ಬೆಂಗಳೂರು : ‘ಯಾವುದೇ ಕಾರಣಕ್ಕೂ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು*. ಒಂದು ವೇಳೆ ಒಂದಿಬ್ಬರು ಅನರ್ಹರು ಸೇರಿಕೊಂಡರೂ ಪರವಾಗಿಲ್ಲ, ಅರ್ಹರಿಗೆ ತಪ್ಪಬಾರದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿವಾದ
‘ಬಿಪಿಎಲ್, ಎಪಿಎಲ್ ಅಂದರೇನು ? ಬಡತನ ರೇಖೆಗಿಂತ ಕೆಳಗಿರುವವರು, ಮೇಲಿರುವವರು ಎಂದು. ಬಡವರಿಗೆ ಬಿಪಿಎಲ್ ಕಾರ್ಡ್ ಬಿಟ್ಟು ಹೋಗಬಾರದು’ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಅವರಿಗೆ ಸೂಚಿಸಿದ ಮುಖ್ಯಮಂತ್ರಿ, ‘ಶ್ರೀಮಂತರು, ಆದಾಯ ತೆರಿಗೆ ಕಟ್ಟುವವರು, ಸರ್ಕಾರಿ ನೌಕರರು ಬಿಪಿಎಲ್ ಗೆ ಅರ್ಹರಲ್ಲ. ಅವರಿಗೆ ಎಪಿಎಲ್ ಕೊಡಿ, ಅದಕ್ಕೂ ಕೆಲ ಸವಲತ್ತುಗಳಿವೆ’ ಎಂದರು.
ಇದನ್ನೂ ಓದಿ : ಗ್ಯಾರಂಟಿ ಯೋಜನೆ ಬಗ್ಗೆ ಸುಳ್ಳು ಜಾಹೀರಾತು ನೀಡಿದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೇಸ್ – ಡಾ. ಜಿ.ಪರಮೇಶ್ವರ್
ಬಿಪಿಎಲ್ ಕಾರ್ಡ್ ಹೊಂದಿದವರು ಒಬ್ಬರೇ ಒಬ್ಬರು ಕೂಡ ಬಿಟ್ಟು ಹೋಗಬಾರದು. ಅರ್ಹರು ಅರ್ಜಿ ಕೊಟ್ಟರೆ ಅಂತವರಿಗೆ ಬಿಪಿಎಲ್ ಕಾರ್ಡ್ ಕೊಡುತ್ತೇವೆ. ಬಿಜೆಪಿಯಿಂದ ನಾವು ಪಾಠ ಕಲಿಯಬೇಕಾಗಿಲ್ಲ. ಕೆಲವರು ಬಿಪಿಎಲ್ ಕಾರ್ಡ್ ರದ್ದು ಅಂತ ಹೇಳುತ್ತಿದ್ದಾರೆ. ನಾವು ಬಿಪಿಎಲ್ ರದ್ದು ಮಾಡುತ್ತಿದ್ದೀವಾ? ಇಲ್ಲ ಯಾವುದೇ ಕಾರಣಕ್ಕೂ ರದ್ದು ಮಾಡುತ್ತಿಲ್ಲ. ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
ಬಿಪಿಎಲ್ ಕಾರ್ಡ್ ಗೊಂದಲ ವಿಚಾರ ಪ್ರಸ್ತಾಪಿಸಿದ ಕೆ. ಎಚ್. ಮುನಿಯಪ್ಪ. ‘ಬಿಜೆಪಿಯವರು ಬಿಪಿಎಲ್ ಕಾರ್ಡ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಇವರಿಗೆ ಬಡವರಿಗೆ ಅಕ್ಕಿ ಕೊಡೋದು ಸಮಾಧಾನ ಇಲ್ಲ. ಶೇ 20- 25 ಬಿಪಿಎಲ್ ಗೆ ಅರ್ಹರಲ್ಲದವರು ಸೇರಿಕೊಂಡಿದ್ದಾರೆ. ಬಡವರಲ್ಲದವರು ಅರ್ಹರಲ್ಲದವರೂ ಕೂಡ ಸೇರಿಕೊಂಡಿದ್ದಾರೆ’ ಎಂದರು.
‘ರಾಜ್ಯದಲ್ಲಿ ಶೇ 80ರಷ್ಟು ಬಡವರ ಪ್ರಮಾಣ ಇದೆ. ಇದು ಸಾಧ್ಯವೇ? ರಾಜ್ಯದಲ್ಲಿ ಶೇ 80ರಷ್ಟು ಬಡವರು ಇದ್ದಾರಾ ? ಯಾವುದೇ ಕಾರಣಕ್ಕೂ ಬಿಪಿಎಲ್ ರದ್ದು ಮಾಡುವುದಿಲ್ಲ. ಇದಕ್ಕೆ ರಾಜಕೀಯ ಬೆರೆಸಿ ದೊಡ್ಡ ಗದ್ದಲ ಮಾಡ್ತಿದ್ದಾರೆ. ಯಾರು ಬಡತನ ರೇಖೆಗಿಂತ ಕೆಳಗಿದ್ದಾರೆ, ಮೇಲಿದ್ದಾರೆಂಬ ಸತ್ಯವಾದ ಮಾಹಿತಿ ಹೊರಗೆ ಬಿಡ್ತೇನೆ. ಬಿಪಿಎಲ್ ನವರು ಯಾರೂ ಕೂಡ ಭಯಪಡಬೇಕಿಲ್ಲ. ನಿಜವಾದ ಬಿಪಿಎಲ್ ನವರಿಗೆ ಯಾರಿಗೂ ತೊಂದರೆ ಆಗುವುದಿಲ್ಲ’ ಎಂದರು.
ಇದನ್ನೂ ನೋಡಿ : ಸಿದ್ದರಾಮಯ್ಯ ಸರ್ಕಾರ ವಕ್ಫ್ ಪ್ರಕರಣವನ್ನು ಸಮರ್ಥವಾಗಿ ನಿಭಾಯಿಸಲು ಸೋತಿದ್ದು ಹೇಗೆ? Janashakthi Media