- ಸಿಬಿಐ ಅಧಿಕಾರಿಗಳ ವಿರುದ್ಧ ಆಕ್ರೋಶ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳ ಪರಿಶೀಲನೆ ಮುಂದುವರಿದಿದೆ. ಈ ನಡುವೆ ಡಿಕೆಶಿ ನಿವಾಸದ ಮುಂದೆ ಹೈಡ್ರಾಮ ನಡೆಯುತ್ತಿದ್ದು, ಬೆಂಬಲಿಗರು ಹಾಗೂ ಪೊಲೀಸರ ನಡುವೆ ವಾಗ್ದಾದ ನಡೆದಿದೆ.
ಇದನ್ನೂ ಓದಿ: ಡಿಕೆಶಿ ಸಹೋದರರ ಮನೆ ಮೇಲೆ ಸಿಬಿಐ ದಾಳಿ
ಡಿಕೆಶಿ ಬೆಂಗಳೂರಿನ ಸದಾಶಿವನಗರ ನಿವಾಸದ ಮುಂದೆ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಜಮಾಯಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಸಿಬಿಐ ಅಧಿಕಾರಿಗಳು ರಾಜಕೀಯ ಉದ್ದೇಶದಿಂದ ದಾಳಿ ನಡೆಸಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ: ಡಿಕೆಶಿಗೆ ಸಂಬಂಧಿಸಿದ 14 ಕಡೆ ಸಿಬಿಐ ದಾಳಿ
ಈ ವೇಳೆ ಕಾರ್ಯಕರ್ತರು ಹಾಗೂ ಸ್ಥಳದಲ್ಲಿ ಭದ್ರತೆಯಾಗಿ ನಿಯೋಜನೆ ಮಾಡಿರುವ ಪೊಲೀಸರ ನಡುವೆ ವಾಗ್ದಾದವೂ ನಡೆಯಿತು. ಸ್ಥಳದಲ್ಲಿ ಜಮಾಯಿಸಿರುವ ಕಾರ್ಯಕರ್ತರನ್ನು ತೆರವುಗೊಳಿಸುವ ಪ್ರಯತ್ನವೂ ನಡೆಯುತ್ತಿದೆ.
ಸಿಬಿಐ ಅಧಿಕಾರಿಗಳ ವಿರುದ್ಧ ಆಕ್ರೋಶ
ದಾಳಿ ನಡೆಸಲು ಬಂದ ಸಿಬಿಐ ಅಧಿಕಾರಿಗಳ ವಿರುದ್ಧ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು. ಮನೆಯಿಂದ ಹೊರಬಂದ ಇಬ್ಬರು ಅಧಿಕಾರಿಗಳ ವಿರುದ್ಧ ಕಾರ್ಯಕರ್ತನೊಬ್ಬ ಗರಂ ಆದ. ಕಾಂಗ್ರೆಸ್ ಮುಖಂಡರನ್ನು ಏಕೆ ಟಾರ್ಗೆಟ್ ಮಾಡಲಾಗುತ್ತಿದೆ, ಬಿಜೆಪಿ ವಿರುದ್ಧ ದಾಳಿ ಯಾಕಿಲ್ಲ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಆದರೆ ಅಧಿಕಾರಿಗಳು ಇದಕ್ಕೆ ಪ್ರತಿಕ್ರಿಯೆ ನೀಡದೆ ಸುಮ್ಮನಾದರು.