ಬೆಂಗಳೂರು| ಚುನಾವಣಾ ಅಕ್ರಮಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆ: ಮಲ್ಲಿಕಾರ್ಜುನ ಖರ್ಗೆ

Please follow and like us:
ಬೆಂಗಳೂರು: ಚುನಾವಣಾ ಅಕ್ರಮಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಲಾಗುವುದು ಎಂದು ಜುಲೈ 27ರಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಚುನಾವಣಾ ಅಕ್ರಮಗಳ ಬಗ್ಗೆ ಈಗಾಗಲೇ ಚರ್ಚೆಗಳಾಗುತ್ತಿವೆ. ಅದರ ಕುರಿತು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಚರ್ಚೆ ನಡೆಸುವುದಾಗಿ ತಿಳಿಸಿದರು.

ಇದೇವೇಳೆ ರಾಜ್ಯದಲ್ಲಿನ ನಿಗಮ ಮಂಡಳಿಗಳ ನೇಮಕಾತಿಯ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, ಈ ಕುರಿತು ನನ್ನನ್ನು ಕೇಳಬೇಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಕೇಳಿ ಎಂದು ಹೇಳಿದ್ದಾರೆ. ಬೆಂಗಳೂರು

ಇದನ್ನೂ ಓದಿ: ಕೆರೆ ನೀರಿನ ಹಕ್ಕಿಗಾಗಿ ಪ್ರತಿಭಟನೆ; 9 ಹೋರಾಟಗಾರರ ವಿರುದ್ಧ ಎಫ್‌ಐಆರ್

ಚುನಾವಣಾ ಅಕ್ರಮಗಳ ಬಗ್ಗೆ ರಾಹುಲ್‌ಗಾಂಧಿ ನೀಡಿರುವ ಹೇಳಿಕೆ ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಅದರಲ್ಲೂ ಕರ್ನಾಟಕದಲ್ಲಿನ ಲೋಕಸಭಾ ಕ್ಷೇತ್ರವೊಂದರ ಕುರಿತು ಕಾಂಗ್ರೆಸ್‌‍ ಪಕ್ಷದಿಂದ ವ್ಯಾಪಕ ಅಧ್ಯಯನ ನಡೆಸಲಾಗಿದೆ. ಅಲ್ಪಸಂಖ್ಯಾತರ ಪ್ರದೇಶಗಳಲ್ಲಿ ಮತದಾರರ ಪಟ್ಟಿಯಲ್ಲಿ ಕಡಿತವಾಗಿದೆ. ಇನ್ನೂ ಕೆಲವು ಕಡೆ ಅನಗತ್ಯವಾಗಿ ಹೆಚ್ಚುವರಿ ಸೇರ್ಪಡೆಗಳಾಗಿವೆ ಎಂಬ ಆರೋಪಗಳಿವೆ.

ಮತದಾರರ ಸೇರ್ಪಡೆ ಹಾಗೂ ತೆಗೆದು ಹಾಕುವಿಕೆಯ ಅಕ್ರಮಗಳ ಮೂಲಕವೇ ಬಿಜೆಪಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ ಎಂಬ ಆರೋಪಗಳು ವ್ಯಾಪಕವಾಗುತ್ತಿವೆ. ಕರ್ನಾಟಕದ ಕ್ಷೇತ್ರವೊಂದರ ಅಧ್ಯಯನವನ್ನೊಳಗೊಂಡಂತೆ ದೇಶಾದ್ಯಂತ ನಡೆದಿರುವ ಅಕ್ರಮಗಳನ್ನು ಸಂಸತ್‌ನಲ್ಲಿ ಪ್ರಸ್ತಾಪಿಸುವ ಮೂಲಕ ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ವಿಶ್ಲೇಷಣೆ ನಡೆಸಲು ಕಾಂಗ್ರೆಸ್‌‍ ಮುಂದಾಗಿದೆ. ಬಹುತೇಕ ಸೋಮವಾರ ಸಂಸತ್‌ನಲ್ಲಿ ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್‌‍ ಪ್ರಸ್ತಾಪಿಸಲಿದೆ ಎಂದು ಹೇಳಲಾಗಿದೆ.

ಇದನ್ನೂ ನೋಡಿ: ಶಾಲೆ, ಕಾಲೇಜು ಮತ್ತು ಕ್ಯಾಂಪಸ್ ಗಳಲ್ಲಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ – ಎಸ್‌ಎಫ್‌ಐ ಪ್ರತಿಭಟನೆ Janashakthi

Please follow and like us:
Donate Janashakthi Media

Leave a Reply

Your email address will not be published. Required fields are marked *