ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ವಿವಾಹವಾಗುವುದಾಗಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧ, ಇದೀಗ ಡಿಎನ್ಎ ಪರೀಕ್ಷೆಯ ವರದಿ ಹೊರಬಂದಿದೆ. ವರದಿಯಲ್ಲಿ ಮಗುವಿನ ಮತ್ತು ಬಿಜೆಪಿ ನಾಯಕನ ಪುತ್ರ ಆರೋಪಿ ಕೃಷ್ಣನ ರಕ್ತದ ಮಾದರಿ ಹೊಂದಿಕೆಯಾಗಿದ್ದು, ಆತನೇ ಮಗುವಿನ ತಂದೆ ಎಂಬುದು ಸ್ಪಷ್ಟಗೊಂಡಿದೆ.
ಈ ಮಾಹಿತಿಯನ್ನು ವಿಶ್ವಕರ್ಮ ಮಹಾ ಮಂಡಲದ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಅವರು ಶನಿವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಬಹಿರಂಗಪಡಿಸಿದರು.
ಬಿಜೆಪಿ ಮುಖಂಡ ಪಿಜಿ ಜಗನ್ನಿವಾಸ್ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ. ರಾವ್ ಮಗುವಿನ ತಂದೆ ಎಂಬ ವರದಿ ಶುಕ್ರವಾರ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿರುವ ಬಗ್ಗೆ ಸಂತ್ರಸ್ತೆಯ ಕುಟುಂಬಕ್ಕೆ ತಿಳಿಸಲಾಗಿದೆ ಎಂಬ ಮಾಹಿತಿ ನೀಡಿದ ಅವರು, ಸಮಾಜದ ಬಡ ಹೆಣ್ಣುಮಗಳ ವಿರುದ್ಧ ಅನ್ಯಾಯ ನಡೆದಿದೆ. ಹಿಂದಿನ ಕಾಲದಲ್ಲಿ ಸೀತಾಮಾತೆಗೆ ಅಗ್ನಿ ಪರೀಕ್ಷೆ ನಡೆದಿತ್ತು. ಇಂದಿನ ಕಾಲದಲ್ಲಿ ಡಿಎನ್‌ಎ ಪರೀಕ್ಷೆಯೇ ಅಂತಿಮ ಸತ್ಯ. ಈ ಪ್ರಕರಣದಲ್ಲೂ ವರದಿ ಸ್ಪಷ್ಟವಾಗಿ ಬಂದಿದೆ ಮತ್ತು ಈಗಾಗಲೇ ಕೋರ್ಟ್‌ಗೆ ಸಲ್ಲಿಕೆಯಾಗಿದೆ ಎಂದು ಅವರು ಹೇಳಿದರು. ವಿವಾಹ
ಇದನ್ನೂ ಓದಿ: ತಮ್ಮನ್ನು ಪ್ರಶ್ನಿಸಿದ ಶಿಕ್ಷಣಾಧಿಕಾರಿಗೆ ಶಾಲಾ ಮುಖ್ಯಶಿಕ್ಷಕ ಬೆಲ್ಟ್ ನಲ್ಲಿ ಬಾರಿಸಿ ಹಲ್ಲೆ
“ಪಿಜಿ ಜಗನ್ನಿವಾಸ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ. ರಾವ್ ಸಂತ್ರಸ್ತೆಯೊಂದಿಗೆ ವಿವಾಹವಾಗುವುದು ನಮ್ಮ ಒತ್ತಾಯವಾಗಿದೆ. ಮದುವೆಯಾಗುವುದು ಇಬ್ಬರಿಗೂ ಉತ್ತಮ. ನಮಗೆ ಕೋರ್ಟ್ ಪ್ರಕ್ರಿಯೆ ಬೇಕಾಗಿಲ್ಲ. ಆದರೂ ಈ ವಿಚಾರದಲ್ಲಿ ಕಾನೂನು ತನ್ನ ಮಾರ್ಗದಲ್ಲಿ ಸಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಹಿಂದುತ್ವದ ಬಗ್ಗೆ ಮಾತನಾಡುವ ಆರೆಸ್ಸೆಸ್ , ಬಜರಂಗದಳ, ಶ್ರೀ ರಾಮ ಸೇನೆಗಳು ಹಾಗೂ ಹಿಂದುತ್ವ ಮುಖಂಡರು ಅನ್ನಿಸಿಕೊಂಡ ಕಲ್ಲಡ್ಕ ಪ್ರಭಾಕರ ಭಟ್, ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾ ಅಧ್ಯಕ್ಷರು ಹಿಂದು ಸಮುದಾಯದ ಸಂತ್ರಸ್ತೆಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಸಂತ್ರಸ್ತೆ, ಆಕೆಯ ತಾಯಿ ನಮಿತಾ ಆಚಾರ್ಯ ಮತ್ತು ಸಂಘದ ಪ್ರಮುಖರು ಉಪಸ್ಥಿತರಿದ್ದರು.
ಇದನ್ನೂ ನೋಡಿ: ಕೋಲಾರ | ಅಂಗೈ ಮೂಳೆ ಮುರಿದು ಆರು ದಿನ ಆದ್ರು ಚಿಕಿತ್ಸೆ ನೀಡದ ಸರ್ಕಾರಿ ಆಸ್ಪತ್ರೆ Janashakthi Media
