ಬೆಂಗಳೂರು ಫೆ 15 : ರೈತ ಹೋರಾಟದ ಕುರಿತು ಪರಿಸರ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಹಂಚಿಕೊಂಡಿದ್ದ ಟೂಲ್‌ಕಿಟ್ ಪ್ರಕರಣದಲ್ಲಿ ಬಂಧನವಾಗಿರುವ ಬೆಂಗಳೂರಿನ ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನ ಖಂಡಿಸಿ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ದಿಶಾ ಬಂಧನ ಕಾನೂನು ವಿರೋಧಿಯಾಗಿದ್ದು, ರಾಜ್ಯದ ಪೊಲೀಸರಿಗೆ ಮಾಹಿತೆ ಇಲ್ಲದೆ ದಿಶಾರವರನ್ನು ಬಂಧಿಸಿದ್ದು ಸರಿಯಾದ ಕ್ರಮವಲ್ಲ ಎಂದು ಪ್ರತಿಭಟನೆಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ವಕೀಲ ವಿನಯ್ ಶ್ರೀನಿವಾಸ, ರೈತ ಮುಖಂಡ ಬಡಗಲಪುರ ನಾಗೇಂದ್ರ. ಜೆ.ಎಮ್.ಎಸ್ ನ ಕೆ.ಎಸ್. ವಿಮಲಾ, ಗೌರಮ್ಮ, ಎಸ್.ಎಫ್,ಐ ನ ಭೀಮನಗೌಡ, ದಿಲಿಪ್ ಶೆಟ್ಟಿ, ಶಿವಕುಮಾರ್ ಮ್ಯಾಗಳಮನಿ, ಎ.ಐ.ಎಸ್.ಎ ನ ಕಿಶನ್ , ಅವನಿ ಚೋಕ್ಸಿ ಸೇರಿದಂತೆ ವಕೀಲರು, ರೈತ ಮುಖಂಡರು, ವಿದ್ಯಾರ್ಥಿ ಸಂಘಟನೆಗಳ ಸಹಿತ ಜನಪರ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು.
ಸಿದ್ಧರಾಮಯ್ಯ ಆಕ್ರೋಶ : ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡಿ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಿತ ಹೆಣ್ಣುಮಕ್ಕಳು ತಮ್ಮನ್ನು ಪ್ರಶ್ನಿಸಿದರೆ ಬಂಧಿಸಿ ಜೈಲಿಗೆ ಹಾಕುತ್ತಾರೆ. ದಿಶಾ ರವಿ ಬಂಧನ ಪ್ರಜೆಗಳ ಮೇಲಿನ ದೌರ್ಜನ್ಯ ಮಾತ್ರವಲ್ಲ, ಮಹಿಳೆಯರ ಮೇಲಿನ ದೌರ್ಜನ್ಯವೂ ಹೌದು ಎಂದು ಕೇಂದ್ರ ಸರಕಾರದ ನಡೆಯನ್ನು ವಿರೋಧಿಸಿದ್ದಾರೆ.