ವಿಶ್ವಕಪ್‌ ಪಂದ್ಯ ವೀಕ್ಷಿಸುವ ಮೋದಿಗೆ ಮಣಿಪುರಕ್ಕೆ‌ ಹೋಗಲು ಸಮಯವಿಲ್ಲವೇ: ಜೈ ರಾಮ್‌ ರಮೇಶ್‌

ನವದೆಹಲಿ: ಪ್ರಧಾನಿ ಮೋದಿ ಅವರು ಬಿಡುವು ಮಾಡಿಕೊಂಡು ಕ್ರಿಕೆಟ್‌ ಪಂದ್ಯವನ್ನು ವೀಕ್ಷಿಸಿದ್ದಾರೆ.ಆದರೆ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲು ಅವರಿಗೆ ಸಮಯವಿಲ್ಲ ಎಂದು ಕಾಂಗ್ರೆಸ್‌ ಪ್ರಾಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು ಪ್ರಧಾನಿ ಮೋದಿ ಅಹಮದಾಬಾದ್‌ನಲ್ಲಿ ಕ್ರಿಕೆಟ್‌ ಪಂದ್ಯ ವೀಕ್ಷಿಸಲು ಬಿಡುವು ಮಾಡಿಕೊಂಡರು. ನಾಳೆಯಿಂದ ಅವರು ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್‌ ಅನ್ನು ನಿಂದಿಸಲು ತೊಡಗುತ್ತಾರೆ. ಆದರೆ, ಉದ್ವಿಗ್ನತೆಯಿಂದ ಕೂಡಿರುವ ಮಣಿಪುರಕ್ಕೆ ಭೇಟಿ ನೀಡುವುದು ಸೂಕ್ತ ಎಂಬುದನ್ನು ಅವರು ತಿಳಿದುಕೊಂಡಿಲ್ಲ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೆ ಮೋದಿಯವರ ಆದ್ಯತೆ ಏನೆಂಬುದು ಅವರು ತಿಳದುಕೊಂಡಿಲ್ಲ. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದರೆ ಮೋದಿಯವರ ಆದ್ಯತೆ ಏನೆಂಬುದು ಸ್ಪಷ್ಟವಾಗತ್ತದೆ ಎಂದು ಜೈರಾಮ್‌ ರಮೇಶ್‌  ಹೇಳಿದ್ದಾರೆ.

ಇದನ್ನೂ ಓದಿ: ‘ಕೌಟುಂಬಿಕ ಜೊತೆಗಾರಿಕೆ ಪತ್ರ’ ಗುರುತಿಸಿ: LGBTQ ಹಕ್ಕುಗಳ ಬಗ್ಗೆ ಮದ್ರಾಸ್ ಹೈಕೋರ್ಟ್

ಮಣಿಪುರದಲ್ಲಿ ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದ ಬಳಿಕ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರ ವಿರುದ್ಧ ಪ್ರತಿಪಕ್ಷಗಳು ಟೀಕೆ ಮಾಡುತ್ತಿವೆ.

ಭಾನುವಾರ ನಡೆದ ಅಹಮದಾಬಾದ್‌ನಲ್ಲಿ ಭಾರತ ಆಸ್ಟ್ರೇಲಿಯಾ ನಡುವೆ  ಐಸಿಸಿ ಏಕದಿನ ವಿಶ್ವಕಪ್‌ ಫೈನಲ್‌  ಪಂದ್ಯವನ್ನು‌ ಪ್ರಧಾನಿ ನರೇಂದ್ರ ಮೋದಿ ಅವರು ವೀಕ್ಷಿಸಿದ್ದರು.

ವಿಡಿಯೋ ನೋಡಿ: ಸರ್ಕಾರದ ಕಿವಿ ಹಿಂಡಿದ ಮಾಧ್ಯಮದ ಕತ್ತು ಹಿಸುಕುವ ಕೇಂದ್ರ ಸರ್ಕಾರ – ಸಿದ್ದನಗೌಡ ಪಾಟೀಲ್‌ ಜೊತೆ ಮಾತುಕತೆ

Donate Janashakthi Media

Leave a Reply

Your email address will not be published. Required fields are marked *