ಬೆಂಗಳೂರು: ಬಿಜೆಪಿ ಮತ್ತು ಎನ್‍ಡಿಎ ಮಿತ್ರ ಕೂಟ 295ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಸ್ವಾತಂತ್ರ್ಯ ಬಂದ ಬಳಿಕ ಕಾಂಗ್ರೆಸ್ಸೇತರ ಪಕ್ಷ ಬಿಜೆಪಿ ಸತತವಾಗಿ ಮೂರನೇ ಬಾರಿಗೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವುದು ಪ್ರತಿಯೊಬ್ಬರೂ ಸಂತೋಷ ಪಡುವ ವಿಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲೂ ಬಿಜೆಪಿ- ಜೆಡಿಎಸ್ ಪಕ್ಷ ಒಟ್ಟಾಗಿ ಚುನಾವಣೆ ಎದುರಿಸಿದ್ದು, 17 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷ ಗೆದ್ದಿವೆ. ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಭ್ರಮೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದೆ ಎಂದು ವಿಶ್ಲೇಷಿಸಿದರು.
ಇದನ್ನು ಓದಿ : ರಾಹುಲ್ ಗಾಂಧಿಗೆ ಮುನ್ನಡೆ
ತಮ್ಮ ಗ್ಯಾರಂಟಿಗಳ ಮೂಲಕ ಕರ್ನಾಟಕಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಕಾಂಗ್ರೆಸ್ಸಿಗರ ಕನಸು ಇವತ್ತು ಭಗ್ನವಾಗಿದೆ ಎಂದ ಅವರು, ಬಿಜೆಪಿ- ಜೆಡಿಎಸ್ ಪಕ್ಷದ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಎರಡೂ ಪಕ್ಷಗಳ ಮುಖಂಡರು, ವಿಶೇಷವಾಗಿ ಎರಡೂ ಪಕ್ಷಗಳ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
ಗ್ಯಾರಂಟಿಗಳ ಬಗ್ಗೆ ಸಾಕಷ್ಟು ಚರ್ಚೆಗಳಾಗಿತ್ತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮಗೆ ಹಿನ್ನಡೆ ಆಗಿತ್ತು. ಇದೆಲ್ಲವನ್ನೂ ಮೀರಿ ನಮ್ಮ ರಾಜ್ಯದ ಪ್ರಜ್ಞಾವಂತ ಮತದಾರರು ದೇಶದ ಭವಿಷ್ಯ ರೂಪಿಸುವ ಚುನಾವಣೆ, ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ದೃಷ್ಟಿಯಿಂದ ಸಂಪೂರ್ಣ ಬೆಂಬಲ ನೀಡಿದ್ದಾರೆ. ಆದ್ದರಿಂದ ನಮ್ಮ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಇದನ್ನು ನೋಡಿ : ಜನಮತ 2024 – ಕರ್ನಾಟಕದಲ್ಲಿ ಕಾಂಗ್ರೆಸ್ ನಿರೀಕ್ಷಿತ ಸ್ಥಾನಗಳಿಸದಿರಲು ಕಾರಣವೇನು? Janashakthi Media