ಬಳ್ಳಾರಿ: ಸ್ವಾತಂತ್ರೋತ್ಸವ ಸಮಾರಂಭದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕುಟುಂಬದ ಹೆಸರಿನಲ್ಲಿ 97 ಎಕರೆ ಜಮೀನು ಒತ್ತುವರಿಯಾಗಿರುವ ಕುರಿತು ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್. ಹಿರೇಮಠ ಹೈಕೋರ್ಟ್ ನಲ್ಲಿ ದಾವೆ ಹೂಡಿದ್ದಾರೆ. ಹೈಕೋರ್ಟ್‌ಗೆ ಸರ್ಕಾರದಿಂದ ಈ ಬಗ್ಗೆ ಅಗತ್ಯ ದಾಖಲೆಗಳನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ. ಕುಮಾರಸ್ವಾಮಿ
ಸರ್ಕಾರಿ ಜಮೀನುಗಳ ಒತ್ತುವರಿಯನ್ನು ಲ್ಯಾಂಡ್ ಬೀಟ್ ಯೋಜನೆ ಮೂಲಕ ಗುರುತಿಸಲು ಕಂದಾಯ ಇಲಾಖೆ ಕ್ರಮ ವಹಿಸಿದೆ. ಈ ಸಂಬಂಧ ಗ್ರಾಮವಾರು ಮಾಹಿತಿ ಸಂಗ್ರಹಿಸಲಾಗುತ್ತಿದೆ. ರಾಜ್ಯದಲ್ಲಿ 4.32 ಲಕ್ಷ ಎಕರೆ ಸರ್ಕಾರಿ ಜಾಗ ಒತ್ತುವರಿಯಾಗಿರುವ ಶಂಕೆ ಇದ್ದು. ಇವುಗಳ ಸ್ಥಳಪರಿಶೀಲನೆಗೆ ಸೂಚಿಸಲಾಗಿದೆ. ಈಗಾಗಲೇ 13.04 ಲಕ್ಷ ಎಕರೆ ಜಮೀನುಗಳಿಗೆ ಗ್ರಾಮ ಲೆಕ್ಕಾಧಿಕಾರಿಗಳು ಭೇಟಿ ನೀಡಿದ್ದಾರೆ.
ಇದನ್ನೂ ಓದಿ: ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಖಂಡಿಸಿ ರೊಚ್ಚಿಗೆದ್ದ ಪ್ರತಿಭಟನಾಕಾರರು – ಆಸ್ಪತ್ರೆಗೆ ನುಗ್ಗಿ ದಾಂಧಲೆ
ಈ ಪೈಕಿ 91 ಸಾವಿರ ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿರುವುದು ‘ಲ್ಯಾಂಡ್ ಬೀಟ್’ ಮೊಬೈಲ್ ತಂತ್ರಾಂಶದ ಮೂಲಕ ತಿಳಿದು ಬಂದಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಜಮೀನುಗಳನ್ನು ವ್ಯಾಪ್ತಿಗೆ ತರಲಾಗುವುದು. ಲ್ಯಾಂಡ್ ಬೀಟ್ ಯೋಜನೆ ಅನುಷ್ಠಾನದಿಂದ ಸರ್ಕಾರಿ ಜಮೀನು ಒತ್ತುವರಿ ಯಾಗದಂತೆ ಶಾಶ್ವತವಾಗಿ ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದಲ್ಲಿ ಖಾಲಿ ಇರುವ 750 ಸರ್ವೇಯರ್ ನೇಮಕಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ. ಎಡಿಎಲ್‌ಆರ್, ಸರ್ವೇಯರ್ ಹುದ್ದೆಗಳ ನೇಮಕಾತಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಸಚಿವರು ತಿಳಿಸಿದರು.
ಇದೇ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ ಸಚಿವರು, ರಾಜ್ಯಕ್ಕೆ ಅನುದಾನ ನೀಡುವಂತೆ ಕೋರಲು ದೆಹಲಿಗೆ ತೆರಳಿ ಕೇಂದ್ರ ನಾಯಕರಿಗೆ ಹೂವಿನಹಾರ, ಶಾಲು ಹಾಕಿ, ಟೋಪಿ ಇಟ್ಟು, ಕೈ ಮುಗಿದರೂ ಅವರ ಮನಸ್ಸು ಕರಗಲಿಲ್ಲ. ನಾವು ಕೊಟ್ಟ ಮನವಿಯನ್ನು ಕಸದ ಬುಟ್ಟಿಗೆ ಎಸೆದರು ಎಂದು ಆರೋಪಿಸಿದರು.
ಇದನ್ನೂ ನೋಡಿ: ಆರ್ಥಿಕವಾಗಿ ಸುಧಾರಿಸುತ್ತಿದ್ದ ಬಾಂಗ್ಲಾದೇಶದಲ್ಲಿ ದಂಗೆ ಉಂಟಾಗಿದ್ದು ಯಾಕೆ? ಇದರ ಹಿಂದೆ ಯಾರ ಕೈವಾಡ ಇದೆ