ಚೆನ್ನೈ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಯನ್ನು ಬಳಸಿ ಜನರನ್ನು ಒಡೆಯಲು ಪ್ರಯತ್ನಿಸುತ್ತಿದೆ ಎಂದು ತಮಿಳು ನಟ ಮತ್ತು ಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ದಳಪತಿ ವಿಜಯ್ ಆರೋಪಿಸಿದ್ದಾರೆ.
ಸಿಎಎ ಸ್ವೀಕಾರಾರ್ಹವಲ್ಲ. ಯಾವುದೇ ಕಾರಣಕ್ಕೂ ಇದನ್ನು ತಮಿಳುನಾಡಿನಲ್ಲಿ ಜಾರಿಯಾಗಲು ಬಿಡಬಾರದು ಎಂದು ಹೇಳಿದ್ದಾರೆ.
ಇದನ್ನು ಓದಿ : ಮಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಬಿಜೆಪಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್ಗೆ ವಾರೆಂಟ್
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕಿಂತ ಮೊದಲು ದಾಖಲೆ ರಹಿತವಾಗಿ ಬಂದಿರುವ ಮುಸ್ಲಿಮೇತರ ವಲಸಿಗರಿಗೆ ಪೌರತ್ವವನ್ನು ನೀಡುವ ಕಾನೂನನ್ನು 201೯ರಲ್ಲಿ ಸಂಸತ್ತು ಅಂಗೀಕರಿಸಿದ ನಾಲ್ಕು ವರ್ಷಗಳ ಬಳಿಕ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿ ಸೋಮವಾರ ಇದನ್ನು ಜಾರಿ ಗೊಳಿಸಿದೆ.
ಈ ಕಾನೂನನ್ನು ತಮಿಳುನಾಡಿನ ಇತರ ಪಕ್ಷದ ನಾಯಕರೂ ಟೀಕಿಸಿದ್ದಾರೆ. ಸಾಮಾಜಿಕ ಸಾಮರಸ್ಯದಿಂದ ದೇಶದಲ್ಲಿ ಜನರು ಬದುಕುತ್ತಿದ್ದಾರೆ. ಈ ನಡುವೆ ಭಾರತೀಯ ಪೌರತ್ವ ತಿದ್ದುಪಡಿ ಕಾಯಿದೆ 2019 (ಸಿಎಎ) ನಂತಹ ಯಾವುದೇ ಕಾನೂನನ್ನು ಜಾರಿಗೆ ತರುವುದು ಸರಿಯಲ್ಲ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಇದನ್ನು ನೋಡಿ : RSS ನವರು “ಬಾಂಬ್ ವಿದ್ಯಾ ಪ್ರವೀಣರು, ಅಪಪ್ರಚಾರದ ಪ್ರವೀಣರು..” – ಸುಧೀರ್ ಕುಮಾರ್ ಮರೋಳಿ Janashakthi Media