ಅತ್ತಿಬೆಲೆ ಪಟಾಕಿ ದುರಂತ: ಮತ್ತೊಬ್ಬ ಸಾವು: ಮೃತರ ಸಂಖ್ಯೆ 17ಕ್ಕೆ ಏರಿಕೆ

ಬೆಂಗಳೂರು: ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಅಕ್ಟೊಬರ್ 7ರಂದು ಸಂಭವಿಸಿದ ಅಗ್ನಿ ದುರಂತ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಯುವಕ ಬುಧವಾರ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಈ  ದುರಂತದಲ್ಲಿ ಮೃತರ ಸಂಖ್ಯೆ 17ಕ್ಕೆ ಏರಿಕೆಯಾಗಿದ್ದು, ತಮಿಳುನಾಡಿನ ವಾಯಂಬಾಡಿ ಮೂಲದ ರಾಜೇಶ್ ಮೃತ ಯುವಕ ಎಂದು ಗುರುತಿಸಲಾಗಿದೆ. ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ರಾಜೇಶ್ ಕೂಲಿ ಕೆಲಸಕ್ಕಾಗಿ ಬಂದಿದ್ದರು.

ದುರಂತ ನಡೆದ ದಿನ ಪಟಾಕಿ ಗೋದಾಮಿನಿಂದ 13 ಶವಗಳನ್ನು ಹೊರ ತೆಗೆಯಲಾಗಿತ್ತು. ಆ ಬಳಿ ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟಿದ್ದರೆ, ಇದೀಗ ಗಂಭೀರವಾಗಿ ಗಾಯಗೊಂಡಿದ್ದ ರಾಜೇಶ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೂ ಹಲವರು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಬೆಂಕಿ ದುರಂತ: ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಅತ್ತಿಬೆಲೆ ಟೋಲ್‌ಗೇಟ್ ಬಳಿಯ ಸರ್ವೀಸ್ ರಸ್ತೆಯಲ್ಲಿರುವ ಶ್ರೀ ಬಾಲಾಜಿ ಕ್ರ್ಯಾಕರ್ಸ್ ಅಂಗಡಿ ಹಾಗೂ ಗೋದಾಮಿನಲ್ಲಿ  ಅ.7ರಂದು ಭಾರಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ 13 ಮಂದಿ ಮೃತಪಟ್ಟಿದ್ದರು.

ವಿಡಿಯೋ ನೋಡಿ: ಅಯ್ಯೋ ಹೊಟ್ಟೆನೋವು| ಹದಿಹರಯದ ಹುಡುಗಿಯರ ಮುಟ್ಟಿನ ಸಮಸ್ಯೆಗಳೇನು? ಡಾ ವೀಣಾ ಎನ್‌ ಸುಳ್ಯ ಹೇಳುವುದೇನು?

Donate Janashakthi Media

Leave a Reply

Your email address will not be published. Required fields are marked *