ಬೆಂಗಳೂರು: ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರ ಡಿನ್ನರ್ ಮೀಟಿಂಗ್ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಇದೀಗ ಕುತೂಹಲಕ್ಕೆ ಕಾರಣವಾಗಿದೆ.
ಮೊದಲ ಬಾರಿಗೆ ಆಯ್ಕೆಯಾದ ಶಾಸಕರನ್ನು ಆಹ್ವಾನಿಸಿ ಈ ಔತಣಕೂಟವನ್ನು ಆಯೋಜಿಸಲಾಗಿದೆ ಎಂಬ ನೆಪವನ್ನು ಮೇಲ್ನೋಟಕ್ಕೆ ಹೇಳಲಾಗುತ್ತಿದ್ದು, ರಾಜ್ಯ ರಾಜಕಾರಣದ ಕುರಿತು ಮಹತ್ವದ ಚರ್ಚೆಗಳು ನಡೆದಿವೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಬೆಳ್ತಂಗಡಿಯಲ್ಲಿ 346 ಅಸಹಜ ಸಾವುಗಳಾಗಿವೆ – ನಟ ಚೇತನ್
ಮೊದಲ ಬಾರಿಗೆ ಆಯ್ಕೆಯಾದ ಶಾಸಕರನ್ನು ಆಹ್ವಾನಿಸಿ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಅವರು ಡಿನ್ನರ್ ಮೀಟಿಂಗ್ ಆಯೋಜನೆ ಮಾಡಿದ್ದಾರೆ.
ಖಾಸಗಿ ಹೋಟೆಲ್ನಲ್ಲಿ ನಡೆದ ಈ ಔತಣಕೂಟದಲ್ಲಿ ಸಚಿವ ಸಂತೋಷ್ ಲಾಡ್ ಮಾತ್ರವಲ್ಲ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಸುಮಾರು ಮೂರು ಪಕ್ಷಗಳಿಂದ 56ಕ್ಕೂ ಹೆಚ್ಚು ಶಾಸಕರು ಔತಣಕೂಟದ ಸಭೆಯಲ್ಲಿ ಪಾಲ್ಗೊಂಡಿದ್ದಾರೆಂದು ತಿಳಿದುಬಂದಿದೆ.
ಇದನ್ನೂ ನೋಡಿ: Karnataka Legislative Assembly Live Day 06 | ವಿಧಾನಸಭೆ ಬಜೆಟ್ ಅಧಿವೇಶನದ ನೇರ ಪ್ರಸಾರ