ಗುಬ್ಬಿ : ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಪೆದ್ದ ಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಬರ್ಬರ ಹತ್ಯೆಯನ್ನು ದಲಿತ ಹಕ್ಕುಗಳ ಸಮಿತಿ ಖಂಡಿಸಿದ್ದು, ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದೆ.
ಯುವಕರು ತಪ್ಪು ಮಾಡಿದ್ದಾರೆಂಬ ಕಾರಣ ನೀಡಿ, ಕೊಲೆಗಳ ಸಮರ್ಥನೆಗೆ ಮುಂದಾಗುವುದು ಸರಿಯಾದ ಕ್ರಮವಲ್ಲ ಭೀಕರ ಕೊಲೆಯ ಪರಿಸ್ಥಿತಿಯನ್ನು ಗಮನಿಸಿದರೆ ಅದರ ಹಿಂದೆ ವ್ಯವಸ್ಥಿತ ಸಂಚು ಮತ್ತು ತಂಡ ಇರುವುದು ಕಂಡು ಬರುತ್ತದೆ ಎಂದು ಡಿಎಚ್ಎಸ್ ರಾಜ್ಯ ಸಂಚಾಲಕ ಗೋಪಾಲಕೃಷ್ಣ ಹರಳಹಳ್ಳಿ ಆಗ್ರಹಿಸಿದ್ದಾರೆ.
ಸಂಚನ್ನು ಭೇಧಿಸಿ ರಾಜ್ಯದ ಜನತೆಗೆ ನಿಜವೇನೆಂದು ತಿಳಿಸಲು ರಾಜ್ಯ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ಕೊಲೆಯಾದ ಕುಟುಂಬಗಳಿಗೆ ತಕ್ಷಣವೇ ಅಗತ್ಯ ಪರಿಹಾರವನ್ನು ಘೋಷಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
ಗಿರೀಶ್ ಮನೆಗೆ ಭೇಟಿ ನೀಡಿದ್ದ ನಾಯಕರು ಕುಟುಂಬಕ್ಕೆ ಸಾಂತ್ವಾನ ಹೇಳಿ ಧೈರ್ಯ ತುಂಬಿದರು. ಸಿಐಟಿಯು ಮುಖಂಡರಾದ ಸುಬ್ಬಣ್ಣ ಈ ವೇಳೆ ಹಾಜರಿದ್ದರು.