ಒಂದು ರಾಷ್ಟ್ರ, ಒಂದು ಚುನಾವಣೆ ಸಮಿತಿ ವಿಸರ್ಜಿಸಿ | ಮಾಜಿ ರಾಷ್ಟ್ರಪತಿ ಕೋವಿಂದ್‌ಗೆ ಖರ್ಗೆ ಪತ್ರ

ಹೊಸದಿಲ್ಲಿ: ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ವಿಚಾರವನ್ನು ಶುಕ್ರವಾರ ಬಲವಾಗಿ ವಿರೋಧಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರದ ಈ ನಿರ್ಧಾರವು, ಒಕ್ಕೂಟ ತತ್ವದ ಖಾತರಿಗಳು ಮತ್ತು ಸಂವಿಧಾನದ ಮೂಲ ರಚನೆಗೆ ವಿರುದ್ಧವಾಗಿದೆ ಎಂದು ಹೇಳಿದೆ. ಈ ವಿಚಾರವನ್ನು ಕೈಬಿಡಬೇಕು ಮತ್ತು ಈ ನಿಟ್ಟಿನಲ್ಲಿ ರಚಿಸಲಾಗಿರುವ ಉನ್ನತಾಧಿಕಾರ ಸಮಿತಿಯನ್ನು ವಿಸರ್ಜಿಸಬೇಕೆಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದ್ದಾರೆ. ಕೋವಿಂದ್‌

ಒಂದು ರಾಷ್ಟ್ರ, ಒಂದು ಚುನಾವಣೆ ಸಮಿತಿಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ಸಮಿತಿಯ ಮುಖ್ಯಸ್ಥರಾಗಿರುವ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್‌ ಅವರ ವ್ಯಕ್ತಿತ್ವ ಮತ್ತು ಮಾಜಿ ರಾಷ್ಟ್ರಪತಿಗಳ ಕಚೇರಿಯನ್ನು ಕೇಂದ್ರ ಸರ್ಕಾರವು ಸಂವಿಧಾನ ಮತ್ತು ಸಂಸದೀಯ ಪ್ರಜಾಪ್ರಭುತ್ವವನ್ನು “ಉಲ್ಲಂಘಿಸಲು ದುರುಪಯೋಗಪಡಿಸಿಕೊಳ್ಳಲು” ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಬಿಲ್ಕೀಸ್ ಬಾನೋ ಪ್ರಕರಣ | ಅಪರಾಧಿಗಳ ಶರಣಾಗತಿಗೆ ಸಮಯಾವಕಾಶ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್

“ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಎಂಬ ಕಲ್ಪನೆಯನ್ನು ಬಲವಾಗಿ ವಿರೋಧಿಸುತ್ತದೆ. ಅಭಿವೃದ್ಧಿ ಹೊಂದುತ್ತಿರುವ ಮತ್ತು ದೃಢವಾದ ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲು,  ಈ ಚಿಂತನೆಯನ್ನು ಸಂಪೂರ್ಣವಾಗಿ ಕೈಬಿಡುವುದು ಮತ್ತು ಉನ್ನತ ಅಧಿಕಾರದ ಸಮಿತಿಯನ್ನು ವಿಸರ್ಜಿಸುವುದು ಅನಿವಾರ್ಯವಾಗಿದೆ” ಎಂದು ಸಮಿತಿಯ ಕಾರ್ಯದರ್ಶಿ ನಿತೇನ್ ಚಂದ್ರ ಅವರಿಗೆ ಬರೆದ ಪತ್ರದಲ್ಲಿ ಖರ್ಗೆ ತಿಳಿಸಿದ್ದಾರೆ. ಕೋವಿಂದ್‌

“ಕಾಂಗ್ರೆಸ್ ಪಕ್ಷ ಮತ್ತು ದೇಶದ ಜನತೆಯ ಪರವಾಗಿ, ನಾನು ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷರನ್ನು ವಿನಮ್ರವಾಗಿ ವಿನಂತಿಸುತ್ತೇನೆ. ಅವರ ವ್ಯಕ್ತಿತ್ವ ಮತ್ತು ಭಾರತದ ಮಾಜಿ ರಾಷ್ಟ್ರಪತಿಗಳ ಕಚೇರಿಯನ್ನು ಕೇಂದ್ರ ಸರ್ಕಾರವು ಸಂವಿಧಾನವನ್ನು ಬುಡಮೇಲು ಮಾಡಲು ಮತ್ತು ಈ ದೇಶದಲ್ಲಿ ಸಂಸದೀಯ ಪ್ರಜಾಪ್ರಭುತ್ವ ದುರುಪಯೋಗಪಡಿಸಿಕೊಳ್ಳಲು ಅವಕಾಶ ನೀಡಬೇಡಿ” ಎಂದು ಖರ್ಗೆ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಸಮಿತಿಯ ಕಾರ್ಯದರ್ಶಿ ನಿತೇನ್ ಚಂದ್ರ ಅವರು ಅಕ್ಟೋಬರ್ 18 ರಂದು ‘ಒಂದು ರಾಷ್ಟ್ರ, ಒಂದು ಚುನಾವಣೆ’ಯ ಉದ್ದೇಶಕ್ಕಾಗಿ ಸರ್ಕಾರವು ರಚಿಸಿರುವ ಉನ್ನತ ಮಟ್ಟದ ಸಮಿತಿಯ ಪರಿಗಣನೆಗೆ ಸಲಹೆಗಳನ್ನು ಆಹ್ವಾನಿಸಿದ್ದರು. ಅವರ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಖರ್ಗೆ ಅವರ ಪತ್ರ ಬರೆದಿದ್ದಾರೆ. ಏಕಕಾಲಿಕ ಚುನಾವಣೆಯಂತಹ ಪ್ರಜಾಪ್ರಭುತ್ವ ವಿರೋಧಿ ವಿಚಾರಗಳ ಬಗ್ಗೆ ಮಾತನಾಡುವ ಮೂಲಕ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಬದಲು ಜನರ ಆದೇಶವನ್ನು ಗೌರವಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ, ಸಂಸತ್ತು ಮತ್ತು ಇಸಿಐ ಒಟ್ಟಾಗಿ ಕೆಲಸ ಮಾಡಬೇಕು ಎಂದು ಖರ್ಗೆ ಹೇಳಿದ್ದಾರೆ.

ವಿಡಿಯೊ ನೋಡಿ: ಕೆಮಿಕಲ್​ ಮಿಶ್ರಿತ ನೀರು ಹೊರಹಾಕುತ್ತಿರುವ ಯತ್ನಾಳ ಸಕ್ಕರೆ ಕಾರ್ಖಾನೆ : ಜನರ ಹೊಟ್ಟೆ ಸೇರುತ್ತಿದೆ ವಿಷಕಾರಿ ನೀರು

 

Donate Janashakthi Media

Leave a Reply

Your email address will not be published. Required fields are marked *