಿಯ ಹೇಳಿಕೆಯಲ್ಲಿ, ಕಳೆದ 20ಕ್ಕೂ ಹೆಚ್ಚು ವರ್ಷ ಗಂಭೀರ ಸ್ವರೂಪದ ದೌರ್ಜನ್ಯ, ಹತ್ಯೆ, ಅತ್ಯಾಚಾರ, ಅಸ್ವಾಭಾವಿಕವಾದ ಸಾವು ಮತ್ತು ನಾಪತ್ತೆ ಪುಕರಣಗಳು ಹಲವು ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಮೇಲೆ ನಡೆದಿರುವ ಬಗ್ಗೆ ತಿಳಿಸಲಾಗಿದೆ.
ಹಾಗಾಗಿ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ, ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ಪಕರಣಗಳು, ಅಸ್ವಾಭಾವಿಕವಾದ ಸಾವು/ಕೂಲ ಪಕರಣಗಳು, ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ, ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕಾಗಿ ಮನವಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ವಾರ್ಡ್‌ವಾರು ಮೀಸಲು ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಲು 5 ತಿಂಗಳು ಅಗತ್ಯ: ರಾಜ್ಯ ಸರ್ಕಾರ
ಈ ಉಲ್ಲೇಖವು ತೋರಿಸುತ್ತಿರುವಂತೆ, ಆಯೋಗವು ಎಸ್‌ಐಟಿಯನ್ನು ರಚಿಸುವಂತೆ ಸರ್ಕಾರವನ್ನು ಕೋರಿದ್ದು, ಮಹಿಳೆಯರಿಗೆ ಸಂಬಂಧಿಸಿದ ಪುಕರಣಗಳ ತನಿಖೆಯು ಸಮಗ್ರವಾಗಿ ನಡೆಯಬೇಕೆಂಬ ಆಶಯದಿಂದ ಆಯೋಗದ ವತಿಯಿಂದ ಬರೆದ ಪತ್ರಕ್ಕೆ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳು ಮತ್ತು ರಾಜ್ಯ ಸರ್ಕಾರವು ಕೂಡಲೇ ಕಾರ್ಯಪುವೃತ್ತವಾಗಿ, ತಮ್ಮ ನೇತೃತ್ವದಲ್ಲಿ ಇನ್ನಿತರ ಹಿರಿಯ ಪೊಲೀಸ್ ಅಧಿಕಾರಿಗಳನ್ನು ನಿಯಮಿಸುತ್ತಾ, ವಿಶೇಷ ತನಿಖಾ ತಂಡ (Special Investigation Team)ವನ್ನು ರಚಿಸಿದ್ದಾರೆ.
ಎಸ್‌ಐಟಿ ರಚನೆ ಕುರಿತ ಸರ್ಕಾರದ ಆದೇಶದಲ್ಲಿ “ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮ ಸಂಖ್ಯೆ:39/2025, ಕಲಂ 211 (ಎ), ಬಿಎನ್ಎಸ್ ಪುಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ಕೆಳಕಂಡ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡ (Special Investigation Team)ವನ್ನು ರಚಿಸಿ ಸರ್ಕಾರ ಆದೇಶಿಸಿದೆ.
ಮೇಲ್ಕಂಡ ಪ್ರಕರಣವೂ ಸೇರಿದಂತ ಹಾಗೂ ಇದರ ಸಂಬಂಧ ಕರ್ನಾಟಕ ರಾಜ್ಯದ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ/ದಾಖಲಾಗುವ ಇತರೆ ಎಲ್ಲಾ ಕ್ರಿಮಿನಲ್ ಪುಕರಣಗಳ ತನಿಖೆಯನ್ನು ಡಿಜಿ ಮತ್ತು ಐಜಿಪಿರವರು ವಿಶೇಷ ತನಿಖಾ ತಂಡ (Special Investigation Team)ಕ್ಕೆ ವರ್ಗಾಯಿಸುವುದು ಹಾಗೂ ವಿಶೇಷ ತನಿಖಾ ತಂಡಕ್ಕೆ ಅಗತ್ಯವಿರುವ ಇತರ ಅಧಿಕಾರಿ/ಸಿಬ್ಬಂದಿಗಳನ್ನು ಒದಗಿಸುವುದು” ಎಂದು ಆದೇಶಿಸಲಾಗಿದೆ.
