ಬೆಂಗಳೂರು: ಅಶ್ಲೀಲ ಪೆನ್‌ಡ್ರೈವ್ ಹಂಚಿಕೆ ವೈರಲ್ ಆರೋಪದ ಪ್ರಕರಣದಡಿ ಬಿಜೆಪಿಯ ಪ್ರೀತಂಗೌಡ ವಿರುದ್ಧ ದೂರು ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ವಿರುದ್ಧ 4ನೇ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ಸಂತ್ರಸ್ತೆಯ ವಿಡಿಯೋ ಹಂಚಿಕೆ ಆರೋಪದಲ್ಲಿ ಹಾಸನ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ, ಸೇರಿದಂತೆ ಇತರ ಮೂವರ ವಿರುದ್ಧವೂ ಪ್ರಕರಣ ದಾಖಲಾಗಿದೆ.ಪೆನ್‌ಡ್ರೈವ್ ಹಂಚಿಕೆ ಆರೋಪದಡಿ ಎಸ್‌ಐಟಿ ಈ ಹಿಂದೆ ಪ್ರೀತಂಗೌಡರ ಇಬ್ಬರು ಆಪ್ತರನ್ನು ಬಂಧಿಸಿದೆ.
ಇದನ್ನು ಓದಿ : ಹಾಲಿನ ದರ ಹೆಚ್ಚಳ:ನಾಳೆಯಿಂದಲೇ ಪರಿಷ್ಕೃತ ದರ ಜಾರಿ
ಇದೀಗ ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಬಿಜೆಪಿಯ ಪ್ರೀತಂ ಗೌಡ ಹಾಗೂ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಸಂತ್ರಸ್ತೆಯೊಬ್ಬರ ಅಶ್ಲೀಲ ವಿಡಿಯೋಗಳನ್ನು ಹಂಚಿಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣದ ದಾಖಲು ಮಾಡಿಕೊಳ್ಳಲಾಗಿದ್ದು, ಪ್ರೀತಂಗೌಡ ಮತ್ತು ಇತರ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಈ ಬಗ್ಗೆ ಪ್ರೀತಂಗೌಡ, ಈ ವಿಚಾರ ತಮಗೆ ತಿಳಿದಿಲ್ಲ. ತಿಳಿದುಕೊಂಡ ಬಳಿಕ ಪ್ರತಿಕ್ರಿಯಿಸುವುದಾಗಿ ಹೇಳಿದ್ದಾರೆ.
ಇದನ್ನು ನೋಡಿ : ಅಂಗನವಾಡಿಗಳ ಕತ್ತು ಹಿಸುಕಬೇಡಿ – ಕಾರ್ಯಕರ್ತರನ್ನು ತರಬೇತಿಗೊಳಿಸಿ Janashakthi Media