ಬೆಂಗಳೂರು: 5 ಕೆಜಿ ಪಡಿತರ ಧಾನ್ಯವನ್ನು ಅನ್ನ ಭಾಗ್ಯ ಯೋಜನೆ ಫಲಾನುಭವಿಗಳ ಪ್ರತಿ ವ್ಯಕ್ತಿಗೆ ನೀಡುತ್ತಿದ್ದು, ಉತ್ತರ ಕರ್ನಾಟಕದ ಭಾಗದಲ್ಲಿ 2 ಕೆಜಿ ಅಕ್ಕಿಯ ಜೊತೆಗೆ 3 ಕೆಜಿ ಜೋಳವನ್ನು ವಿತರಿಸಲು ತೀರ್ಮಾನಿಸಲಾಗಿದೆ ಎಂದು ಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ. ಹೆಚ್. ಮುನಿಯಪ್ಪ ಹೇಳಿದರು. ಅಕ್ಕಿ
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ಮತ್ತು ವಸತಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹ್ಮದ್ ಖಾನ್ ರವರ ನೇತೃತ್ವದಲ್ಲಿ ಅಧಿಕಾರಿಗಳೊಂದಿಗೆ ವಿಧಾನ ಸೌಧದದಲ್ಲಿ ಸಭೆ ನಡೆಸಿದ ಬಳಿಕ ಕೆ. ಹೆಚ್. ಮುನಿಯಪ್ಪ ಮಾತನಾಡಿದರು. ಅಕ್ಕಿ
ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಜೋಳ ಬೆಳೆಯವ ಜಿಲ್ಲೆಗಳು ಹಾಗೂ ರಾಜ್ಯದಾದ್ಯಂತ ಹಿಂಗಾರು ಹಂಗಾಮಿನ ಅವಧಿಯಲ್ಲಿ ಹೆಚ್ಚಿನ ಜೋಳವನ್ನು ಬೆಳೆಯುವ ಜಿಲ್ಲೆಗಳಲ್ಲಿ ಸರ್ಕಾರದ ವತಿಯಿಂದ ಬೆಂಬಲ ಬೆಲೆ ಯೋಜನೆಯಡಿ 2024-2025 ನೇ ಸಾಲಿನಲ್ಲಿ ಒಂದು ಲಕ್ಷ ಕ್ವಿಂಟಾಲ್ (LMT) ಜೋಳವನ್ನು ರೈತರಿಂದ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಖರೀದಿಸಲು ತೀರ್ಮಾನಿಸಿದ್ದು, ಪ್ರತಿ ಕ್ವಿಂಟಾಲ್ ಜೋಳದ ಧರ ಹೈಬ್ರೀಡ್ 3371 ಮಾಲ್ದಂಡಿ ಜೋಳಕ್ಕೆ ಪ್ರತಿ ಕ್ವಿಂಟಾಲ್ ಗೆ 3421 ಧರವನ್ನು ನಿಗಧಿಪಡಿಸಲಾಗಿದೆ ಎಂದು ಹೇಳಿದರು.
ಇದನ್ನೂ ಓದಿ: ಕೆಎಸ್ಸಾರ್ಟಿಸಿ ಬಸ್ ಪುನಃ ಓಡಿಸಲು ಪ್ರತಿಭಟನೆ – ಪರ್ಮಿಟ್ ಇದ್ದೂ ಓಡಿಸದ ಖಾಸಗೀ ಬಸ್ ಮಾಲೀಕರ ಪರವಾನಿಗೆ ರದ್ದಿಗೆ ಆಗ್ರಹ
ಈಗಾಗಲೇ ನೊಂದಾಯಿಸಿದ ರೈತರು ಹಾಗೂ ಹೊಸದಾಗಿ ನೊಂದಾಯಿಸುವ ರೈತರು ಸಹ ತಾವು ಬೆಳೆದ ಬೆಲೆಯನ್ನು ನಿರ್ದಿಷ್ಟ ಖರೀಧಿ ಕೇಂದ್ರದ ಸ್ಥಳದಲ್ಲಿ ನೊಂದಣಿ ಮಾಡಿಕೊಂಡು ಸರ್ಕಾರಕ್ಕೆ ನೀಡಲು ಕೋರಿದೆ ಎಂದು ಹೇಳಿದರು. ಇನ್ನು, ಹಸಿರು ಕ್ರಾಂತಿಯ ಹರಿಕಾರರಾದ ಬಾಬು ಜಗಜೀವನ್ ರಾಮ್ ರವರು ಈ ದೇಶದಲ್ಲಿ ಹಲವಾರು ಯೋಜನೆಗಳ ರೂಪಿಸಿದ ಪರಿಣಾಮ ಇಂದಿಗೂ ಅವರು ಅಜರಾಮರರಾಗಿದ್ದಾರೆ ಅವರು ಸೋಲಿಲ್ಲದೆ ಎಂಟು ಬಾರಿ ಸಂಸದರಾಗಿ ಆಯ್ಕೆ ಯಾದ ಕೀರ್ತಿ ಅವರಿಗೆ ಸಲ್ಲುತ್ತದೆ.
ಒಳಮೀಸಲಾತಿ ವಿಚಾರವಾಗಿ ಸುಪ್ರೀಂ ಕೋರ್ಟ್ ನ ಮಹತ್ತದ ತೀರ್ಪಿನಿಂದಾಗಿ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯದವರಿಗೆ ಒಂದು ಸುವರ್ಣಯುಗ ಮುಂದಿನ ತಿಂಗಳಲ್ಲಿ ಪ್ರಾರಂಭವಾಗುತ್ತದೆ ಈಗಾಗಲೇ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ಏಕ ಸದಸ್ಯ ಆಯೋಗದ ಮೂಲಕ ಮಧ್ಯಂತರ ವರದಿ ಸಲ್ಲಿಸಿದ್ದು ನಿರ್ದಿಷ್ಟ ದತ್ತಾಂಶಗಳ ಸಂಗ್ರಹಣೆಗಾಗಿ ಪರಿಶಿಷ್ಠ ಜಾತಿಯ 101 ಜಾತಿಗಳ ಸಮೀಕ್ಷೆ ನಡೆಸಲು ಸಿದ್ದತೆ ನಡೆಸುತ್ತಿದ್ದು ಅತೀ ಶೀಘ್ರವಾಗಿ ದತ್ತಾಂಶದ ಸಂಗ್ರಹಣೆಯಾಗಲಿದೆ ಮುಂದಿನ ದಿನಗಳಲ್ಲಿ ಈ ಸಮುದಾಯಕ್ಕೆ ಉತ್ತಮ ದಿನಗಳು ಬರಲಿದ್ದು ಯುವಕರಿಗೆ ಉದ್ಯೋಗಗಳನ್ನು ಕಲ್ಲಿಸಲು ಸಹಕಾರಿಯಾಗಲಿದೆ ಎಂದರು.
ಇದನ್ನೂ ನೋಡಿ: ಪಹಲ್ಗಾಮ್ ದಾಳಿ : ಸಂಜೆ ರಾಜ್ಯಕ್ಕೆ ಆಗಮಿಸಲಿದೆ ಮಂಜುನಾಥ್ ಮೃತದೇಹ Janashakthi Media