ಚಿತ್ರದುರ್ಗ: ಖಾಲಿ ಇರುವ 9 ಮತ್ತು 10 ನೇ ತರಗತಿಯ ಸ್ಥಾನಗಳಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿ ಕಾರ್ಯನಿರ್ವಹಿಸುತ್ತಿರುವ ಮೋರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಇಂದಿರಾಗಾಂಧಿ ವಸತಿ ಶಾಲೆಗಳಲ್ಲಿ ನೇರ ಪ್ರವೇಶ ನೀಡಲಾಗುತ್ತಿದೆ.
ಈಗಾಗಲೇ ಸರ್ಕಾರ ಆದೇಶದಂತೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆ ಸಮಿತಿಯಲ್ಲಿ ತಾಲ್ಲೂಕುವಾರು ಖಾಲಿ ಇರುವ ಸ್ಥಾನಗಳಿಗೆ ಮೀಸಲಾತಿ ಗುರುತಿಸಲಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 9ನೇ ತರಗತಿಗೆ 8 ಹಾಗೂ 10ನೇ ತರಗತಿಗೆ 28 ಸ್ಥಾನಗಳು ಖಾಲಿಯಿವೆ.
ಇದನ್ನೂ ಓದಿ: ಹೃದಯಾಘಾತ: ಕರ್ತವ್ಯ ನಿರತ ಎಎಸ್‌ಐ ಸಾವು
ಚಳ್ಳಕೆರೆ ತಾಲ್ಲೂಕಿನಲ್ಲಿ 9ನೇ ತರಗತಿಗೆ 6 ಹಾಗೂ 10ನೇ ತರಗತಿಗೆ 13, ಹಿರಿಯೂರು ತಾಲ್ಲೂಕಿನಲ್ಲಿ 9ನೇ ತರಗತಿಗೆ 5 ಹಾಗೂ 10ನೇ ತರಗತಿಗೆ 22, ಹೊಳಲ್ಕೆರೆ ತಾಲ್ಲೂಕಿನಲ್ಲಿ 9ನೇ ತರಗತಿಗೆ 15 ಹಾಗೂ 10ನೇ ತರಗತಿಗೆ 27,ಹೊಸದುರ್ಗ ತಾಲ್ಲೂಕಿನಲ್ಲಿ 9ನೇ ತರಗತಿಗೆ 18 ಹಾಗೂ 10ನೇತರಗತಿಗೆ 19 ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 9ನೇ ತರಗತಿಗೆ 2 ಹಾಗೂ 10ನೇ ತರಗತಿಗೆ 1 ಸ್ಥಾನ ಖಾಲಿಯಿದೆ.
ಅರ್ಹ ಅಭ್ಯರ್ಥಿಗಳು ತಮಗೆ ಸಮೀಪವಿರುವ ವಸತಿ ಶಾಲೆಗೆ ಭೇಟಿ ನೀಡಿ ನೇರ ಪ್ರವೇಶ ಪಡೆಯಬಹುದು. 2024-25ನೇ ಸಾಲಿನಲ್ಲಿ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ಶೇ.75ಕ್ಕಿಂತ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಮೊಹಮ್ಮದ್ ಜಿಲಾನಿ ಖುರೇಷಿ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ನೋಡಿ: ರೈತರನ್ನು ಎದುರು ಹಾಕಿಕೊಂಡು ರಾಜ್ಯಭಾರ ಮಾಡ್ತೀರಾ.. ಸಿದ್ರಾಮಯ್ಯನವರೇ? ಎಸ್ ವರಲಕ್ಷ್ಮೀ ಪ್ರಶ್ನೆ Janashakthi
