ಇದರಿಂದ ಕೆಲಕ್ಷಣಗಳ ಕಾಲ ವಿಚಲಿತಗೊಂಡ ಬಂಕ್ ಸಿಬ್ಬಂದಿ ಕೂಡಲೇ ಎಚ್ಚೆತ್ತು ಬಂಕ್ ನಲ್ಲಿದ್ದ ಬೆಂಕಿ ನಂದಿಸುವ ಯಂತ್ರಗಳಿಂದ ಬೆಂಕಿ ನಂದಿಸಿದ್ದಾರೆ. ಆ ಮೂಲಕ ಆಗಬಹುದಾಗಿದ್ದ ದೊಡ್ಡ ಅನಾಹುತವೊಂದನ್ನು ತಪ್ಪಿಸಿದ್ದಾರೆ.
ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದ್ದು, ಇವಿಷ್ಟೂ ಘಟನೆ ಬಂಕ್ ನಲ್ಲಿನ ಸಿಸಿಟಿವಿಯಲ್ಲಿ ದಾಖಲಾಗಿದೆ. ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಬಂಕ್ನಲ್ಲಿದ್ದ ಸಾರ್ವಜನಿಕರು ತಮ್ಮ ವಾಹನಗಳನ್ನು ತೆಗೆದುಕೊಂಡು ದೂರ ಓಡಿದ್ದಾರೆ. ಆದರೆ ಅಲ್ಲೇ ಇದ್ದ ಪೆಟ್ರೋಲ್ ಬಂಕ್ ಸಿಬ್ಬಂದಿ ಅಗ್ನಿ ಶಾಮಕದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಕ್ ಸಿಬ್ಬಂದಿಗಳ ಕಾರ್ಯ ಇದೀಗ ಎಲ್ಲೆಡೆ ಮೆಚ್ಚುಗೆಗೆ ಕಾರಣವಾಗಿದೆ.