ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತಮ್ಮ ವಿರುದ್ಧ ದಾಖಲಿಸಿರುವ ದೂರನ್ನು ರದ್ದುಗೊಳಿಸಬೇಕೆಂದು ಸಲ್ಲಿಸಿದ್ದ ಮೇಲನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ನ್ಯಾಯಾಲಯದ ಈ ಆದೇಶದಿಂದಾಗಿ ಕಾನೂನು ಹೋರಾಟದಲ್ಲಿ ಡಿ.ಕೆ.ಶಿವಕುಮಾರ್ ಗೆ ಭಾರೀ ಹಿನ್ನಡೆ ಉಂಟಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್ಸಿ ಶರ್ಮಾ ರಿದ್ದ ದ್ವಿಸದಸ್ಯ ಪೀಠವು ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ಕ್ಷಮಿಸಿ ನಿಮ್ಮ ಅರ್ಜಿಯನ್ನು ವಜಾಗೊಳಿಸುತ್ತೇವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ನ ದ್ವಿಸದಸ್ಯ ಪೀಠ ಮೂರು ತಿಂಗಳೊಳಗೆ ಶಿವಕುಮಾರ್ ಮೇಲಿನ ಆರೋಪದ ಕುರಿತು ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಿದೆ.
ಇದನ್ನೂ ಓದಿ: ಮೊಹರಂ: ಜನತೆಯ ಧರ್ಮ
ಈ ವೇಳೆ ಡಿ.ಕೆ.ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಕಾಯ್ದೆಯಡಿ ಈಗಾಗಲೇ ಕಾನೂನು ಕ್ರಮ ಜರುಗಿಸಲಾಗಿದೆ. ಸಿಬಿಐ ಕೂಡ ಅದರ ವಿಚಾರಣೆ ನಡೆಸುವುದು ಹೇಗೆ? ಇದು ಅಕ್ರಮ ಎಂದು ವಾದ ಮಂಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ ನಿಮ ಮೇಲೆ ಇಸಿ ಆಕ್ಟ್ ನಡಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇಸಿ ಆಕ್ಟ್ನಡಿ ಆದಾಯ ತೆರಿಗೆ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ ನಾವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಅರ್ಜಿಯನ್ನು ವಜಾಗೊಳಿಸಿತು.
ಏನಿದು ಪ್ರಕರಣ?:
2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿ.ಕೆ.ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಇಡಿ ಡಿಕೆಶಿ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಈ ಎಫ್‌ಐಆರ್ನ್ನು ರದ್ದುಗೊಳಿಸುವಂತೆ ಕೋರಿ ಡಿಕೆಶಿ ಹೈಕೋರ್ಟ್, ಸುಪ್ರೀಂ ಮೊರೆ ಹೋಗಿದ್ದರು. ಡಿಕೆ ಶಿವಕುಮಾರ್ ಅವರು 2013 ಮತ್ತು 2018 ರ ನಡುವೆ ತಮ್ಮ ಆದಾಯಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಯನ್ನು ಗಳಿಸಿದ್ದಾರೆ . ಈ ಅವಧಿಯಲ್ಲಿ ಅವರು ಸಚಿವರಾಗಿದ್ದರು ಎಂದು ಸಿಬಿಐ ಆರೋಪಿಸಿದೆ.ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ನೇತೃತ್ವದ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಇಂಧನ ಸಚಿವರಾಗಿದ್ದಾಗ, 2013 ರ ಏಪ್ರಿಲ್ 1 ರಿಂದ 2018 ರ ಏಪ್ರಿಲ್ 30 ಅವಧಿಯಲ್ಲಿ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ. 74.93 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.
2017 ರಲ್ಲಿ ಶಿವಕುಮಾರ್ ಮನೆ ಮತ್ತು ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಗಳ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ ಕೂಡ ವಿರುದ್ಧ ಡಿಕೆ ಶಿವಕುಮಾರ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತ್ತು. ಇ.ಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯ ಸರ್ಕಾರವು 2019 ರ ಸೆಪ್ಟೆಂಬರ್ 25ರಂದು ಅನುಮತಿ ನೀಡಿತ್ತು. ಅದರಂತೆ, ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರ ಅಕ್ಟೋಬರ್ 3 ರಂದು ಎಫ್‌ಐಆರ್ ದಾಖಲಿಸಿತ್ತು. ಸುಮಾರು ಶೇ.45 ಅಥವಾ ರೂ. 75 ಕೋಟಿ ರೂ.ರಷ್ಟು ಏರಿಕೆಯಾಗಿದೆ ಎಂದು ಸಿಬಿಐ ತನ್ನ ಅರ್ಜಿಯಲ್ಲಿ ಆರೋಪಿಸಿತ್ತು.
ಈಗಲ್ಟನ್ ರೆಸಾರ್ಟ್ನಲ್ಲಿ ನಡೆದ ದಾಳಿಯನ್ನು ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಸಿಬಿಐ ತನಿಖೆಗೆ ನೀಡಿತ್ತು. ಸರ್ಕಾರದ ನಡೆಯನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.2017ರಲ್ಲಿ ಡಿ.ಕೆ ಶಿವಕುಮಾರ್ ವಾಸ್ತವ್ಯವಿದ್ದ ಈಗಲ್ಟನ್ ರೆಸಾರ್ಟ್ ಮತ್ತು ಅವರ ಸಹಚರರ ಮೇಲೆ ದಾಳಿ ಮೇಲೆ ದಾಳಿ ಮಾಡಿದ್ದ ಆದಾಯ ತೆರಿಗೆ ಇಲಾಖೆ ಸುಮಾರು 8.59 ಕೋಟಿ ಹಣ ವಶಪಡಿಸಿಕೊಂಡಿತ್ತು. ಲೆಕ್ಕಕ್ಕೆ ಸಿಗದ ಈ ಹಣವನ್ನು ಡಿ.ಕೆ ಶಿವಕುಮಾರ್ ತಮ್ಮ ಸಹಚರರ ಬಳಿ ಇರಿಸಿದ್ದರು ಎಂದು ಆರೋಪಿಸಿತ್ತು.
ಇದೇ ಪ್ರಕರಣದಲ್ಲಿ ಇಡಿ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ವಿರುದ್ಧ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು.ಸರ್ಕಾರ 2019ರ ಸೆ.25ರಂದು ಅನುಮತಿ ನೀಡಿದ ಬೆನ್ನಲ್ಲೇ 2020ರ ಅಕ್ಟೋಬರ್ 3 ರಂದು ಡಿಕೆ ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. 2013ರಿಂದ 2018ರ ವರೆಗಿನ ಆದಾಯಗಳಿಕೆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.
ಇದನ್ನೂ ನೋಡಿ: ಹಟ್ಟಿ ಚಿನ್ನದ ಗಣಿಯಲ್ಲಿ ಭೂಕುಸಿತ – ಕಾರ್ಮಿಕ ಸಾವು, ನಾಲ್ವರಿಗೆ ಗಂಭೀರಗಾಯ Janashakthi Media