ಬೆಳಗಾವಿ: ‘ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ಗೃಹ ಕಾರ್ಮಿಕರಿಗೂ ಕಾರ್ಮಿಕ ಇಲಾಖೆಯಿಂದ ಗುರುತಿನ ಚೀಟಿ ನೀಡಿ, ವಿವಿಧ ಸೌಕರ್ಯ ಕಲ್ಪಿಸಬೇಕು’ ಎಂದು ಗೃಹ ಕಾರ್ಮಿಕರ ಹಕ್ಕುಗಳ ಯೂವಿಯನ್‌ನ ಮುಖಂಡರಾದ ಗೀತಾ ಮೆನನ್ ಒತ್ತಾಯಿಸಿದರು.
ಇಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗ್ರಹ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನವಾದ ವೇತನ ಸಿಗಬೇಕು. ಅವರಿಗೆ ವಾರದ ರಜೆ ಕೊಡಬೇಕು.
ಇಎಸ್‌ಐ, ಪಿಎಫ್ ಸೌಕರ್ಯ ಕಲ್ಪಿಸಬೇಕು. ಸಾಮಾಜಿಕ ಭದ್ರತೆ ಒದಗಿಸಬೇಕು. ಕೆಲಸದ ಸ್ಥಳಗಳಲ್ಲಿ ರಕ್ಷಣೆ ಒದಗಿಸಬೇಕು’ ಎಂದು ಆಗ್ರಹಿಸಿದರು.
‘ನಮ್ಮ ಬೇಡಿಕೆಗಳನ್ನು ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದೇವೆ. ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲೂ ಪ್ರತಿಭಟನೆ ಮಾಡಲು ಯೋಜಿಸುತ್ತಿದ್ದೇವೆ’ ಎಂದರು. ಮುಖಂಡರಾದ ದಿಲೀಪ ಕಾಮತ್, ವೈಶಾಲಿ ಕಮ್ಮಾರ, ರೇಣುಕಾ ಅಷ್ಟೇಕರ ಇತರರಿದ್ದರು.
ಇದನ್ನೂ ನೋಡಿ : ಶೈಲಜಾ ಟೀಚರ್ ಆತ್ಮಕತೆ ಅನುವಾದಿಸುವಾಗ ಅವರೊಟ್ಟಿಗೆ ಹೆಜ್ಜೆ ಹಾಕಿದ ಅನುಭವವಾಯಿತು Janashakthi Media