ಕಸಾಪ ಆಡಳಿತಾಧಿಕಾರಿಯಾಗಿ ನಿರ್ದೇಶಕಿ ಕೆ.ಎಂ. ಗಾಯತ್ರಿ ನೇಮಕ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ಹಣ ಹಾಗೂ ಅಧಿಕಾರ ದುರ್ಬಳಕೆ ಸೇರಿ ವಿವಿಧ ಆರೋಪಗಳ ಹಿನ್ನೆಲೆ, ರಾಜ್ಯ ಸರ್ಕಾರವು ಕಸಾಪಗೆ ಆಡಳಿತಾಧಿಕಾರಿಯಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಕೆ.ಎಂ. ಗಾಯತ್ರಿ ರನ್ನು ನೇಮಿಸಿ ಆದೇಶ ಹೊರಡಿಸಿದೆ.

ಆದೇಶದ ಬೆನ್ನಲ್ಲೇ ಕೆ.ಎಂ. ಗಾಯತ್ರಿ ಅವರು ಕಸಾಪ ಕೇಂದ್ರ ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದ್ದಾರೆ.

ಕಸಾಪದಲ್ಲಿ ಹಣಕಾಸಿನ ಅವ್ಯವಹಾರ ಹಾಗೂ ಅಧಿಕಾರ ದುರ್ಬಳಕೆಯ ಆರೋಪಗಳ ವಿಚಾರಣೆಗೆ ಸಂಬಂಧಿಸಿದಂತೆ ಸಹಕಾರ ಇಲಾಖೆ ಕಳೆದ ಜುಲೈನಲ್ಲಿ ಆದೇಶ ಹೊರಡಿಸಿ ವಿಚಾರಣಾಧಿಕಾರಿಯನ್ನು ನೇಮಕ ಮಾಡಿತ್ತು.

ಇದನ್ನೂ ಓದಿ: ಸೌಜನ್ಯ ಪರ ಹೋರಾಟಗಾರ ಮೇಲೆ ಸುಳ್ಳು ಕೇಸ್‌: ಮನವಿ ನೀಡಲು ಬಂದ ಯುವಕರು ಪೊಲೀಸ್‌ ವಶಕ್ಕೆ

ವಿಚಾರಣೆಗೆ ಸಂಬಂಧಿಸಿದಂತೆ ಕಸಾಪದವರು ನಿಗದಿತ ಕಾಲಾವಧಿಯಲ್ಲಿ ಹಾಜರಾಗದಿರುವುದು, ಅಗತ್ಯ ದಾಖಲಾತಿಗಳನ್ನು ಒದಗಿಸದಿರುವ ಕಾರಣ ನೀಡಿ ಆಡಳಿತಾಧಿಕಾರಿ ನೇಮಿಸುವಂತೆ ಸಹಕಾರ ಇಲಾಖೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಶಿಫಾರಸು ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರಿಂದ ಪ್ರಸ್ತುತ ಅಧ್ಯಕ್ಷರಾಗಿದ್ದ ಮಹೇಶ್ ಜೋಶಿ ಅವರಿಗೆ ತೀವ್ರ ಹಿನ್ನಡೆಯಾದಂತಾಗಿದೆ.

ಮುಂದಿನ ಮೂರು ತಿಂಗಳವರೆಗೆ ಅಥವಾ ಕಸಾಪದ ಹಣಕಾಸಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮುಗಿಯುವವರೆಗೆ ಆಡಳಿತಾಧಿಕಾರಿಯಾಗಿ ಗಾಯತ್ರಿ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ನೋಡಿ: ದ್ವೇಷ ಭಾಷಣ | ನಿಯಂತ್ರಣಕ್ಕೆ ಮೂಗುದಾರವಿದ್ದರೂ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿಷ ಕಾರುತ್ತಿರುವುದು ಯಾಕೆ?

Donate Janashakthi Media

Leave a Reply

Your email address will not be published. Required fields are marked *