ಧಾರವಾಡ: ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ವಯೋಮಿತಿ ಸಡಿಲಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಡಿಸೆಂಬರ್ 10ರಂದು ನಡೆಯುವ ಪ್ರತಿಭಟನೆ ಧರಣಿಗೆ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್ಐ) ಕರ್ನಾಟಕ ರಾಜ್ಯ ಸಮಿತಿಗಳು ಬೆಂಬಲಿಸುತ್ತವೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ತಿಳಿಸಿದರು.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ದೊಡ್ಡ ಪ್ರಮಾಣದಲ್ಲಿ ಉದ್ಯೋಗಗಳ ಭರ್ತಿಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದೇ ಮೂಗಿಗೆ ತುಪ್ಪ ಸವರುವಂತೆ ಇಲ್ಲೊಂದಿಷ್ಟು, ಅಲ್ಲೊಂದಿಷ್ಟು ನೇಮಕಾತಿಗಳನ್ನು ಮಾಡಿಕೊಳ್ಳುವ ಅಧಿಸೂಚನೆಗಳನ್ನು ಹೊರಡಿಸುತ್ತಿವೆ.
ಇದನ್ನೂ ಓದಿ : ಶಿರಾ | ಯುವಜನ ಆಯೋಗ ರಚನೆಗಾಗಿ ಬೆಳಗಾವಿ ಚಲೋ – ಸಾಮಜಿಕ ಹೋರಾಟಗಾರರಾದ ಜನಾರ್ಧನ ಕೆಸರಗದ್ದೆ
ಕೇಂದ್ರ ಸರ್ಕಾರದ 78 ಇಲಾಖೆಗಳಲ್ಲಿ 9.79 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಹಾಗೂ ನಮ್ಮ ರಾಜ್ಯದ 43 ಇಲಾಖೆಗಳಲ್ಲಿ 2,84,881 ಹುದ್ದೆಗಳು ಖಾಲಿ ಇವೆ. ಉದ್ಯೋಗ ಪಡೆಯಬೇಕೆಂದು ಹಲವಾರು ವರ್ಷಗಳಿಂದ ತಯಾರಿ ನಡೆಸುತ್ತಿರುವ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಹೋಲಿಸಿದರೆ ಇದು ಯಾವುದಕ್ಕೂ ಸಾಲುತ್ತಿಲ್ಲ ಎಂದರು.
ಕೇಂದ್ರ, ರಾಜ್ಯ ಸರ್ಕಾರಗಳೆರಡೂ ಅಸ್ತಿತ್ವದಲ್ಲಿರುವ ಉದ್ಯೋಗಗಳನ್ನು ವ್ಯವಸ್ಥಿತವಾಗಿ ತೆಗೆದುಹಾಕಲು, ಇಲಾಖೆಗಳನ್ನು ವಿಲೀನಗೊಳಿಸುವ ಮೂಲಕ ಹುದ್ದೆಗಳನ್ನು ರದ್ದುಗೊಳಿಸಲು ವ್ಯವಸ್ಥಿತ ಹುನ್ನಾರ ನಡೆಸುತ್ತಿವೆ. ಆ ಮೂಲಕ ಯುವಜನರನ್ನು ಅಕ್ಷರಶಃ ಬೀದಿಗೆ ತಳ್ಳಿವೆ ಎಂದರು. ಉದ್ಯೋಗದ ಹಕ್ಕಿಗಾಗಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನಾ ಧರಣಿಗೆ ಎಸ್ಎಫ್ಐ-ಡಿವೈಎಫ್ಐ ಬೆಂಬಲಿಸುತ್ತವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಎಸ್ಎಫ್ಐ ಉಪಾಧಕ್ಯರಾದ ಬಸವರಾಜ್ ಎಸ್ . ಜಿಲ್ಲಾಧಕ್ಯ ನಾಗರಾಜ್ , ಹಾಸ್ಟೆಲ್ ಘಟಕದ ರಾಜ್ಯ ಸಂಚಾಲಕ ಅರುಣ್ ನಾಗವತ್ ಇದ್ದರು.
ಇದನ್ನೂ ನೋಡಿ : ಅಂಗನವಾಡಿ, ಬಿಸಿಯೂಟ, ಆಶಾ ನೌಕರರ ಹೋರಾಟ | ಕೇಂದ್ರ ಸರಕಾರ ಕೊಟ್ಟ ಭರವಸೆ ಏನು? Janashakthi Media
