ಬೆಂಗಳೂರು :ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂದು ಆರೋಪಿಸಿ, ಶ್ರೀರಾಮಸೇನೆ ಕಾರ್ಯಕರ್ತರು ವಾಹನವನ್ನು ತಡೆಹಿಡಿದು, ಬೆಂಕಿ ಹಚ್ಚಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.
ಆಂಧ್ರ ಪ್ರದೇಶದಿಂದ ಗೋಮಾಂಸವನ್ನು ಯಲಹಂಕ ರಾಜ್ಯ ಹೆದ್ದಾರಿ ಮಾರ್ಗವಾಗಿ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದಲ್ಲಿ ಐದು ವಾಹನಗಳನ್ನು ಶ್ರೀ ರಾಮ ಸೇನೆ ಕಾರ್ಯಕರ್ತರು ದೊಡ್ಡಬಳ್ಳಾಪುರ ನಗರದ ಐಬಿ ವೃತ್ತದ ಬಳಿ ಇಂದು ಬೆಳಗ್ಗೆ ತಡೆದಿದ್ದಾರೆ. ಈ ವೇಳೆ ವಾಹನಗಳಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಆ ವಾಹನ ಚಾಲಕರ ತಲೆಯ ಗೋಮಾಂಸವನ್ನು ಇಟ್ಟು ಪ್ರವಾಸಿ ಮಂದಿರ ವೃತ್ತದಲ್ಲಿ ಮೆರವಣಿಗೆ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದೇ ಸಂದರ್ಭದಲ್ಲಿ ಕಾರೊಂದಕ್ಕೆ ಶ್ರೀರಾಮ ಸೇನೆ ಕಾರ್ಯಕರ್ತರು ಬೆಂಕಿ ಹಚ್ಚಿದ್ದು, ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಶ್ರೀರಾಮ ಸೇನೆ
ಈ ಘಟನೆಯಿಂದ ಸ್ಥಳದಲ್ಲಿ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪುಗೂಡಿದ್ದ ಜನರನ್ನು ಚದುರಿಸಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿದ್ದು ಎರಡೂ ಕಡೆಯ ಆರೋಪಿಗಳ ವಿರಚಾರ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಮಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಅನೈತಿಕ ಪೊಲೀಸ್ಗಿರಿ ಸಂಘಪರಿವಾರದವರ ಬಗ್ಗೆ ಪೊಲೀಸರಿಗೆ ಸಾಫ್ಟ್ ಕಾರ್ನರ್ ಯಾಕೆ?
ಅನೈತಿಕ ಪೊಲೀಸ್ ಗಿರಿ : ಅನುಮತಿ ಇಲ್ಲದೆ ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದಲ್ಲಿ ದೂರು ನೀಡಬಹುದಿತ್ತು. ಆದರೆ ವಾಹನವನ್ನು ತಡೆದೆ, ಕಾರಿಗೆ ಬೆಂಕಿ ಹಚ್ಚಿ, ಚಾಲಕರನ್ನು ಊರ ತುಂಬ ಮೆರವಣಿಗೆ ಮಾಡಿಸಿದ್ದು ದುರುಂತ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಅನೈತಿಕ ಪೊಲೀಸ್ ಗಿರಿಯನ್ನು ಹೋಗಲಾಡಿಸಲು ಸರ್ಕಾರ ಮುಂದಾಗಬೇಕು. ಗೃಹಮಂತ್ರಿಗಳು ದೃಢವಾದ ನಿರ್ಧಾರ ಮಾಡಬೇಕು ಎಂಬ ಮಾತುಗಳು ಕೇಳಿ ಬಂದಿವೆ. ಶ್ರೀರಾಮ ಸೇನೆ
ಈ ವಿಡಿಯೋ ನೋಡಿ : ಬಳ್ಳಿ ಮಾತ್ರವಲ್ಲ ಬೇರುಗಳನ್ನು ಕೂಡಾ ನಾಶ ಪಡಿಸಬೇಕು: ಚೈತ್ರ ಕುಂದಾಪುರ ವಂಚನೆ ಹಗರಣದ ಬಗ್ಗೆ ಹೋರಾಟಗಾರರ ಆಗ್ರಹ ಶ್ರೀರಾಮ ಸೇನೆ