ಧರ್ಮಸ್ಥಳ ಗ್ರಾಮದಲ್ಲಿ ಶವಗಳ ಹೂತಿಟ್ಟ ಕೇಸ್ – ಕೊನೆಗೂ ಅಸ್ಥಿಪಂಜರ ಪತ್ತೆ!

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳು ಹೂತಿಟ್ಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇದೀಗ ಈ ಕೇಸ್​ಗೆ ಬಿಗ್​ ಟ್ವಿಸ್ಟ್ ಸಿಕ್ಕಿದೆ. ಇಂದು 6ನೇ ಗುಂಡಿ ಉತ್ಖನನ ವೇಳೆ ಅಸ್ಥಿಪಂಜರದ ಅವಶೇಷಗಳು  ಪತ್ತೆಯಾಗಿದೆ ಎಂಬ  ಮಾಹಿತಿ ಲಭ್ಯವಾಗಿದೆ. ಧರ್ಮಸ್ಥಳ

ಕಳೆದ ಮೂರ್ನಾಲ್ಕು ದಿನಗಳಿಂದ ಗುಂಡಿಗಳ ಉತ್ಖನನ ಕಾರ್ಯ ನಡೆಯುತ್ತಲೇ ಇತ್ತು. ಆದರೆ 5 ಗುಂಡಿಗಳನ್ನು ಅಗೆದಾಗ ಕಳೆಬರ ಸಿಕ್ಕಿರಲಿಲ್ಲ. ಆದರೆ ಇದೀಗ 6ನೇ ಗುಂಡಿಯಲ್ಲಿ ಅಸ್ಥಿಪಂಜರ ಅವಶೇಷಗಳು  ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.  ಒಟ್ಟು 66 ಮಂದಿ ಸಿಬ್ಬಂದಿ, ಪೌರ ಕಾರ್ಮಿಕರಿಂದ ಶೋಧ ಕಾರ್ಯ ನಡೆಯುತ್ತಿದ್ದು, ಧರ್ಮಸ್ಥಳ ಗ್ರಾಮದ ಕಾಡಿನಲ್ಲಿ ತನಿಖೆ ಮುಂದುವರಿದಿದೆ.

ಇದನ್ನೂ ಓದಿ : ಧರ್ಮಸ್ಥಳ ಪದ್ಮಲತಾ ಪ್ರಕರಣ – ಲಕ್ಷ್ಮಣ್ ಗೌಡ ಬಿಚ್ಚಿಟ್ಟ ಮಾಹಿತಿ ಧರ್ಮಸ್ಥಳ

6ನೇ ಪಾಯಿಂಟ್‌ನಲ್ಲಿ ಎರಡು ಕಳೇಬರ, ಮೂಳೆಗಳು ಸಿಕ್ಕಿವೆ. 4 ಅಡಿ ತೆಗೆಯುತ್ತಿದ್ದಂತೆ ಎಲುಬು ಮೂಳೆಗಳು ಪತ್ತೆಯಾಗಿವೆ. ಅವನ್ನು ಎಫ್‌ಎಸ್‌ಎಲ್‌ ಮಾದರಿಗೆ ಕಳಿಸಲು ಪ್ಯಾಕ್ ಮಾಡಲಾಗುತ್ತಿದೆ. ಜೊತೆಗೆ ಮಣ್ಣಿನ ಮಾದರಿಗಳನ್ನೂ ಸಂಗ್ರಹ ಮಾಡಲಾಗುತ್ತಿದೆ. ಇನ್ನೂ ಏಳು ಪಾಯಿಂಟ್‌ಗಳು ಬಾಕಿ ಇವೆ. ಮಳೆಯ ಭೀತಿಯ ಕಾರಣ, ಉಳಿದ ಪಾಯಿಂಟ್‌ಗಳನ್ನು ಬೇಗ ಬೇಗೆ ತೆಗೆಯುವಂತೆ ಎಸ್‌ಐಟಿ ಅಧಿಕಾರಿಗಳು ಸೂಚಿಸಿದ್ದಾರೆ.

ಅನಾಮಿಕ ದೂರುದಾರ ಒಟ್ಟು 13 ಸ್ಥಳಗಳಲ್ಲಿ ಶವ ಹೂತಿರುವುದಾಗಿ ತೋರಿಸಿದ್ದು, ಅಲ್ಲಿ ಸ್ಥಳ ಮಹಜರು ನಡೆಸಿ, ಪೊಲೀಸ್ ಭದ್ರತೆಯನ್ನು ಕೊಡಲಾಗಿದೆ. ಮೊದಲ ದಿನ(ಜುಲೈ 29) 1 ಸ್ಥಳ ಮಾತ್ರ ಅಗೆದಿದ್ದು, 2ನೇ ದಿನ(ಜುಲೈ 30)  4 ಪಾಯಿಂಟ್‌ಗಳನ್ನು ಕಾರ್ಮಿಕರು 6 ಅಡಿ ಆಳ ತೋಡಿ ಪರಿಶೀಲನೆ ನಡೆಸಲಾಗಿದೆ. ಆದರೆ ಜುಲೈ 30ರ 4 ಪಾಯಿಂಟ್‌ನಲ್ಲೂ ಯಾವುದೇ ಕುರುಹು ಸಿಕ್ಕಿಲ್ಲ.  ಸಂಜೆ 3-30 ರವರೆಗೂ ಕಾರ್ಯಾಚರಣೆ ನಡೆದಿತ್ತು. ಎಸ್‌ಐಟಿ ಮುಖ್ಯಸ್ಥ ಪ್ರಣವ್ ಕುಮಾರ್‌ ಮೊಹಾಂತಿ ನಿನ್ನೆ ಸಂಜೆ 4-45ಕ್ಕೆ ಸ್ಥಳ ಪರಿಶೀಲನೆ ನಡೆಸಿದ್ದರು. ಬಳಿಕ ಸುಧೀರ್ಘ ಸಭೆಯೂ ನಡೆಸಿದ್ದರು. ಆದರೆ ಮಾಧ್ಯಮಗಳ ಪ್ರಶ್ನೆಗೆ ಯಾವುದೇ ಕುರುಹು ಸಿಕ್ಕಿಲ್ಲ ಎಂದಷ್ಟೇ ಹೇಳಿದ್ದು, ಉಳಿದ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದರು.

