ಹುಬ್ಬಳ್ಳಿ: ಮೂರು ತಿಂಗಳಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ತಿಳಿಸಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರ ಕೇಂದ್ರೀಕೃತ ಅಧಿಕಾರದ ಪರವಾಗಿದ್ದರಿಂದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಿಲ್ಲ. ಬಿಜೆಪಿಯವರು ಸೃಷ್ಟಿಸಿದ ಗೊಂದಲ ನಿವಾರಿಸುವುದಕ್ಕಾಗಿಯೇ ಚುನಾವಣೆ ವಿಳಂಬವಾಗಿದೆ. ಈಗ ಚುನಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪಹಲ್ಗಾಂ ಭಯೋತ್ಪಾದಕ ದಾಳಿ ಹಿನ್ನೆಲೆ: ಅಮಿತ್ ಶಾ ಶ್ರೀನಗರಕ್ಕೆ ಭೇಟಿ, ಉನ್ನತ ಮಟ್ಟದ ಭದ್ರತಾ ಸಭೆ
ಮೂರು ತಿಂಗಳಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಿದ್ದು, ಎಂಟು ತಿಂಗಳ ಬಳಿಕ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ನೋಡಿ: ಕೇಂದ್ರದ ತಪ್ಪು ನೀತಿಗಳೇ ಬೆಲೆ ಏರಿಕೆಗೆ ಕಾರಣ – ಸಿಎಂ ಸಿದ್ದರಾಮಯ್ಯ Janashakthi Media