ರಾಮನಗರ: ಕಾವೇರಿ ನದಿ ನೀರಿನ ವಿಚಾರವನ್ನು ನಿಭಾಯಿಸುವಲ್ಲಿ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಕಿಡಿಕಾರಿದರು.
ಇದನ್ನೂ ಓದಿ:ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತೀರ್ಪನ್ನು ನಾವು ಗೌರವಿಸಬೇಕು: ಡಿಕೆ ಶಿವಕುಮಾರ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಡಿ.ಕೆ.ಶಿವಕುಮಾರ್ ಗೆ ಕಾವೇರಿ ಕೊಳ್ಳದ ಅಂದರೆ ಕರ್ನಾಟಕ ಜನರ ಕಷ್ಟ ಗೊತ್ತಿಲ್ಲ. ಕಾವೇರಿ ನೀರು ಉಳಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕೆಂಬ ಮನಸ್ಸಿಲ್ಲ. ಅವರು ರಾಜಕೀಯ ದುರದ್ದೇಶದಿಂದ ಇಂಡಿಯಾ ಮೈತ್ರಿ ಕೂಟದಲ್ಲಿರುವ ಡಿಎಂಕೆ ಪಕ್ಷಕ್ಕೆ ಅನುಕೂಲ ಮಾಡಿಕೊಡಬೇಕೆಂಬ ಉದ್ದೇಶದಿಂದ ಕಾವೇರಿ ನೀರನ್ನು ನಿರಾಂತಕವಾಗಿ ಹರಿಸುತ್ತಿದ್ದಾರೆ ಎಂದು ಟೀಕಿಸಿದರು.
ತಮಿಳುನಾಡು ಸಿಎಂ ಸ್ಟಾಲಿನ್ ಮತ್ತು ಡಿ.ಕೆ. ಶಿವಕುಮಾರ್ ಗೂ ಸಂಬಂಧ ಇದೆ. ಅವರಿಬ್ಬರು ಒಳ್ಳೆಯ ಸ್ನೇಹಿತರು. ಬೆಂಗಳೂರಿನಲ್ಲಿ ವ್ಯಾಪಾರ, ವ್ಯವಹಾರ ಸಂಬಂಧ ಇದೆ. ಇವರಿಬ್ಬರು ರಾಜಕೀಯವಾಗಿ ಪಾರ್ಟ್‌ನರ್ಸ್. ರಾಜಕೀಯ ಲಾಭಕ್ಕಾಗಿ ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ. ಆದ್ದರಿಂದ ಕರ್ನಾಟಕ, ಮಂಡ್ಯ, ರಾಮನಗರ ಜನರ ಹಿತಾಸಕ್ತಿ ಮುಖ್ಯವಾಗಿಲ್ಲ. ಹಳೇ ಮೈಸೂರು ಭಾಗದಲ್ಲಿ ಇರುವುದು ಒಂದೇ ಜಲಾಶಯ. ನೀರು ಬರಿದಾದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ತೊಂದರೆ ಉಂಟಾಗುತ್ತದೆ. ಸಮಸ್ಯೆ ಬಂದಾಗ ಮೇಕೆದಾಟು ಯೋಜನೆ ಅಂತ ಡ್ರಾಮಾ ಮಾಡುತ್ತಾರೆ. ಡಿ.ಕೆ. ಶಿವಕುಮಾರ್ ಅವರಿಂದ ನಾಡಿನ ಜನರು ಏನನ್ನೂ ನಿರೀಕ್ಷೆ ಮಾಡಲಾಗದು ಎಂದು ಯೋಗೇಶ್ವರ್ ವಾಗ್ದಾಳಿ ನಡೆಸಿದರು. ಕಾವೇರಿ ನೀರು ವಿಚಾರ