ಬೇಡಿಕೆಗಳನ್ನು ಈಡೇರಿಸುವ ಭರವಸೆ: ಮುಷ್ಕರ ಹಿಂಪಡೆದ ವೈದ್ಯರು

ಬೆಂಗಳೂರು: ರಾಜ್ಯ ಸರಕಾರವು ವೈದ್ಯರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿರುವುದರಿಂದ ಮಾ.11ರಿಂದ ನಡೆಯಬೇಕಿದ್ದ ಸರಕಾರಿ ವೈದ್ಯರ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದು ಮಾರ್ಚ್‌ 10ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಸರಕಾರಿ ವೈದ್ಯಾಕಾರಿಗಳ ಸಂಘದ ಅಧ್ಯಕ್ಷ ಡಾ.ರವೀಂದ್ರನಾಥ ಎಂ.ಮೇಟಿ ತಿಳಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯರು, ನೌಕರರು ಕರ್ತವ್ಯ ಬಹಿಷ್ಕರಿಸಿ ಮಾ.11ರಿಂದ ಮುಷ್ಕರ ನಡೆಸಲು ಉದ್ದೇಶಿಸಲಾಗಿತ್ತು.

ಇದನ್ನೂ ಓದಿ: ನೇಮಕಾತಿ ಅಕ್ರಮಗಳ ಪ್ರಕರಣ: ಆರ್‌. ಡಿ. ಪಾಟೀಲ್‌ಗೆ ಜಾಮೀನು ನೀಡಲು ಹೈಕೋರ್ಟ್​ ನಕಾರ

ಆದರೆ ನಮ್ಮ ಬೇಡಿಕೆಗಳ ಈಡೇರಿಕೆ ಬಗ್ಗೆ ಸರಕಾರವು ಸಕಾರತ್ಮಕವಾಗಿ ಪ್ರತಿಕ್ರಿಯಿಸಿದೆ. ಹೀಗಾಗಿ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ ಎಂದರು.

ಇದನ್ನೂ ನೋಡಿ: ಮನರೇಗಾ ಗ್ರಾಮೀಣ ಮಹಿಳೆಯರ ಜೀವನಾಡಿ; ಯೋಜನೆ ದುರ್ಬಲಗೊಳಿಸಬೇಡಿ – ದೇವಿ Janashakthi Media

Donate Janashakthi Media

Leave a Reply

Your email address will not be published. Required fields are marked *