ಹೀಗೆ ಎಸ್‌ಐಟಿ ರಚನೆಯಾಗಬೇಕೆಂಬ ಕೋರಿಕೆಯ ಆಶಯವೂ ಮತ್ತು ಸರ್ಕಾರದ ಆದೇಶವೂ ಕೇವಲ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ:39/2025, ಕಲಂ 211 (ಎ), ಬಿಎನ್ಎಸ್ ಪುಕರಣದ ತನಿಖೆಗೆ ಸೀಮಿತವಾಗಿರದೆ, ಮಹಿಳೆಯರಿಗೆ ಸಂಬಂಧಿಸಿದ ಪುಕರಣಗಳ ‘ಸಮಗ್ರ’ ತನಿಖೆಯನ್ನು ಎಸ್‌ಐಟಿ ಮಾಡಬೇಕೆಂಬುದನ್ನು ಸೂಚಿಸುತ್ತದೆ. ಹೀಗಿದ್ದರೂ, ಈವರೆಗೆ ಎಸ್‌ಐಟಿ ಅಂತಹ ಪಕರಣಗಳನ್ನು ತನಿಖೆ ಮಾಡುತ್ತಿರುವ ಬಗ್ಗೆ ಯಾವುದೇ ಮಾಹಿತಿ ಕಂಡು ಬರುತ್ತಿಲ್ಲ.
ಮಾಧ್ಯಮಗಳ ವರದಿಯನ್ನು ಗಮನಿಸಿದಾಗ ಎಸ್‌ಐಟಿ ರಚನೆಯಾದಾಗಿನಿಂದ ಕೇವಲ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ‘ಚಿನ್ನಯ್ಯ’ ಎಂಬ ವ್ಯಕ್ತಿಯ ಹೇಳಿಕೆಯನ್ನು ಆಧರಿಸಿ ಮಾನವ ಕಳೇಬರಹಗಳ ಉತ್ಪನನಕ್ಕೆ ಸೀಮಿತವಾಗಿ ಆತನ ಹೇಳಿಕೆಯ ಮಿತಿಯೊಳಗೆ ತನಿಖೆ ನಡೆದಿರುವುದು ಕಂಡುಬಂದಿದೆ. ಉತ್ಕನನದ ಸಂದರ್ಭದಲ್ಲಿ ದೂರತ ಅಸ್ಥಿಪಂಜರಗಳ ಅವಶೇಷಗಳ ಬಗ್ಗೆ ಸಾವು ಸಂಭವಿಸಿದ ಕಾರಣದ ಬಗ್ಗೆ ಅವುಗಳಲ್ಲಿ ಮಹಿಳೆಯರ ಅಸ್ಥಿಪಂಜರಗಳನ್ನು ಗುರುತಿಸುವ ಬಗ್ಗೆ, ಕಾಡಿನ ಪುದೇಶದಲ್ಲಿ ಅಸ್ಥಿಪಂಜರ ದೊರೆಯಲು ಕಾರಣಗಳ ಬಗ್ಗೆ ಮಾಹಿತಿ ಪತ್ತೆ ಹಚ್ಚುವ ಜೊತೆಗೆ, ಎಸ್‌ಐಟಿ ರಚನೆಯ, ಆಯೋಗದ ಕೋರಿಕೆ ಮತ್ತು ನಂತರದ ಸರ್ಕಾರದ ಆದೇಶಕ ಅನುಗುಣವಾಗಿ ಎಸ್‌ಐಟಿಯು ಕೂಡಲೇ ಮಹಿಳೆಯರು ಮತ್ತು ಯುವತಿಯರ ನಾಪತ್ತೆ, ಅವರ ಅತ್ಯಾಚಾರ, ಕೊಲೆ ಪಕರಣಗಳನ್ನೂ ಸೇರಿದಂತೆ ಅಸಹಜ ಮತ್ತು ಅನುಮಾನಾಸ್ಪದ ಸಾವುಗಳು ಮತ್ತಿತರ ಪಕರಣಗಳ ಸಮಗ್ರ ತನಿಖೆಯನ್ನು ಕೈಗೊಳ್ಳುವಂತೆ ಅಥವಾ ಕೈಗೊಂಡಿದ್ದರೆ ಈ ಬಗ್ಗೆ ಮಾಹಿತಿಯನ್ನು ಆಯೋಗಕ್ಕೆ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ.
ಇದನ್ನೂ ನೋಡಿ: ಧರ್ಮಸ್ಥಳ ಪ್ರಕರಣ | ಎಸ್ಐಟಿ ಪೊಲೀಸರು ದೌರ್ಜನ್ಯ ಮಾಡುವಂತಿಲ್ಲ- ಹೈಕೋರ್ಟ್ ಆದೇಶ Janashakthi Media
