ರಾತ್ರಿ ಕರ್ಫ್ಯೂ ಜಾರಿ ಕುರಿತು ನಾಳೆ ಮಹತ್ವ ಸಭೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವ ಕೋವಿಡ್ ಸೋಂಕಿತರ ಸಂಖ್ಯೆಯೊಂದಿಗೆ ಓಮೈಕ್ರಾನ್ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಸೇರಿದಂತೆ ಹಲವು ಬಿಗಿ ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲು ಭಾನು ಬೆಂಗಳೂರಿನಲ್ಲಿ ತಜ್ಞರು, ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಮೈಕ್ರಾನ್ ವಿಚಾರದಲ್ಲಿ ನಮಗೆ ಮಹಾರಾಷ್ಟ್ರ, ಕೇರಳದಿಂದ ಹೆಚ್ಚು ಆತಂತವಿತ್ತು. ಇದೀಗ ತಮಿಳುನಾಡಿನಲ್ಲಿಯೂ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಕ್ರಮ, ಹೊಸ ವರ್ಷಾಚರಣೆ ಬಗ್ಗೆಯೂ ಚರ್ಚಿಸಲಾಗುವುದು ಎಂದರು.

ರಾಜ್ಯದಲ್ಲಿ ನೆನ್ನೆಯ ವರದಿಯಂತೆ 400ಕ್ಕೂ ಹೆಚ್ಚು ಕೋವಿಡ್ ಸೋಂಕು ಹೊಸ ಪ್ರಕರಣಗಳು ದಾಖಲಾಗಿವೆ. ಅದರೊಂದಿಗೆ ಓಮೈಕ್ರಾನ್  ಸಂಬಂಧಿಸಿದ ಪ್ರಕರಣಗಳು ಹೆಚ್ಚಳವಾಗುತ್ತಿವೆ.

ನಾಳೆ ಬೆಂಗಳೂರಿಗೆ ಹಿಂತಿರುಗಿದ ತಕ್ಷಣ ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ನಡೆಸಲಾಗುವುದು. ತಜ್ಞರು ನೀಡುವ ಶಿಫಾರಸ್ಸುಗಳ ಆಧಾರದ ಮೇಲೆ ಸರ್ಕಾರ ಮುಂದಿನ ಕ್ರಮ ತೆಗೆದುಕೊಳ್ಳಲಿದೆ. ಯಾವೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚಿಸಿದ ಬಳಿಕ ಸರ್ಕಾರದ ನಿಲುವು ಪ್ರಕಟವಾಗಲಿದೆ ಎಂದರು.

ಈಗಾಗಲೇ ಹೊಸ ವರ್ಷಕ್ಕೆ ನಿಬಂಧನೆಗಳನ್ನು ಹಾಕಿರುವ ಕಾರಣ ಜಿಲ್ಲಾ ಕೇಂದ್ರಗಳಲ್ಲೂ ಇದೇ ನಿಯಮವನ್ನು ಜಾರಿ ಮಾಡಲು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ. ರಾಜ್ಯದ ಮಂಗಳೂರು, ಕಾರವಾರ, ಉಡುಪಿ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ ಹೀಗೆ ಪ್ರವಾಸಿ ಕೇಂದ್ರಗಳನ್ನು ಹೊಂದಿರುವ ಜಿಲ್ಲೆಗಳಲ್ಲಿ ಜನಸಂದಣಿಯಾಗದಂತೆ ನಿರ್ಬಂಧ ವಿಸುವ ಸಂಭವವೂ ಹೆಚ್ಚಾಗಿದೆ. ಒಟ್ಟಾರೆ ನಾಳೆ ನಡೆಯಲಿರುವ ಮಹತ್ವದ ಸಭೆಯಲ್ಲಿ ಸರ್ಕಾರದ ಯಾವೆಲ್ಲ ದಿಟ್ಟ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂಬುದು ಗೊತ್ತಾಗಲಿದೆ.

Donate Janashakthi Media

Leave a Reply

Your email address will not be published. Required fields are marked *