ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ರೈತ ಸಂಘದ ಜಿಲ್ಲಾಧ್ಯಕ್ಷ ಬಂಧನ

ಕೋಲಾರ: ಜಿಲ್ಲೆಯ ಬಂಗಾರಪೇಟೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷನನ್ನುಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ಬಂಧಿಸಿರುವ ಘಟನೆ  ನಡೆದಿದೆ.

ರಾಮೇಗೌಡ ಬಂಧಿತ ಆರೋಪಿ. 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ, ಬಾಲಕಿಯನ್ನು ಗರ್ಭವತಿಯನ್ನಾಗಿ ಮಾಡಿದ್ದಾನೆ. ಸಂತ್ರಸ್ತೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾಳೆ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ವಿಷಯ ಮನೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ: ವಿಎಸ್ ಅಚ್ಯುತಾನಂದನ್ ಇದ್ದಿದ್ದರೆ “ಪದ್ಮ ವಿಭೂಷಣ”ವನ್ನು ಕಿರು ಬೆರಳಿನಲ್ಲೂ ಮುಟ್ಟುತ್ತಿರಲಿಲ್ಲ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ರಾಮೇಗೌಡ, ವಿಷಯ ಬಾಯ್ಬಿಡದಂತೆ ಬೆದರಿಕೆ ಹಾಕಿದ್ದ. ಇದರಿಂದ ಬಾಲಕಿ ತನ್ನ ಮೇಲಿನ ದೌರ್ಜನ್ಯವನ್ನು ಯಾರಿಗೂ ಹೇಳದೇ ಸುಮ್ಮನಿದ್ದಳು. ಆದರೆ ಗರ್ಭವಿತಿಯಾಗುತ್ತಿದ್ದಂತೆ ಮನೆಯಲ್ಲಿ ವಿಷಯ ಗೊತ್ತಾಗಿದೆ.

ಸಂತ್ರಸ್ತೆಯ ಕುಟುಂಬ ರಾಮೇಗೌಡ ವಿರುದ್ಧ ಬಂಗಾರಪೇಟೆ ಠಾಣೆಯಲ್ಲಿ ದೂರು ನೀಡಿದೆ. ಈ ಹಿನ್ನೆಲೆಯಲ್ಲಿ ಬಂಗಾರಪೇಟೆ ಠಾಣೆ ಪೊಲೀಸರು ಪೋಕ್ಸೋ ಕೇಸ್ ದಾಖಲಿಸಿಕೊಂಡು, ರಾಮೇಗೌಡನನ್ನು ಬಂಧಿಸಿದ್ದಾರೆ.

ಇದನ್ನೂ ನೋಡಿ: ಸತ್ಯಾನ್ವೇಷಣೆ 100 | ಸತ್ಯದೊಂದಿಗೆ ಮಾಡಿದ ಪ್ರಯೋಗಗಳ ಅನುಸಂಧಾನವೇ ಗಾಂಧೀಜಿಯವರ ಆತ್ಮಕಥನ – ಡಾ. ಮೀನಾಕ್ಷಿ ಬಾಳಿ

Donate Janashakthi Media

Leave a Reply

Your email address will not be published. Required fields are marked *