ಜಾನ್‌ಪುರ: ಜಿಲ್ಲಾ ಆಸ್ಪತ್ರೆಯ ವೈದ್ಯರೊಬ್ಬರು ಮುಸ್ಲಿಂ ಎನ್ನುವ ಕಾರಣದಿಂದ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿರುವ ವೀಡಿಯೋ ಸಾಮಾಜಿಕ ಜಲತಾಣದಲ್ಲಿ ಹರಿದಾಡಿದ್ದೂ, ಇದೀಗ ಉತ್ತರ ಪ್ರದೇಶದ ಜೌನ್‌ಪುರದಲ್ಲಿ ವಿವಾದ ಭುಗಿಲೆದ್ದಿದೆ. ಉತ್ತರ
ಏನಿದು ವಿವಾದ?
ಅಂದಹಾಗೆ ಬಿರಿಬರಿ ಗ್ರಾಮದ ನಿವಾಸಿ ಶಮಾ ಪರ್ವೀನ್ ಎಂಬ ಮಹಿಳೆಯನ್ನು ಹೆರಿಗೆಗಾಗಿ ಸೆಪ್ಟೆಂಬರ್ 30 ರಂದು ರಾತ್ರಿ 9.30 ರ ಸುಮಾರಿಗೆ ಜಿಲ್ಲಾ ಮಹಿಳಾ ಆಸ್ಪತ್ರೆಗೆ ಕರೆತರಲಾಗಿತ್ತು. ಆ ರಾತ್ರಿ ಕರ್ತವ್ಯದಲ್ಲಿದ್ದ ಮಹಿಳಾ ವೈದ್ಯೆಯೊಬ್ಬರು ಆಕೆಯನ್ನು ಪರೀಕ್ಷಿಸಿದ್ದಾರೆ. ಅಕ್ಟೋಬರ್ 1 ರಂದು, ಕರ್ತವ್ಯದಲ್ಲಿದ್ದ ವೈದ್ಯರು, ಮುಸ್ಲಿಂ ಮಹಿಳೆಗೆ ಚಿಕಿತ್ಸೆ ನೀಡುವುದಿಲ್ಲ ಹೇಳಿದ್ದಾಗಿ ಶಮಾ ಪರ್ವೀನ್ ಆರೋಪಿಸಿದ್ದಾರೆ.
“ನಿನ್ನ ಹೆರಿಗೆ ಮಾಡುವುದಿಲ್ಲ, ಆಪರೇಷನ್ ಥಿಯೇಟರ್ ನಿಂದ ಆಕೆಯನ್ನು ಕರೆದುಕೊಂಡು ಹೋಗಿ ಎಂದು ನರ್ಸ್ ಗೆ ನಿರ್ದೇಶಿಸಿದ್ದಾರೆ. ಅಲ್ಲದೇ ಬೇರೆ ಎಲ್ಲಾದರೂ ಕರದುಕೊಂಡು ಹೋಗಿ” ಎಂದು ಕುಟುಂಬದ ಸದಸ್ಯರಿಗೆ ಹೇಳುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ಇದನ್ನೂ ಓದಿ: ಭವಿಷ್ಯದ ಅನಿಶ್ಚಿತತೆಯೂ ಯುವಜಗತ್ತಿನ ಆತಂಕವೂ ಉತ್ತರ
ರಾಜಕೀಯ ನಾಯಕರ ಆಕ್ರೋಶ
ಮಚ್ಲಿಶಹರ್‌ನ ಸಮಾಜವಾದಿ ಪಕ್ಷದ ಶಾಸಕಿ ರಾಗಿಣಿ ಸೋಂಕರ್, ಪ್ರಕರಣವನ್ನು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿ ವೈದ್ಯರ ವಿರುದ್ಧ ಕ್ರಮಕೈಗೊಳ್ಳುವ ಬದಲು ಪತ್ರಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವುದು ಸರಕಾರ ಸತ್ಯವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ.
ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್ ಮುಖಂಡ ವಿಕೇಶ್ ಉಪಾಧ್ಯಾಯ ವಿಕ್ಕಿ, “ಸಮಾಜದ ಎಲ್ಲಾ ವರ್ಗಗಳ ಸೇವೆ ಮಾಡುವುದಾಗಿ ಪ್ರತಿಜ್ಞೆ ಮಾಡಿದ ವೈದ್ಯರು ಧರ್ಮದ ಆಧಾರದ ಮೇಲೆ ಚಿಕಿತ್ಸೆ ನಿರಾಕರಿಸಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಟೀಕಿಸಿದ್ದಾರೆ. ಬಿಜೆಪಿ ವಕ್ತಾರ ಅವ್ನಿಶ್ ತ್ಯಾಗಿ, ಪ್ರತಿಪಕ್ಷದ ಹೇಳಿಕೆಗಳನ್ನು ಆಧಾರರಹಿತವೆಂದು ತಳ್ಳಿಹಾಕಿದ್ದಾರೆ.
ಇದನ್ನೂ ನೋಡಿ: ಮೈಸೂರು ದಸರಾ | ದರ್ಗಾಕ್ಕೆ ಭೇಟಿ ನೀಡುತ್ತವೆ ಆನೆಗಳು! ಏನಿದರ ಹಿನ್ನಲೆ? Janashakthi Media #MysuruDasara ಉತ್ತರ
