ನೂತನ ಸಂಸತ್‌ ಭವನ ಉದ್ಘಾಟನೆಗೆ ರಾಷ್ಟ್ರಪತಿ ಆಹ್ವಾನಿಸದಿರುವುದೇ ಸನಾತನ ಧರ್ಮದ ತಾರತಮ್ಯ: ಉದಯನಿಧಿ ಸ್ಟಾಲಿನ್

ಚೆನ್ನೈ: ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ಅವರನ್ನು ಆಹ್ವಾನಿಸದಿರುವುದೇ ಸತಾನತ ಧರ್ಮದ ಜಾತಿ ವ್ಯವಸ್ಥೆಯಲ್ಲಿರುವ ತಾರತಮ್ಯಕ್ಕೆ ಉದಾಹರಣೆ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್  ಹೇಳಿದ್ದಾರೆ.

ಸನಾತನ ಧರ್ಮವನ್ನು ಡೆಂಗ್ಯೂ ಹಾಗೂ ಮಲೇರಿಯಾಗೆ ಹೋಲಿಸಿ, ಅದರ ನಿರ್ಮೂಲನೆಗೆ ಕರೆ ನೀಡಿದ್ದ ಸ್ಟಾಲಿನ್ ಹೇಳಿಕೆ ಈಗ ದೇಶವ್ಯಾಪಿ ಚರ್ಚೆಗೆ ಕಾರಣವಾಗಿದೆ. ಉತ್ತರ ಪ್ರದೇಶದಲ್ಲಿ ಇವರ ವಿರುದ್ಧ ಹಾಗೂ ಸ್ಟಾಲಿನ್ ಹೇಳಿಕೆ ಬೆಂಬಲಿಸಿದ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಸನಾತನ ಧರ್ಮ ಹೇಳಿಕೆ ಉದಯನಿಧಿ ಸ್ಟಾಲಿನ್‌, ಪ್ರಿಯಾಂಕ್‌ ಖರ್ಗೆ ವಿರುದ್ಧ ಪ್ರಕರಣ ದಾಖಲು

ತಮ್ಮ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡಿರುವ ಉದಯನಿಧಿ, ಯಾವುದೇ ಬೆದರಿಕೆಯನ್ನು ಎದುರಿಸಲು ಸಿದ್ಧ ಎಂದಿದ್ದಾರೆ. ಸನಾತನ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದಾಗಿ ಮನುಷ್ಯರ ನಡುವಿನ ತಾರತಮ್ಯಕ್ಕೆ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಿಂದ ಈಗಿನ ರಾಷ್ಟ್ರಪತಿ ಅವರನ್ನು ದೂರ ಇಟ್ಟಿರುವುದೇ ಸಾಕ್ಷಿ ಎಂದಿರುವುದಾಗಿ ವರದಿಯಾಗಿದೆ.

ಉದಯನಿಧಿ ಸ್ಟಾಲಿನ್ ಅವರ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ. ಇದೇ ವಿಷಯವಾಗಿ ಉದಯನಿಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರನ್ನು ಆಗ್ರಹಿಸಿರುವುದಾಗಿ ಸುಬ್ರಮಣಿಯನ್ ಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *