ಮೈಸೂರು: ದೇವೇಗೌಡರಿಗೂ ಹಾಗೂ ಅವರ ಮನೆಯವರಿಗೆ ಗೊತ್ತಿಲ್ಲದೆಯೇ ಪ್ರಜ್ವಲ್ ರೇವಣ್ಣ ದೇಶ ಬಿಟ್ಟು ವಿದೇಶಕ್ಕೆ ಕಣ್ತಪ್ಪಿಸಿಕೊಂಡು ಹೋಗಿದ್ದಾನೆಯೇ ? ಅವರ ಕುಟುಂಬದ ಸಂಪರ್ಕದಲ್ಲಿ ಪ್ರಜ್ವಲ್ ರೇವಣ್ಣ ಇಲ್ಲವೇ? ಎಂದು ಮಾರ್ಮಿಕವಾಗಿ ಸಿಎಂ ಸಿದ್ದರಾಮಯ್ಯ ಹೆಚ್.ಡಿ.ದೇವೇಗೌಡ ಮೊಮ್ಮಗನಿಗೆ ದೇಶಕ್ಕೆ ಬರುವಂತೆ ಪತ್ರ ಬರೆದ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಪರ ಪ್ರಚಾರಕ್ಕೆ ಹೋದಾಗ ಹೆಚ್.ಡಿ.ಕೆ ನನ್ನ ಮಗ ಎಂದಿದ್ದರು. ಆ ಹೇಳಿಕೆ ಅವರ ಸಂಪರ್ಕದಲ್ಲಿ ಇದ್ದ ಹಾಗೆ ಅಲ್ವಾ ? ಪ್ರಜ್ವಲ್ ವಿಚಾರ ಅವರ ಕುಟುಂಬಕ್ಕೆ ಎಲ್ಲವೂ ಗೊತ್ತಿದೆ ಎಂದಿದ್ದಾರೆ.
ಇದನ್ನೂ ಓದಿ: ತತ್ವ ನುಡಿದ ಸಿಎಂ: ಕೆಲಕ್ಷಣ ಭಾವುಕರಾದ ಸಿದ್ದರಾಮಯ್ಯ
ಇನ್ನು ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣದ ಆರೋಪವನ್ನು ವಿಷಯಾಂತರ ಮಾಡಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಅಪರಾಧಿ ಅಲ್ಲ, ಆರೋಪಿ ಎಂದು ಅವರೇ ಹೇಳುತ್ತಿದ್ದಾರೆ. ನ್ಯಾಯಾಲಯ ತೀರ್ಪು ಕೊಡುವವರೆಗೂ ಪ್ರಜ್ವಲ್ ಆರೋಪಿಯೇ ಸಿಎಂ ಸಿದ್ದರಾಮಯ್ಯ, ಒಂದು ಕಡೆ ಡಿಕೆಶಿ ಪರ ಬ್ಯಾಟಿಂಗ್ ಬೀಸಿ, ಹೆಚ್ಡಿಕೆಗೆ ತಿರುಗೇಟು ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಡಿಯೋ ಪ್ರಕರಣ ಕುರಿತು ಒಂದಲ್ಲ , ಎರಡು ಬಾರಿ ಪ್ರಧಾನಿಗೆ ಪತ್ರ ಬರೆದಿದ್ದೇನೆ. ಆದರೆ ಈವರಗೆ ಯಾವುದೇ ಉತ್ತರ ಬಂದಿಲ್ಲ. ಪ್ರಧಾನಿ ಕಚೇರಿಗೆ ಪತ್ರ ಬರೆದರೆ ಉತ್ತರ ಬಂದೇ ಬರುತ್ತದೆ ಎನ್ನುವ ಅಭಿಪ್ರಾಯ ನಿಮ್ಮ ತಪ್ಪು ತಿಳುವಳಿಕೆ. ಹಾಗಂತ ಪ್ರಧಾನಿ ಮೋದಿ ಸೆಲೆಕ್ಟಿವ್ ಆಗಿದ್ದಾರೆ ಎಂಬುದಲ್ಲ. ಒಬ್ಬ ಮುಖ್ಯಮಂತ್ರಿಯಾಗಿ ಆಡಳಿತ ಪಕ್ಷ ಪ್ರಧಾನಿಗೆ ಪತ್ರ ಬರೆದರೆ ಉತ್ತರ ಕೊಡಬೇಕಿತ್ತು. ಆದರೆ ಅವರು ಉತ್ತರ ಕೊಡುವ ಕೆಲಸ ಮಾಡಿಲ್ಲ.ಇನ್ನು ಏಕೆ ಕೊಟ್ಟಿಲ್ಲ ಎಂಬುದನ್ನು ಬಿಜೆಪಿಯ ಪ್ರಹ್ಲಾದ್ ಜೋಶಿಯನ್ನೇ ಕೇಳಬೇಕು ಎಂದು ಸಿಎಂ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದನ್ನೂ ನೋಡಿ: ಲೈಂಗಿಕ ಹತ್ಯಾಕಾಂಡ :ಪ್ರಜ್ವಲ್ ಬಂಧನ ವಿಳಂಬಕ್ಕೆ ಹೈಕೋರ್ಟ್ ವಕೀಲ ಬಿ.ಟಿ.ವೆಂಕಟೇಶ್ ಆಕ್ರೋಶ