ಇನ್ನೂ ಎಸ್‌ಐಟಿ (SIT) ಅಧಿಕಾರಿಗಳು ಕರ್ನಾಟಕದ ಪ್ರತಿ ಪೊಲೀಸ್ ಠಾಣೆಯಿಂದ ಮಾಹಿತಿ ಕೇಳಿದ್ದು, 1995ರಿಂದ 2005 ಹಾಗೂ 2005ರಿಂದ 2015ವರೆಗೆ ಪತ್ತೆಯಾಗದ ನಾಪತ್ತೆ, ಕೊಲೆ-ಅತ್ಯಾಚಾರ ಪ್ರಕರಣದ ಮಾಹಿತಿ ಒದಗಿಸಲು ತಿಳಿಸಿದೆ. 10 ವರ್ಷಗಳಂತೆ ಎರಡು ಪಟ್ಟಿಯಲ್ಲಿ ಒಟ್ಟು 20 ವರ್ಷದ ದಾಖಲೆ ನೀಡಲು ಎಸ್‌ಐಟಿ ಅಧಿಕಾರಿಗಳು ಪತ್ರದ ಮೂಲಕ ತಿಳಿಸಿದ್ದಾರೆ.

ಸೋಮವಾರ ದೂರುದಾರ (ಜು.28) 13 ಜಾಗಗಳನ್ನು ಗುರುತಿಸಿದ್ದ. ಅದಾದ ಬಳಿಕ ಎರಡು ದಿನ ಈ ಮೊದಲು 5 ಪಾಯಿಂಟ್‌ಗಳಲ್ಲಿ ನಡೆಸಲಾಗಿದ್ದ ಉತ್ಖನನದ ವೇಳೆ ಯಾವುದೇ ರೀತಿಯ ಕಳೇಬರ ಸಿಕ್ಕಿರಲಿಲ್ಲ. ಆದರೆ ಎರಡನೇ ದಿನದಲ್ಲಿ ಒಂದು ಕೆಂಪು ಬಣ್ಣದ ಹರಿದ ರವಿಕೆ ಹಾಗೂ ಒಂದು ಪ್ಯಾನ್ ಕಾರ್ಡ್ ಹಾಗೂ ಒಂದು ಡೆಬಿಟ್ ಕಾರ್ಡ್ ಸಿಕ್ಕಿತ್ತು. ಗುರುತಿಸಿರೋ ಎಲ್ಲಾ 13 ಜಾಗಗಳಿಗೂ ಎಸ್‌ಐಟಿ ವಿಶೇಷ ಭದ್ರತೆ ಕಲ್ಪಿಸಿದೆ. ಗುರುತಿಸಿದ ಪ್ರತಿ ಸ್ಥಳಕ್ಕೂ ತಲಾ 2 ಮಂದಿ ಶಸ್ತ್ರಸಜ್ಜಿತ ಸಿಬ್ಬಂದಿಗಳನ್ನ ನೇಮಕ ಮಾಡಿದ್ದು, ದಟ್ಟ ಅರಣ್ಯದಲ್ಲಿ ರಾತ್ರಿ ಹಗಲು ಸರ್ಪಗಾವಲು ಹಾಕಿದೆ. ಗುರುತಿಸಿದ ಜಾಗಗಳಿಗೆ ಟೇಪ್ ಹಾಕಿ, ಎಲ್ಲದಕ್ಕೂ ನಂಬರ್ ನೀಡಲಾಗಿದೆ.

ಎಸ್‌ಐಟಿ ವಿಚಾರಣೆ ವೇಳೆ ದೂರುದಾರ ವ್ಯಕ್ತಿ ಓರ್ವ ನಿವೃತ್ತ ಪೊಲೀಸ್ ಅಧಿಕಾರಿಯ ಹೆಸರನ್ನು ಬಾಯ್ಬಿಟ್ಟಿದ್ದ. ನಾನು ಹೆಣ ಹೂಳುವಾಗ ಈ ಅಧಿಕಾರಿ ಕೂಡ ನನಗೆ ಸಾಥ್ ನೀಡಿರುವುದಾಗಿ ತಿಳಿಸಿದ್ದ. ದೂರುದಾರನ ಮಾಹಿತಿ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು 1995ರಿಂದ ಧರ್ಮಸ್ಥಳ ಔಟ್ ಪೋಸ್ಟ್ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡಿದವರ ಲಿಸ್ಟ್ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಮನವಿ ಪತ್ರ ಕಳುಹಿಸಿದ್ದರು.

ಇದನ್ನೂ ನೋಡಿ : ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಮಾತನಾಡುವುದು ತಪ್ಪೆ? ಯಾಕೆ ಅಪಪ್ರಚಾರ ಮಾಡ್ತೀರಿ? Janashakthi Media

 

 

Donate Janashakthi Media

Leave a Reply

Your email address will not be published. Required fields are marked *