ಡಿ ಕೆ ಶಿವಕುಮಾರ್ ವಿರುದ್ಧದ ಪ್ರಕರಣ ರದ್ದುಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಆದಾಯ ತೆರಿಗೆ ಇಲಾಖೆ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಿದ್ದ ಹೈಕೋರ್ಟ್‌ ಆದೇಶವನ್ನು ಸುಪ್ರೀಂಕೋರ್ಟ್‌ ಇಂದು ತಡೆಯಾಜ್ಞೆ ನೀಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ನೇತೃತ್ವದ ದ್ವಿಸದಸ್ಯ ಪೀಠ ಹೈಕೋರ್ಟ್‌ ಆದೇಶವನ್ನು ತಡೆ ನೀಡಿದೆ. 2018ರಲ್ಲಿ ಡಿಕೆ ಶಿವಕುಮಾರ ಬಳಿ ಐಟಿ ದಾಖಲೆ ವಶಪಡಿಸಿಕೊಳ್ಳಲಾಗಿತ್ತು. ಈಗಲ್‌ಟನ್ ರೆಸಾರ್ಟ್‌ನಲ್ಲಿ ಐಟಿ ಅಧಿಕಾರಿಗಳಿಂದ ಜಪ್ತಿ ಮಾಡಲಾಗಿತ್ತು.

ಡಿಕೆ ಶಿವಕುಮಾರ್‌ ಅವರಿಗೆ ಸೇರಿದ್ದ ಸ್ಥಳದಿಂದ ಹಣಕಾಸು ವರ್ಗಾವಣೆ ದಾಖಲೆ ವಶಪಡಿಸಿಕೊಳ್ಳಲಾಗಿತ್ತು. ಆದರೆ ಐಟಿ ತನಿಖೆಗೆ ಹೈಕೋರ್ಟ್‌ ತಡೆ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.

ಈ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ನೋಟಿಸ್‌ ಜಾರಿ ಮಾಡಿದೆ. ಅಷ್ಟೇ ಅಲ್ಲದೇ 4 ವಾರದ ಒಳಗಡೆ ಹೊಸ ಅರ್ಜಿ ಸಲ್ಲಿಕೆ ಮಾಡುವಂತೆ ಐಟಿಗೆ ನ್ಯಾಯಾಲಯ ಸೂಚಿಸಿದೆ.

2017ರ ಆಗಸ್ಟ್ 2ರಂದು ಡಿಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿಯಾಗಿತ್ತು. ಈ ಸಂದರ್ಭದಲ್ಲಿ ಬಿಡದಿಯ ಈಗಲ್ಟನ್‌ ರೆಸಾರ್ಟ್‌ನಲ್ಲಿ ಗುಜರಾತಿನ 44 ಮಂದಿ ಕಾಂಗ್ರೆಸ್‌ ಶಾಸಕರ ಯೋಗಕ್ಷೇಮದ ಉಸ್ತುವಾರಿಯನ್ನು ಡಿ.ಕೆ. ಶಿವಕುಮಾರ್‌ ನೋಡಿಕೊಳ್ಳುತ್ತಿದ್ದರು. ಈ ಮಾಹಿತಿ ತಿಳಿದ ಅಧಿಕಾರಿಗಳು ಅಲ್ಲಿಯೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.

ಪರಿಶೀಲನೆ ವೇಳೆ ಕೆಲವು ಮಹತ್ವದ ದಾಖಲೆಗಳು ಲಭ್ಯವಾಗಿತ್ತು. ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ್ದು ಎನ್ನಲಾದ ಚೀಟಿಯನ್ನು ಅವರು ಹರಿದು ಹಾಕಿದ್ದರು. ಆ ಪೇಪರ್‌ನಲ್ಲಿ ಹಣಕಾಸಿನ ವಹಿವಾಟಿಗೆ ಸಂಬಂಧಿಸಿದ್ದ ದಾಖಲೆ ಇತ್ತು ಎಂದು ಐಟಿ ಹೇಳಿತ್ತು. ಅಕ್ರಮ ವ್ಯವಹಾರ, ಡಿಜಿಟಲ್ ಕೇಬಲ್ ಜತೆಗಿನ ವ್ಯವಹಾರಕ್ಕೆ ಸಂಬಂಧಿಸಿದ ದಾಖಲೆ ಇದರಲ್ಲಿ ಇತ್ತು ಎನ್ನುವುದು ಐಟಿಯ ಆರೋಪವಾಗಿತ್ತು. ಈ ಸಂಬಂಧ ಸಾಕ್ಷ್ಯನಾಶ ಮಾಡಿದ ಆರೋಪ ಹೊರಿಸಿ ಐಟಿ ಅಧಿಕಾರಿಗಳು ಕೇಸು ದಾಖಲಿಸಿದ್ದರು.

ಈ ಪ್ರಕರಣ 2019ರಲ್ಲಿ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದು ಮಾಡಿತ್ತು. ನ್ಯಾಯಾಲಯದ ಆದೇಶ ಪ್ರಶ್ನಿಸಿ ಆದಾಯ ತೆರಿಗೆ ಇಲಾಖೆಯು ಹೈಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಅಲ್ಲಿಯೂ ಅರ್ಜಿಯನ್ನು ತಿರಸ್ಕರಗೊಂಡಿದ್ದವು.

Donate Janashakthi Media

Leave a Reply

Your email address will not be published. Required fields are marked *